ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದ ಆಟಗಾರರು ಬೆವರು ಹರಿಸಿದ್ದಾರೆ. ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಇಂದು ಅಭ್ಯಾಸ ಸೆಷನ್‌ನಲ್ಲಿ ಭಾಗವಹಿಸಿದೆ.
ವಾಂಖೆಂಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಉತ್ಸಾಹದಿಂದ ಕಠಿಣ ಅಭ್ಯಾಸದಲ್ಲಿ ತೊಡಗಿದರು. ಅಭ್ಯಾಸ ಅವಧಿಯಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾ ಆಟಗಾರರ ಫೋಟೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಅವರು ನೆಟ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ್ದಾರೆ. ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಆಕಾಶ್ ದೀಪ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸ ಮಾಡಿದ್ದಾರೆ. ಆದರೆ ಧ್ರುವ್ ಜುರೆಲ್ ಮತ್ತು ಅಕ್ಸರ್ ಪಟೇಲ್ ಬಿರುಸಿನ ಫೀಲ್ಡಿಂಗ್ ಅಭ್ಯಾಸ ನಡೆಸಿದ್ದು, ಜಸ್ಪ್ರೀತ್ ಬುಮ್ರಾ ಕೂಡ ಬೇಸ್‌ಬಾಲ್ ಆಡುತ್ತಿರುವ ಫೋಟೋಗಳು ಭಾರೀ ಸದ್ದು ಮಾಡುತ್ತಿವೆ.
ವಾಂಖೆಂಡೆ ಟೆಸ್ಟ್ ಪಂದ್ಯಕ್ಕೂ ಮುನ್ನ ಬುಧವಾರ ಭಾರತ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. 'ವಾಂಖೆಡೆಯಲ್ಲಿ ವೇಗದ ಬೌಲರ್‌ಗಳಿಗೆ ಯಾವಾಗಲೂ ಅನುಕೂಲಕರವಾಗಿದೆ ಎಂದುಕೊಂಡಿದ್ದೇನೆ. ವಿಶೇಷವಾಗಿ ಮುಂಬೈನಲ್ಲಿ ಚಳಿಗಾಲದ ಹವಾಮಾನವು ಉತ್ತಮವಾಗಿಲ್ಲ. ಆದರೆ ಸ್ವಲ್ಪ ತೇವಾಂಶ ಇದ್ದಿ, ಬೆಳಿಗ್ಗೆ ಸ್ವಲ್ಪ ಇಬ್ಬನಿ ಇರುತ್ತದೆ. ಆದ್ದರಿಂದ ಮೊದಲ ಸೆಷನ್‌ನಲ್ಲಿ ಸ್ವಲ್ಪ ಚೆಂಡು ಸ್ವಿಂಗ್ ಆಗುವ ಸಾಧ್ಯತೆಯಿದೆ. ಇದೀಗ ಪಿಚ್ ಆವರಿಸಿರುವ ಕಾರಣ ನನಗೆ ಖಚಿತವಿಲ್ಲ. ಆದರೆ ಪಿಚ್ ಗಟ್ಟಿಯಾಗಿದ್ದರೆ, ಸ್ವಲ್ಪ ಸ್ವಿಂಗ್ ಇರುತ್ತದೆ. ತವರಿನ ಸರಣಿಯನ್ನು ಕಳೆದುಕೊಂಡಿರುವ ಭಾರತ ತಂಡ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.
12 ವರ್ಷಗಳ ಬಳಿಕ ತವರಿನಲ್ಲಿ ಟೀಮ್ ಇಂಡಿಯಾ ಟೆಸ್ಟ್ ಸರಣಿ ಸೋತಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ನ್ಯೂಜಿಲೆಂಡ್ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ
2-0 ಅಂತರದಲ್ಲಿ ಸರಣಿಯನ್ನು ಗೆದ್ದು ಬೀಗಿದೆ. ಇದೀಗ ಮೂರನೇ ಟೆಸ್ಟ್ ಪಂದ್ಯ ಮುಂಬೈನ ವಾಂಖೆಂಡೆಯಲ್ಲಿ ನಡೆಯಲಿದ್ದು, ಕ್ಲೀನ್ ಸ್ವೀಪ್ ತಪ್ಪಿಸಿಕೊಳ್ಳಲು ಭಾರತ ತಯಾರಾಗುತ್ತಿದೆ.