ಕೊಹ್ಲಿ- ರೋಹಿತ್ 2027ರ ಏಕದಿನ ವಿಶ್ವಕಪ್ ಆಡ್ತಾರಾ?; ಗಂಭೀರ್ ಹೇಳಿದ್ದೇನು?
ಜುಲೈ 22 ಸೋಮವಾರ, ಟೀಮ್ ಇಂಡಿಯಾದ ಹೆಡ್ ಕೋಚ್ ಆದ ಬಳಿಕ ಗೌತಮ್ ಗಂಭೀರ್ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮುಂಬೈನಲ್ಲಿ ನಡೆದ ಈ ಪತ್ರಿಕಾಗೋಷ್ಠಿಯಲ್ಲಿ ಗೌತಮ್ ಗಂಭೀರ್ ಅವರೊಂದಿಗೆ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೂಡ ಉಪಸ್ಥಿತರಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಗೌತಮ್ ಗಂಭೀರ್ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು 2027ರ ಏಕದಿನ ವಿಶ್ವಕಪ್ ಆಡುವ ಬಗ್ಗೆ ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದಾರೆ.

ಮುಂಬರುವ ವಿಶ್ವಕಪ್ ಆಡ್ತಾರಾ ಕೊಹ್ಲಿ- ರೋಹಿತ್?
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, 'ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದಿದ್ದು, ವಿಶ್ವ ದರ್ಜೆಯ ಬ್ಯಾಟರ್ಸ್‌ಗಳಾಗಿದ್ದಾರೆ. ಯಾವುದೇ ತಂಡವು ಇಬ್ಬರನ್ನೂ ಸೇರಿಸಿಕೊಳ್ಳಲು ಬಯಸುತ್ತದೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಅಥವಾ ಏಕದಿನ ವಿಶ್ವಕಪ್‌ಗಳಲ್ಲಿ ಏನು ಮಾಡಬಹುದು ಎಂಬುದನ್ನು ತೋರಿಸಿದ್ದಾರೆ. ಮುಖ್ಯವಾಗಿ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಆಸ್ಟ್ರೇಲಿಯಾ ಪ್ರವಾಸ (2024-25 ಟೆಸ್ಟ್ ಸರಣಿ)ಕ್ಕೆ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ 2027ರ ವಿಶ್ವಕಪ್ ವರೆಗೂ ಫಿಟ್ ನೆಸ್ ಕಾಯ್ದುಕೊಳ್ಳಬಹುದು ಎಂಬ ಭರವಸೆ ಇದೆ ಎಂದು ಕೊಹ್ಲಿ ಮತ್ತು ರೋಹಿತ್ ಬಗ್ಗೆ ಗೌತಮ್ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.
ಕೊಹ್ಲಿ ಮತ್ತು ರೋಹಿತ್ ಅವರು ವಿಶ್ವಕಪ್ ಆಡುವುದು ತೀರಾ ವೈಯಕ್ತಿಕ ನಿರ್ಧಾರ. ಅವರಲ್ಲಿ ಎಷ್ಟು ಕ್ರಿಕೆಟ್ ಉಳಿದಿದೆ ಎಂದು ನಾನು ಹೇಳಲಾರೆ. ಅಂತಿಮವಾಗಿ ಅದು ಅವರ ಮೇಲೂ ಅವಲಂಬಿತವಾಗಿರುತ್ತದೆ. ಇದು ತಂಡದ ಯಶಸ್ಸಿಗೆ ಆಟಗಾರರು ಎಷ್ಟು ಕೊಡುಗೆ ನೀಡಬಹುದು ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.
ಏಕೆಂದರೆ ಅಂತಿಮವಾಗಿ ತಂಡವು ಮುಖ್ಯವಾಗಿದೆ. ಆದರೆ ವಿರಾಟ್ ಮತ್ತು ರೋಹಿತ್ ಏನು ಮಾಡಬಹುದು ಎಂಬುದನ್ನು ನೋಡಿದರೆ, ಅವರಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಇದೆ. ಇಂತಹ ಪರಿಸ್ಥಿತಿಯಲ್ಲಿ ವಿಶ್ವ ದರ್ಜೆಯ ಆಟಗಾರರನ್ನು ತಂಡದಲ್ಲಿ ಸಾಧ್ಯವಾದಷ್ಟು ಕಾಲ ಇರಿಸಿಕೊಳ್ಳಲು ಬಯಸುತ್ತೇವೆ ಎಂದು ಗೌತಮ್ ಹೇಳಿದ್ದಾರೆ.
ಬುಮ್ರಾ ಜವಾಬ್ದಾರಿ ಹೊರೆ ನಿರ್ವಹಿಸಬೇಕು
ಇದೇ ವೇಳೆ ಟೀಮ್ ಇಂಡಿಯಾ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಮಾತನಾಡಿದ ಗೌತಮ್ ಗಂಭೀರ್, ಕಳೆದ ತಿಂಗಳು ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರನಿಗೆ ಕೆಲಸದ ಹೊರೆಯನ್ನು ನಿರ್ವಹಿಸುವುದು ಮುಖ್ಯ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications