ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಗಸ್ಟ್ 13ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on august 13

ಆಗಸ್ಟ್ 13ರ ಶುಕ್ರವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಸಾಕಷ್ಟು ವಿದ್ಯಮಾನಗಳು ನಡೆದಿವೆ. ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಲುವಾಗಿ ದುಬೈ ಪ್ರಯಾಣ ಕೈಗೊಂಡಿದ್ದಾರೆ. ಹೀಗೆ ಆಗಸ್ಟ್ 13ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ವಿವಿಧ ವಿದ್ಯಮಾನ ಮತ್ತು ಘಟನೆಗಳ ಕಿರು ನೋಟ ಈ ಕೆಳಕಂಡಂತಿದೆ ನೋಡಿ..

* ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 42 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಯಾವುದೇ ರನ್ ಗಳಿಸದೆ ಗೋಲ್ಡನ್ ಡಕೌಟ್ ಆಗಿದ್ದ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 42 ರನ್ ಗಳಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ವಿರಾಟ್ ಕೊಹ್ಲಿ ಜವಾಬ್ದಾರಿಯುತ ಆಟವನ್ನು ಜಾಣ್ಮೆಯಿಂದ ಆಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿಯೂ ಕಳಪೆ ಪ್ರದರ್ಶನವನ್ನು ನೀಡಿದ್ದಾರೆ ಎಂದು ಕಾಲೆಳೆದಿದ್ದಾರೆ. ವಿರಾಟ್ ಕೊಹ್ಲಿ ಪ್ರದರ್ಶನದ ಕುರಿತು ವ್ಯಕ್ತವಾಗುತ್ತಿರುವ ಟೀಕೆಗಳ ಕುರಿತು ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ವಿರಾಟ್ ಕೊಹ್ಲಿ ಆಡಿದ ರೀತಿ ಸರಿಯಾಗಿದೆ, ಇಂಗ್ಲೆಂಡ್ ಪಿಚ್‌ನಲ್ಲಿ ಆ ರೀತಿಯ ಹೋರಾಟದ ಆಟ ನಡೆಸುವುದು ಓರ್ವ ಅತ್ಯುತ್ತಮ ಬ್ಯಾಟ್ಸ್‌ಮನ್‌ನಿಂದ ಮಾತ್ರ ಸಾಧ್ಯ ಎಂದು ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಕುರಿತು ಅಜಿತ್ ಅಗರ್ಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಐಪಿಎಲ್ 2021: ದುಬೈ ತಲುಪಿ ಹೊಟೇಲ್ ಬಾಲ್ಕನಿಯ ಸುಂದರ ಫೋಟೋ ಹಂಚಿಕೊಂಡ ಸುರೇಶ್ ರೈನಾಐಪಿಎಲ್ 2021: ದುಬೈ ತಲುಪಿ ಹೊಟೇಲ್ ಬಾಲ್ಕನಿಯ ಸುಂದರ ಫೋಟೋ ಹಂಚಿಕೊಂಡ ಸುರೇಶ್ ರೈನಾ

* ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಶುಕ್ರವಾರದಂದು ( ಆಗಸ್ಟ್ 13 ) ದುಬೈ ಪ್ರಯಾಣ ಕೈಗೊಂಡಿದ್ದಾರೆ. ಎಂ ಎಸ್ ಧೋನಿ, ಸುರೇಶ್ ರೈನಾ, ದೀಪಕ್ ಚಹರ್, ರುತುರಾಜ್ ಗಾಯಕ್ವಾಡ್ ಮತ್ತು ಕರಣ್ ಶರ್ಮಾ ಸೇರಿದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವ ಇನ್ನೂ ಹಲವಾರು ಭಾರತೀಯ ಕ್ರಿಕೆಟಿಗರು ದುಬೈ ತಲುಪಿದ್ದು ಸುರೇಶ್ ರೈನಾ ತಾವು ಉಳಿದುಕೊಂಡಿರುವ ಹೋಟೆಲ್‌ನ ಸುಂದರ ಬಾಲ್ಕನಿಯ ಚಿತ್ರವನ್ನು ಇನ್ ಸ್ಟಾಗ್ರಾಂ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.

* ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲನೆ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಆಕರ್ಷಕ ಶತಕ ಸಿಡಿಸಿದ ಕೆಎಲ್ ರಾಹುಲ್ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ ಇದು ಕೆಎಲ್ ರಾಹುಲ್ ವೃತ್ತಿಜೀವನದಲ್ಲಿಯೇ ನಾನು ಕಂಡ ಅತ್ಯದ್ಭುತ ಶತಕ ಎಂದು ಶ್ಲಾಘಿಸಿದ್ದಾರೆ.

ಮತ್ತೆ ಕಳಪೆ ಪ್ರದರ್ಶನ ನೀಡಿದ ರಹಾನೆ; ವೀಕ್ಷಕರು ಕಿಡಿಕಾರಿರುವ ರೀತಿ ಹೇಗಿದೆ ನೋಡಿಮತ್ತೆ ಕಳಪೆ ಪ್ರದರ್ಶನ ನೀಡಿದ ರಹಾನೆ; ವೀಕ್ಷಕರು ಕಿಡಿಕಾರಿರುವ ರೀತಿ ಹೇಗಿದೆ ನೋಡಿ

* ವಿರಾಟ್ ಕೊಹ್ಲಿ ತಮ್ಮ ಆಕ್ರಮಣಕಾರಿ ಆಟವನ್ನು ಬಿಟ್ಟಿದ್ದಾರೆ, ಕಳೆದ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ತೋರಿದ ಕಾರಣ ಮರಳಿ ಯಶಸ್ಸಿನ ಹಾದಿಗೆ ಮರಳುವ ಸಲುವಾಗಿ ಎಚ್ಚರಿಕೆಯ ಆಟವನ್ನು ಆಡಲು ಹೋಗಿ ಎಡವುತ್ತಿದ್ದಾರೆ. ಆದರೆ ವಿರಾಟ್ ಕೊಹ್ಲಿ ಎಂದಿನಂತೆ ತಮ್ಮ ಆಕ್ರಮಣಕಾರಿ ಆಟವನ್ನು ಮುಂದುವರಿಸಿದರೆ ಖಚಿತವಾಗಿಯೂ ಯಶಸ್ಸಿನ ಹಾದಿಗೆ ಮರಳುತ್ತಾರೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇನ್ಜಮಾಮ್ ಉಲ್ ಹಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

* ಇಂಗ್ಲೆಂಡ್ ವಿರುದ್ಧದ ಎರಡನೆ ಟೆಸ್ಟ್ ಪಂದ್ಯದ ಮೊದಲ ದಿನದಾಟದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರಿಗೆ ರೋಹಿತ್ ಶರ್ಮಾ ಸೆಲ್ಯೂಟ್ ಮಾಡಿದ್ದಾರೆ. 'ಎರಡನೇ ಟೆಸ್ಟ್ ಪಂದ್ಯ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಕ್ತಾಯಗೊಳ್ಳಲಿದೆ, ಹೀಗಾಗಿ ಈ ಪಂದ್ಯವನ್ನೇನಾದರೂ ಟೀಮ್ ಇಂಡಿಯಾ ಗೆದ್ದರೆ ಸ್ವಾತಂತ್ರ್ಯ ದಿನಾಚರಣೆಯ ಉಡುಗೊರೆಯಾಗಲಿದೆ' ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪತ್ರಕರ್ತ ವ್ಯಕ್ತಪಡಿಸಿದ ಈ ಅಭಿಪ್ರಾಯಕ್ಕೆ ಎದ್ದುನಿಂತು ಸೆಲ್ಯೂಟ್ ಮಾಡಿದ ರೋಹಿತ್ ಶರ್ಮಾ 'ಎಂಥಾ ಮಾತನ್ನು ನೀವು ಹೇಳಿದಿರಿ, ನೀವು ಹೇಳಿದ ಹಾಗೆ ನಡೆದರೆ ಅದು ನಿಜಕ್ಕೂ ದೊಡ್ಡ ವಿಚಾರ' ಎಂದು ರೋಹಿತ್ ಶರ್ಮಾ ಸಂತಸ ವ್ಯಕ್ತಪಡಿಸಿದರು.

* ಭಾರತದ ಕ್ರಿಕೆಟಿಗ ಉನ್ಮುಕ್ ಚಾಂದ್ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಹೀಗೆ ಕಿರಿಯ ವಯಸ್ಸಿಗೆ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿರುವ ಉನ್ಮುಕ್ತ್ ಚಾಂದ್ ಮುಂದಿನ ದಿನಗಳಲ್ಲಿ ಯುನೈಟೆಡ್ ಸ್ಟೇಟ್ಸ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

Story first published: Friday, August 13, 2021, 23:19 [IST]
Other articles published on Aug 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X