ಆಗಸ್ಟ್ 10ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

ಆಗಸ್ಟ್ 10ರ ಮಂಗಳವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ನಡೆದಿದ್ದು, ಒಂದೆಡೆ ಟೀಮ್ ಇಂಡಿಯಾ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ತಯಾರಾಗಲು ಅಭ್ಯಾಸವನ್ನು ನಡೆಸಿದ್ದರೆ ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್‌ಗೆ ತನ್ನ ಅಧಿಕೃತ ಆಡುವ ಬಳಗವನ್ನು ಘೋಷಣೆ ಮಾಡಿದೆ. ಹೀಗೆ ಆಗಸ್ಟ್ 10ರ ಮಂಗಳವಾರದಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಪ್ರಮುಖ ವಿದ್ಯಮಾನಗಳ ಕಿರುನೋಟ ಈ ಕೆಳಕಂಡಂತಿದೆ ನೋಡಿ..

ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!

* ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದಲ್ಲಿ ಪ್ರಮುಖ ಬದಲಾವಣೆಯಾಗುವ ಸಾಧ್ಯತೆಯಿದ್ದು ಇಂಗ್ಲೆಂಡ್ ತಂಡದ ಪ್ರಮುಖ ಆಲ್ ರೌಂಡರ್ ಆಟಗಾರ ಮೊಯಿನ್ ಅಲಿ ಮತ್ತೆ ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

* ಯುಎಇಯಲ್ಲಿ ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಗೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಲಭ್ಯವಿರುವುದಾಗಿ ಸ್ವತಃ ಅವರೇ ಹೇಳಿಕೆ ನೀಡಿದ್ದಾರೆ.

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ತಂಡದಲ್ಲಿಯೂ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯಿದೆ. ಇಂದು ಲಾರ್ಡ್ಸ್ ಅಂಗಳದಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ನೆಟ್ ಅಭ್ಯಾಸವನ್ನು ನಡೆಸಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಸಾಧ್ಯತೆಯಿದ್ದು ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಇಬ್ಬರು ಭಾರತೀಯ ಆಟಗಾರರನ್ನು ಎರಡನೇ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ.

* ಐಪಿಎಲ್ ಪಂದ್ಯಗಳ ನೇರ ಪ್ರಸಾರದ ಹಕ್ಕನ್ನು ಖರೀದಿಸಲು ರಿಲಯನ್ಸ್ ಸಂಸ್ಥೆ ಹರಾಜಿನಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ, ದ್ರಾವಿಡ್ ಮರು ಅರ್ಜಿ ಸಲ್ಲಿಕೆ ನಿರೀಕ್ಷೆಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ, ದ್ರಾವಿಡ್ ಮರು ಅರ್ಜಿ ಸಲ್ಲಿಕೆ ನಿರೀಕ್ಷೆ

* ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರ ಸ್ಥಾನಕ್ಕೆ ಬಿಸಿಸಿಐ ನೂತನ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು ರಾಹುಲ್ ದ್ರಾವಿಡ್ ಈ ಸ್ಥಾನಕ್ಕೆ ಆಯ್ಕೆಯಾಗುವುದರ ಮುನ್ಸೂಚನೆ ಸಿಕ್ಕಿದೆ. ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ನಂತರ ರವಿಶಾಸ್ತ್ರಿ ಅವಧಿ ಮುಗಿಯಲಿದ್ದು ಆ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಆಯ್ಕೆಯಾಗುವ ಸಾಧ್ಯತೆಗಳಿವೆ.

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾಗೆ ಸ್ವಾಗತ ಕೋರಿದ ಲಾರ್ಡ್ಸ್ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾಗೆ ಸ್ವಾಗತ ಕೋರಿದ ಲಾರ್ಡ್ಸ್

* ಯುಎಇಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ಸಜ್ಜಾಗಿರುವ ಎಂಎಸ್ ಧೋನಿ ದುಬೈಗೆ ಹಾರುವ ಮುನ್ನ ಚೆನ್ನೈ ನಗರವನ್ನು ತಲುಪಿದ್ದಾರೆ.

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಿಂದ ಈ ಇಬ್ಬರು ಆಟಗಾರರು ಹೊರಬೀಳುವ ಸಾಧ್ಯತೆ!ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾದಿಂದ ಈ ಇಬ್ಬರು ಆಟಗಾರರು ಹೊರಬೀಳುವ ಸಾಧ್ಯತೆ!

* 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಆಟವನ್ನು ಸೇರ್ಪಡೆಗೊಳಿಸುವುದು ಖಚಿತ ಎಂದು ಐಸಿಸಿ ತಿಳಿಸಿದೆ.

* ಚೆನ್ನೈ ಸೂಪರ್ ಕಿಂಗ್ಸ್ ತಂಡ ತಮಿಳುನಾಡು ರಾಜ್ಯದ ಹಿರಿಯ ಕ್ರಿಕೆಟಿಗರಿಗೆ ವಿಶೇಷ ಕಾರ್ಯಕ್ರಮವೊಂದರಲ್ಲಿ ನಗದು ಪುರಸ್ಕಾರ ನೀಡುವ ಮೂಲಕ ಗೌರವ ಸಲ್ಲಿಸಲು ತೀರ್ಮಾನಿಸಿದೆ. ಹೌದು ಕ್ರಿಕೆಟ್‍ನಲ್ಲಿ ತಮ್ಮದೇ ಆದ ಕೊಡುಗೆ ಸಲ್ಲಿಸಿರುವ ತಮಿಳುನಾಡು ಮೂಲದ ಆಯ್ದ ಹಿರಿಯ ಕ್ರಿಕೆಟಿಗರಿಗೆ ತಲಾ 7 ಲಕ್ಷ ರೂಪಾಯಿ ಗೌರವ ಧನವನ್ನು ನೀಡಲು ಚೆನ್ನೈ ಸೂಪರ್ ಕಿಂಗ್ಸ್ ತಂಡ ತೀರ್ಮಾನಿಸಿದೆ. ಮಂಗಳವಾರ (ಆಗಸ್ಟ್ 10) ಚೆನ್ನೈನಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಕ್ರೀಡಾ ಸ್ಫೂರ್ತಿ ಮೆರೆಯುವಂತಹ ಕೆಲಸವನ್ನು ಮಾಡಲು ಮುಂದಾಗಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, August 10, 2021, 22:15 [IST]
Other articles published on Aug 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X