ನ್ಯೂಜಿಲೆಂಡ್ ವಿರುದ್ಧ ರೋಹಿತ್, ಶಮಿ ಆಡ್ತಾರಾ?; ಶ್ರೇಯಸ್ ಅಯ್ಯರ್ ಹೇಳಿದ್ದೇನು?
ಚಾಂಪಿಯನ್ಸ್ ಟ್ರೋಫಿಯಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ಸತತ ಎರಡು ಗೆಲುವುಗಳೊಂದಿಗೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ಗೆ ಹತ್ತಿರವಾಗಿದೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಎದುರಾಗಿದೆ. ವರದಿಗಳ ಪ್ರಕಾರ, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಫಿಟ್ನೆಸ್ ಸಮಸ್ಯೆಗೆ ಒಳಗಾಗಿದ್ದರು. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿ ಬೇಸರ ತರಿಸಿದೆ.
ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಫಿಟ್ನೆಸ್ ಸಮಸ್ಯೆಗೆ ಒಳಗಾಗಿರುವ ಬಗ್ಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಭಾನುವಾರ ನಡೆದ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಕೆಲ ಕಾಲ ಪಂದ್ಯದಿಂದ ಹೊರಗುಳಿದಿದ್ದರು.

ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾ ಗಾಯದ ಬಗ್ಗೆ ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆದರೂ ಟೀಮ್ ಇಂಡಿಯಾ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಸಹಾ ಆಟಗಾರರಾದ ಶ್ರೇಯಸ್ ಅಯ್ಯರ್ ಈ ಬಗ್ಗೆ ಮಾಹಿತಿ ನೀಡಿದ್ದು, ತಂಡದಲ್ಲಿ ಅಂತಹ ಯಾವುದೇ ಕನ್ಸರ್ನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದ ಗೆಲುವಿನ ನಂತರ ಮಾಧ್ಯಮಗಳೊಂದಿಗೆ ಶ್ರೇಯಸ್ ಅಯ್ಯರ್ ಮಾತನಾಡಿದ್ದಾರೆ. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಟೀಮ್ ಇಂಡಿಯಾದಲ್ಲಿ ಯಾರೂ ಗಾಯಕ್ಕೆ ಒಳಗಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 'ಮೊಹಮ್ಮದ್ ಶಮಿ ಮತ್ತು ರೋಹಿತ್ ಶರ್ಮಾ ಇಬ್ಬರೂ ನಿಜವಾಗಿಯೂ ಗಾಯಗೊಂಡಿಲ್ಲ. ಅವರೊಂದಿಗೆ ನಾನು ಮಾತನಾಡಿದ್ದೇನೆ. ನನಗೆ ಗೊತ್ತಿರುವಂತೆ ಅವರಿಬ್ಬರೂ ಚೆನ್ನಾಗಿಯೇ ಇದ್ದಾರೆ. ಇಬ್ಬರೂ ಯಾವುದೇ ಸಮಸ್ಯೆ ಇಲ್ಲ ಎಂದಿದ್ದಾರೆ' ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.
ರೋಹಿತ್ ಶರ್ಮಾ ಈ ಹಿಂದೆ ಕೂಡ ಗಾಯದ ಸಮಸ್ಯೆಗೆ ಒಳಗಾಗಿಲ್ಲ. ಆದರೆ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸಂದರ್ಭದಲ್ಲಿ ಫಿಟ್ನೆಸ್ ವಿಚಾರಕ್ಕಾಗಿ ಟೀಕೆಗೆ ಒಳಗಾಗಿದ್ದರು. ಮತ್ತೊಂದೆಡೆ ಮೊಹಮ್ಮದ್ ಶಮಿ ಕೂಡ ಗಾಯದ ಸಮಸ್ಯೆಯಿಂದ ಬಹುಕಾಲ ಟೀಮ್ ಇಂಡಿಯಾ ಪರ ಆಡಿಲ್ಲ. 2023ರ ಏಕದಿನ ವಿಶ್ವಕಪ್ ಫೈನಲ್ ನಂತರ ಶಮಿ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications