ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಟೀಮ್ ಇಂಡಿಯಾ ಸೋಲಿಸಿದೆ. ಇದರೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ನಾಲ್ಕು ತಿಂಗಳ ನಂತರ ಯಾವುದೇ ಸ್ವರೂಪದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಕೊನೆಯ ಬಾರಿಗೆ ಅಕ್ಟೋಬರ್ 202ರಲ್ಲಿ ಕಾನ್ಪುರದಲ್ಲಿ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಪಂದ್ಯವನ್ನು ಗೆದ್ದಿತ್ತು.
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಗೆಲುವಿನ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳನ್ನು ತವರಿನಲ್ಲಿ ಸೋತಿತು. ಅದೇ ರೀತಿ ಆಸ್ಟ್ರೇಲಿಯಾದಲ್ಲಿಯೂ ಸಹ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಗೆಲ್ಲಲಿಲ್ಲ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದಿದ್ದರೂ, ಆ ಪಂದ್ಯದಲ್ಲಿ ರೋಹಿತ್ ನಾಯಕನಾಗಿರಲಿಲ್ಲ.

ಮೊದಲ ಏಕದಿನ ಪಂದ್ಯದ ಗೆಲುವಿನ ನಂತರ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡವು ವಿಶೇಷವಾದದ್ದೇನನ್ನೂ ಸಾಧಿಸಲು ಪ್ರಯತ್ನಿಸುವುದಿಲ್ಲ. ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮಾಡಿದಂತೆ ಎಲ್ಲವನ್ನೂ ಸಾಧ್ಯವಾದಷ್ಟು ಸರಿಯಾಗಿ ಮಾಡಲು ಬಯಸಿದ್ದೇವೆ. ಒಟ್ಟಾರೆಯಾಗಿ ಒಂದು ತಂಡವಾಗಿ, ನಾವು ಸಾಧ್ಯವಾದಷ್ಟು ಸರಿಯಾದ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಬೌಲಿಂಗ್, ಬ್ಯಾಟಿಂಗ್ ಮತ್ತು ಅಂತಹ ವಿಷಯಗಳಲ್ಲಿ ನಾವು ಸಾಧ್ಯವಿರುವ ಎಲ್ಲವನ್ನೂ ಪ್ರಯತ್ನಿಸಲು ಬಯಸುತ್ತೇವೆ. ಆದ್ದರಿಂದ, ನಾವು ಇಂದು ಅದನ್ನು ಮಾಡುವಲ್ಲಿ ಹೆಚ್ಚಾಗಿ ಯಶಸ್ವಿಯಾಗಿದ್ದೇವೆ. ನಾವು ಕೊನೆಗೆ ಕೆಲವು ವಿಕೆಟ್‌ಗಳನ್ನು ಕಳೆದುಕೊಳ್ಳಬಾರದಿತ್ತು. ಆಟಗಾರರು ಬೌಲರ್‌ಗಳ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ. ಹಾಗೆ ಮಾಡುವಾಗ ವಿಕೆಟ್ ಕಳೆದುಕೊಳ್ಳಬೇಕಾಗುತ್ತದೆ ಎಂದು ರೋಹಿರ್ ಶರ್ಮಾ ತಿಳಿಸಿದ್ದಾರೆ.
ಸುಮಾರು ಆರು ತಿಂಗಳ ನಂತರ ಏಕದಿನ ಪಂದ್ಯಗಳನ್ನು ಆಡುತ್ತಿರುವುದರಿಂದ ಭಾರತದ ಪ್ರದರ್ಶನದ ಬಗ್ಗೆ ತೃಪ್ತಿ ಇದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 'ನಾವು ಈ ಸ್ವರೂಪದಲ್ಲಿ ಬಹಳ ಸಮಯದ ನಂತರ ಆಡುತ್ತಿದ್ದೇವೆಂದು ನಮಗೆಲ್ಲರಿಗೂ ತಿಳಿದಿದ್ದರಿಂದ ನನಗೆ ತುಂಬಾ ಸಂತೋಷವಾಗಿದೆ. ಆದ್ದರಿಂದ ನಾವು ಸಾಧ್ಯವಾದಷ್ಟು ಬೇಗ ಮತ್ತೆ ಒಂದಾಗುವುದು ಮತ್ತು ಏನು ಮಾಡಬೇಕೆಂದು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿತ್ತು ಎಂದಿದ್ದಾರೆ.
ಐದನೇ ಕ್ರಮಾಂಕದಲ್ಲಿ ಬಂದು 47 ಎಸೆತಗಳಲ್ಲಿ 52 ರನ್ ಗಳಿಸಿದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ರೋಹಿತ್ ಶ್ಲಾಘಿಸಿದ್ದಾರೆ. 'ನಮಗೆ ಮಧ್ಯದಲ್ಲಿ ಎಡಗೈ ಆಟಗಾರನ ಅಗತ್ಯವಿತ್ತು. ಇಂಗ್ಲೆಂಡ್‌ನಲ್ಲಿ ಎಡಗೈ ಬ್ಯಾಟರ್‌ಗಳಿಗೆ ಬೌಲಿಂಗ್ ಮಾಡುವ ಕೆಲವು ಸ್ಪಿನ್ನರ್‌ಗಳಿದ್ದಾರೆ ಎಂದು ನಮಗೆ ತಿಳಿದಿದೆ. ನಾವು ಎಡಗೈ ಬ್ಯಾಟರ್ ಮೈದಾನದಲ್ಲಿ ಇರಬೇಕೆಂದು ಬಯಸಿದ್ದೇವೆ. ಕಳೆದ ಕೆಲವು ವರ್ಷಗಳಲ್ಲಿ ಅಕ್ಸರ್ ಒಬ್ಬ ಕ್ರಿಕೆಟಿಗನಾಗಿ, ವಿಶೇಷವಾಗಿ ಅವರ ಬ್ಯಾಟರ್ ಆಗಿ ಯಶಸ್ಸು ಕಂಡಿರುವುದನ್ನು ನೋಡಿದ್ದೇವೆ. ಇಂದು ನಾವು ಅದನ್ನು ಮತ್ತೆ ನೋಡಿದ್ದೇವೆ. ಗಿಲ್ ಅಯ್ಯರ್ ಮತ್ತು ಅಕ್ಸರ್ ನಿಜವಾಗಿಯೂ ಉತ್ತಮ ಬ್ಯಾಟಿಂಗ್ ಮಾಡಿದರು ಎಂದು ರೋಹಿತ್ ಶರ್ಮಾ ಸಂತಸ ವ್ಯಕ್ತಪಡಿಸಿದ್ದಾರೆ.