For Quick Alerts
ALLOW NOTIFICATIONS  
For Daily Alerts
 

IND vs AUS: ರಿಷಬ್ ಪಂತ್ ಭಯದಲ್ಲಿ ಕಾಂಗರೂ ಪಡೆ; ಪ್ಯಾಟ್ ಕಮ್ಮಿನ್ಸ್ ಹೇಳಿದ್ದೇನು?

ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್‌ಕೀಪರ್ ಮತ್ತು ಬ್ಯಾಟರ್ ರಿಷಬ್ ಪಂತ್ ಎಲ್ಲರ ಗಮನ ಸೆಳೆದಿದ್ದಾರೆ. ಎರಡೂ ಇನ್ನಿಂಗ್ಸ್‌ಗಳಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ರಿಷಬ್ ಪಂತ್ ಬಾರಿಸಿದ ಶತಕವಂತೂ ಆಸ್ಟ್ರೇಲಿಯಾ ತಂಡದ ನಿದ್ದೆಗೆಡಿಸಿದೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿ ಸತತ ಎರಡು ಟೆಸ್ಟ್ ಸರಣಿಗಳನ್ನು ಗೆಲ್ಲಲು ರಿಷಬ್ ಪಂತ್ ಪಾತ್ರ ದೊಡ್ಡದ್ದು ಎಂದು ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಒಪ್ಪಿಕೊಂಡಿದ್ದಾರೆ.

What did Pat Cummins say about Rishabh Pant before Border-Gavaskar trophy

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಹೀಗಾಗಿ ಅವರನ್ನು ಸರಣಿಯಲ್ಲಿ ಶಾಂತವಾಗಿಡುವುದು ಮುಖ್ಯ ಎಂದು ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಪಂತ್ ಬಗ್ಗೆ ಮಾತನಾಡಿರುವ ಕಮ್ಮಿನ್ಸ್, ' ರಿಷಬ್ ಅವರು ಕಳೆದ ಕೆಲವು ಸರಣಿಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರಭಾವ ಬೀರಿದ ಆಟಗಾರ. ನಾವು ಅವರನ್ನು ಶಾಂತವಾಗಿಡಲು ಪ್ರಯತ್ನಿಸಬೇಕು. ರಿವರ್ಸ್ ಮತ್ತು ಒನ್-ಹ್ಯಾಂಡೆಡ್ ಫ್ಲಿಕ್‌ಗಳಂತಹ ಶಾಟ್‌ಗಳನ್ನು ಹೊಡೆಯುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಅವರ ಕೊನೆಯ ಎರಡು ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಪಂತ್ ಅವರ ಆಕ್ರಮಣಕಾರಿ ಆಟವನ್ನು ತಮ್ಮ ತಂಡದ ಸ್ಪೋಟಕ ಬ್ಯಾಟರ್‌ಗಳಾದ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್‌ರೊಂದಿಗೆ ಕಮ್ಮಿನ್ಸ್ ಹೋಲಿಸಿದ್ದಾರೆ . 'ಪ್ರತಿ ತಂಡದಲ್ಲಿ ಒಬ್ಬರು ಅಥವಾ ಇಬ್ಬರು ಆಟಗಾರರು ಪಂದ್ಯದ ಹಾದಿಯನ್ನು ಬದಲಾಯಿಸಬಹುದು. ನಮ್ಮಲ್ಲಿ ಟ್ರಾವಿಸ್ ಹೆಡ್ ಮತ್ತು ಮಿಚೆಲ್ ಮಾರ್ಷ್ ಅವರಂತಹ ಆಟಗಾರರಿದ್ದಾರೆ. ಅವರು ಈ ಆಟಗಾರರೊಂದಿಗೆ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸುತ್ತಾರೆ ಅಂದುಕೊಂಡಿದ್ದೇನೆ ಎಂದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ 12 ಇನ್ನಿಂಗ್ಸ್‌ಗಳಲ್ಲಿ ಪಂತ್ 62.40ರ ಸರಾಸರಿಯಲ್ಲಿ 624 ರನ್ ಗಳಿಸಿದರು. ಇದರಲ್ಲಿ ಅವರ ಗರಿಷ್ಠ ಸ್ಕೋರ್ ಔಟಾಗದೆ 159 ರನ್. 2021 ರಲ್ಲಿ ವೇಳೆ ಗಬ್ಬಾದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪಂತ್ ಅಜೇಯ 89 ರನ್‌ಗಳನ್ನು ಹೊಡೆಯುವ ಮೂಲಕ 32 ವರ್ಷಗಳ ಬಳಿಕ ಈ ಮೈದಾನದಲ್ಲಿ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ್ದರು. ಅಲ್ಲದೆ, ಭಾರತ 2-1 ಅಂತರದಲ್ಲಿ ಸರಣಿ ಗೆಲ್ಲಲು ಕಾರಣರಾಗಿದ್ದರು.

ಆಸ್ಟ್ರೇಲಿಯಾದಲ್ಲಿ ನಡೆದ 2018-19 ಮತ್ತು 2020-21ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿಗೆ ಪಂತ್ ನೀಡಿರುವ ಕೊಡುಗೆ ಅಪಾರವಾಗಿದೆ. ಇದಾದ ಬಳಿಕ 2022ರ ಡಿಸೆಂಬರ್ ತಿಂಗಳಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಪಂತ್ ಕ್ರಿಕೆಟ್‌ನಿಂದ ದೂರ ಉಳಿದಿದ್ದು, ಇದೀಗ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಮೂಲಕ ತಮ್ಮ ನೆಚ್ಚಿನ ಮಾದರಿ ಕ್ರಿಕೆಟ್‌ಗೆ ಅದ್ಭುತ ಪುನರಾಗಮನ ಮಾಡಿದ್ದಾರೆ.

Story first published: Tuesday, September 24, 2024, 23:37 [IST]
Other articles published on Sep 24, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+