IND vs AUS: ಶುಭಮನ್ ಗಿಲ್ ಪರ್ತ್ ಟೆಸ್ಟ್ ಆಡುವ ಬಗ್ಗೆ ಕೋಚ್ ಹೇಳಿದ್ದೇನು?
ಪ್ರಸ್ತುತ ಭಾರತ ಟೆಸ್ಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ನವೆಂಬರ್ 22 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊಲದ ಟೆಸ್ಟ್ ಪಂದ್ಯ ಪರ್ತ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ, ಟೀಮ್ ಇಂಡಿಯಾ ಯುವ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಗಾಯಗೊಂಡಿದ್ದು, ಪರ್ತ್ ಟೆಸ್ಟ್ ಪಂದ್ಯ ಆಡುವ ಬಗ್ಗೆ ಅನುಮಾನಗಳಿವೆ. ಈಗ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್ ಅವರು ಶುಭಮನ್ ಗಿಲ್ ಪರ್ತ್ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ.
ಶುಭಮನ್ ಗಿಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗಿಲ್ ಅವರ ಕೈ ಬೆರಳು ಮುರಿದು ಹೋಗಿದೆ. ನವೆಂಬರ್ 16 ರಂದು, ಪರ್ತ್ ಸ್ಟೇಡಿಯಂನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಕ್ಯಾಚ್ ತೆಗೆದುಕೊಳ್ಳುವಾಗ ಗಿಲ್ ಎಡಗೈ ಹೆಬ್ಬೆರಳಿಗೆ ಚೆಂಡು ಬಡಿದು ಮುರಿದಿದೆ. ಇದರಿಂದಾಗಿ ಅವರು ಪರ್ತ್ ಟೆಸ್ಟ್ ಆಡುವ ಬಗ್ಗೆ ಅನುಮಾನವಿದೆ. ಅಭ್ಯಾಸದ ಅವಧಿಯಲ್ಲೂ ಗಿಲ್ ನೆಟ್ಸ್‌ನಲ್ಲಿ ಹೆಚ್ಚು ಬ್ಯಾಟಿಂಗ್ ಮಾಡುತ್ತಿರುವುದು ಕಂಡುಬಂದಿಲ್ಲ. ಇದೀಗ ಮೊರ್ಕೆಲ್ ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಮಭನ್ ಗಿಲ್ ಗಾಯದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.

ಪರ್ತ್ ಟೆಸ್ಟ್ ಪಂದ್ಯಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿರುವ ಮೋರ್ಕೆಲ್, ' ದಿನದಿಂದ ದಿನಕ್ಕೆ ಶುಭಮನ್ ಗಿಲ್ ಗಾಯದಿಂದ ಚೇತರಿಸಿಕೊಳ್ಳಲುತ್ತಿದ್ದಾರೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಪರ್ತ್ ಟೆಸ್ಟ್ ಪಂದ್ಯದ ಬೆಳಿಗ್ಗೆ ಅವರ ಆಟದ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗಿಲ್ ಆಡಬಹುದು ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಕಿವೀಸ್ ವಿರುದ್ಧ ಅದ್ಭುತ ಪ್ರದರ್ಶನ
ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಉತ್ತಮ ಪ್ರದರ್ಶನ ನೀಡಿದ್ದರು. 2 ಪಂದ್ಯಗಳ 4 ಇನ್ನಿಂಗ್ಸ್‌ಗಳಲ್ಲಿ ಅವರು 144 ರನ್ ಕಲೆ ಹಾಕಿದ್ದರು. ಈ ವೇಳೆ ಇನ್ನಿಂಗ್ಸ್‌ವೊಂದರಲ್ಲಿ ಅವರು 90 ರನ್ ಬಾರಿಸಿ ಮಿಂಚಿದ್ದರು. ಈಗ ಮತ್ತೊಮ್ಮೆ ಅವರು ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ.
ಭಾರತ ತನ್ನ ಕೊನೆಯ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಎದುರಿಸಬೇಕಾಯಿತು. ನ್ಯೂಜಿಲೆಂಡ್ ತಂಡ ಭಾರತವನ್ನು 3-0 ಅಂತರದಿಂದ ಸೋಲಿಸಿತ್ತು. ಇಂತಹ ಸಂದರ್ಭದಲ್ಲಿ ಭಾರತಕ್ಕೆ ವಿಶ್ವ ಟೆಸ್ಟ್‌ಚಾಂಪಿಯನ್ ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪುವ ಹಾದಿ ಕಠಿಣವಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಭಾರತ ಡಬ್ಲ್ಯೂಟಿಸಿ ಫೈನಲ್ ತಲುಪುವ ಲೆಕ್ಕಚಾರದಲ್ಲಿದೆ. ಕಳೆದ ಎರಡು ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಟೆಸ್ಟ್ ಸರಣಿ ಗೆದ್ದು ಬೀಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications