ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಗಸ್ಟ್ 11ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on august 11

ಆಗಸ್ಟ್ 11ರ ಬುಧವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಪ್ರಮುಖ ಘಟನೆ ಮತ್ತು ವಿದ್ಯಮಾನಗಳು ಜರುಗಿದ್ದು, ಒಂದೆಡೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರದಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ ಪಂದ್ಯದ ಕುರಿತು ಪತ್ರಿಕಾಗೋಷ್ಠಿ ನಡೆಸಿದ್ದು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಮತ್ತೊಂದೆಡೆ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಕುರಿತು ಮಾತನಾಡಿರುವ ಜಾನಿ ಬೇರ್‌ಸ್ಟೋ ಪಂದ್ಯದ ವೇಳೆ ಮೊಹಮ್ಮದ್ ಸಿರಾಜ್ ಸಂಭ್ರಮಿಸಿದ ರೀತಿಯ ವಿವಾದದ ಕುರಿತು ಮಾತನಾಡಿದ್ದಾರೆ. ಹೀಗೆ ಆಗಸ್ಟ್ 11ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಕೆಲ ಪ್ರಮುಖ ಘಟನೆಗಳ ಕಿರು ನೋಟ ಮುಂದೆ ಇದೆ ನೋಡಿ..

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ನಿಂದ ತಂಡದ ಪ್ರಮುಖ ಆಟಗಾರ ಔಟ್!; ಖಚಿತಪಡಿಸಿದ ವಿರಾಟ್ ಕೊಹ್ಲಿಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ನಿಂದ ತಂಡದ ಪ್ರಮುಖ ಆಟಗಾರ ಔಟ್!; ಖಚಿತಪಡಿಸಿದ ವಿರಾಟ್ ಕೊಹ್ಲಿ

* ಗುರುವಾರ ( ಆಗಸ್ಟ್ 12 ) ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಮುಂಚಿತವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿ ನಡೆಸಿದರು.

* ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ ಶಾರ್ದೂಲ್ ಠಾಕೂರ್ ಆಡುವುದಿಲ್ಲ ಎಂಬ ವಿಷಯವನ್ನು ಹಂಚಿಕೊಂಡರು. ಅಭ್ಯಾಸದ ವೇಳೆ ಮಂಡಿರಜ್ಜು ಗಾಯಕ್ಕೊಳಗಾಗಿರುವ ಶಾರ್ದೂಲ್ ಠಾಕೂರ್ ಎರಡನೇ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವಿರಾಟ್ ಕೊಹ್ಲಿ ತಿಳಿಸಿದರು.

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಗೆದ್ದಿರುವ 4 ಕ್ರಿಕೆಟಿಗರ ಪಟ್ಟಿಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಗೆದ್ದಿರುವ 4 ಕ್ರಿಕೆಟಿಗರ ಪಟ್ಟಿ

* ಇನ್ನು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಕುರಿತು ಪರೋಕ್ಷವಾಗಿ ಉತ್ತರ ನೀಡಿರುವ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕ ಆಟಗಾರರಾಗಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ, ಹೀಗಾಗಿ ನಮ್ಮ ತಂಡದಲ್ಲಿ ಸದ್ಯಕ್ಕೆ ಬ್ಯಾಟ್ಸ್‌ಮನ್‌ಗಳ ಅಲಭ್ಯತೆ ಇಲ್ಲ ಎಂದು ಹೇಳಿದ್ದಾರೆ. ಸದ್ಯ ಬ್ಯಾಟ್ಸ್‌ಮನ್‌ಗಳ ಕೊರತೆ ತಂಡದಲ್ಲಿಲ್ಲ ಎಂದು ಹೇಳಿಕೆ ನೀಡಿರುವ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಆಡುವುದಿಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

* ಇನ್ನು ಇಂಗ್ಲೆಂಡ್ ತಂಡದ ಪ್ರಮುಖ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆ್ಯಂಡರ್ಸನ್ ಅಭ್ಯಾಸದ ವೇಳೆ ಗಾಯಕ್ಕೊಳಗಾಗಿದ್ದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಯಿದೆ.

