For Quick Alerts
ALLOW NOTIFICATIONS  
For Daily Alerts
 

Mitchell Starc: ಪರ್ತ್ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಕೆಣಕಿದ ಬಗ್ಗೆ ಸ್ಟಾರ್ಕ್ ಹೇಳಿದ್ದೇನು?

ಅಡಿಲೇಡ್‌ನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿವೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಆಸ್ಟ್ರೇಲಿಯಾ ತಂಡವನ್ನು ಸೋಲಿಸುವುದು ಭಾರತಕ್ಕೆ ಸವಾಲಾಗಿದೆ. ಇದಕ್ಕೂ ಮುನ್ನ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಮತ್ತು ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ನಡುವಿನ ಕಾಳಗ ಎಲ್ಲರ ಗಮನ ಸೆಳೆದಿತ್ತು.

ಪರ್ತ್ ಟೆಸ್ಟ್ ಪಂದ್ಯದಲ್ಲಿ ಮಿಚೆಲ್ ಸ್ಟಾಕ್ ಅವರನ್ನು ಯಶಸ್ವಿ ಜೈಸ್ವಾಲ್ ಕೆಣಕಿದ್ದರು. 'ನೀನು ತುಂಬಾ ಸ್ಲೋ ಬೌಲಿಂಗ್ ಮಾಡುತ್ತೀಯಾ' ಎಂದು ಮಿಚೆಲ್ ಸ್ಟಾರ್ಕ್‌ಗೆ ಟಕ್ಕರ್ ಕೊಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿತ್ತು. ಇದೀಗ ಈ ಕುರಿತು ಮಿಚೆಲ್ ಸ್ಟಾರ್ಕ್ ಮೌನ ಮುರಿದ್ದಾರೆ.

What did Mitchell Starc say about the Yashasvi Jaiswal triggering

ಮೌನ ಮುರಿದ ಸ್ಟಾರ್ಕ್‌

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಬಾರಿಸಿದ್ದರು. ಮೊದಲ ಇನಿಂಗ್ಸ್‌ನಲ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಲೇ 161 ರನ್ ಗಳಿಸಿದರು. ಈ ಇನ್ನಿಂಗ್ಸ್‌ನ ಆಧಾರದ ಮೇಲೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ 295 ರನ್‌ಗಳಿಂದ ಗೆಲುವು ಸಾಧಿಸಿತು.

ಯಶಸ್ವಿ ಜೈಸ್ವಾಲ್ ಬಗ್ಗೆ ಗುಣಗಾನ ಮಾಡಿದ್ದಾರೆ. ಜೈಸ್ವಾಲ್ 'ಫಿಯರ್‌ಲೆಸ್' ಯುವ ಆಟಗಾರ ಎಂದು ಹೊಗಳಿದ್ದಾರೆ. ಇದೇ ವೇಳೆ ಸ್ಟಾರ್ಕ್‌ ಅವರನ್ನು ಜೈಸ್ವಾಲ್ ಕೆಣಕಿದರ ಬಗ್ಗೆಯೂ ಕೇಳಿದಾಗ 'ನಿಜವಾಗಿಯೂ ಜೈಸ್ವಾಲ್ ಹೇಳಿರುವುದು ನನಗೆ ಕೇಳಿಸಿರಲಿಲ್ಲ. ಈ ಬಗ್ಗೆ ನಾನು ಹೆಚ್ಚೇನು ಮಾತನಾಡಲು ಹೋಗುವುದಿಲ್ಲ. ಬಹುಶಃ ಹಿಂದೆ ತುಂಬಾ ವೇಗವಾಗಿ ಬೌಲಿಂಗ್ ಮಾಡುತ್ತಿದ್ದೆ' ಎಂದು ನಗುತ್ತಲೇ ಸ್ಟಾರ್ಕ್‌ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಭಾರತದ ಪರ ಜೈಸ್ವಾಲ್ ಹೆಚ್ಚಾಗಿ ಕ್ರಿಕೆಟ್ ಆಡುವ ಮೂಲಕ ಯಶಸ್ಸು ಸಾಧಿಸಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತವಾಗಿ ಆಡಿದರು. ಅವರ ಆಸ್ಟ್ರೇಲಿಯಾ ಪಿಚ್‌ಗಳ ಬಗ್ಗೆ ಚೆನ್ನಾಗಿ ಅರ್ಥಮಾಡಿಕೊಂಡು ಉತ್ತಮವಾಗಿ ಆಡುತ್ತಿದ್ದಾರೆ ಎಂದು ಸ್ಟಾರ್ಕ್‌ ಹೇಳಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2023-25ರ ಆವೃತ್ತಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ‌ ಯಶಸ್ವಿ ಪಾತ್ರರಾಗಿದ್ದಾರೆ. ಅವರು ಇಲ್ಲಿಯವರೆಗೆ 1500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಷ್ಟೇ ಅಲ್ಲ, ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನೂ ಮಾಡಿದ್ದಾರೆ. ಇದರ ಜೊತೆಗೆ ಅವರು ಮತ್ತೊಂದು ಸಾಧನೆ ಮಾಡುವ ಅವಕಾಶವನ್ನು ಹೊಂದಿದ್ದಾರೆ.

ಜೈಸ್ವಾಲ್ ಒಂದೇ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ 40 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಡಿಲೇಡ್ ಟೆಸ್ಟ್‌ನಲ್ಲಿ ಈ ಸಾಧನೆ ಮಾಡುವ ಅವಕಾಶ ಅವರಿಗಿದೆ. ಪ್ರಸಕ್ತ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಯಶಸ್ವಿ 38 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Story first published: Thursday, December 5, 2024, 22:46 [IST]
Other articles published on Dec 5, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+