ಭಾರತ vs ಇಂಗ್ಲೆಂಡ್: ಪ್ರಥಮ ಟೆಸ್ಟ್ ಫಲಿತಾಂಶದ ಕುರಿತು ಮೌನ ಮುರಿದ ಅಶ್ವಿನ್ಭಾರತ vs ಇಂಗ್ಲೆಂಡ್: ಪ್ರಥಮ ಟೆಸ್ಟ್ ಫಲಿತಾಂಶದ ಕುರಿತು ಮೌನ ಮುರಿದ ಅಶ್ವಿನ್

* ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶ್ರೇಯಸ್ ಐಯ್ಯರ್ ಮತ್ತೆ ಕ್ರಿಕೆಟ್ ಆಡಲು ಸಮರ್ಥರು ಎಂದು ದೃಢಪಡಿಸುವ ಮೂಲಕ ಶ್ರೇಯಸ್ ಐಯ್ಯರ್ ಮತ್ತೆ ಕ್ರಿಕೆಟ್ ಆಡಬಹುದು ಎಂಬುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

* ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳು ಸಹ ನಿಗದಿತ ಓವರ್‌ಗಳನ್ನು ಬೌಲಿಂಗ್ ಮಾಡುವಲ್ಲಿ ವಿಫಲರಾದ ಕಾರಣ ಎರಡೂ ತಂಡಗಳ ಆಟಗಾರರಿಗೆ ಶೇ. 40ರಷ್ಟು ದಂಡವನ್ನು ವಿಧಿಸಲಾಗಿದೆ.

* ರವೀಂದ್ರ ಜಡೇಜಾ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ರವೀಂದ್ರ ಜಡೇಜಾ ಇನ್ನೂ ಅತ್ಯುತ್ತಮ ಇನ್ನಿಂಗ್ಸ್ ಆಡಬಲ್ಲ ಆಟಗಾರ, ಆತ ಇನ್ನೂ ತನ್ನ ಪರಿಪೂರ್ಣವಾದ ಸಾಮರ್ಥ್ಯದ ಪ್ರದರ್ಶನವನ್ನು ನೀಡಿಲ್ಲ. ಆತ ತನ್ನ ಸಾಮರ್ಥ್ಯವನ್ನು ಅರಿತು ನಿಜವಾದ ಪ್ರದರ್ಶನವನ್ನು ನೀಡಬೇಕಿದೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

* ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕುರಿತು ಮಾತನಾಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಡೇವಿಡ್ ವಾರ್ನರ್ ಐಪಿಎಲ್ ಪಂದ್ಯಗಳಲ್ಲಿ ಆಡುವುದಾಗಿ ತಿಳಿಸಿದ್ದಾರೆ.

* ಪಾಕ್ ಪ್ರವಾಸ ಕೈಗೊಳ್ಳಬೇಕಿದ್ದ ಪ್ರಮುಖ ನ್ಯೂಜಿಲೆಂಡ್ ಆಟಗಾರರು ಗೈರಾಗಿರುವ ಕುರಿತು ಆಕ್ರೋಶ ಹೊರಹಾಕಿರುವ ಪಾಕ್ ಮಾಜಿ ಕ್ರಿಕೆಟಿಗ ಇಂಜಮಾಮ್ ಉಲ್ ಹಕ್ ಈ ಕುರಿತು ಐಸಿಸಿ ಯಾವುದೇ ಪ್ರಶ್ನೆಯನ್ನು ಹಾಕುತ್ತಿಲ್ಲ ಏಕೆ ಎಂದು ಕಿಡಿಕಾರಿದ್ದಾರೆ.

Story first published: Wednesday, August 11, 2021, 22:03 [IST]
Other articles published on Aug 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X