ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಗಸ್ಟ್ 16 ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on august 16

ಆಗಸ್ಟ್ 16, ಸೋಮವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ನಡೆದಿವೆ. ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲರ್ ಮೊಹಮ್ಮದ್ ಶಮಿ ಆಕರ್ಷಕ ಅರ್ಧಶತಕವನ್ನು ಬಾರಿಸಿದ್ದಾರೆ. ಇನ್ನೊಂದೆಡೆ ಅಶ್ವಿನ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಗೆಲ್ಲುವುದು ಕಷ್ಟ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಪಂದ್ಯಕ್ಕೂ ಮುನ್ನ ಅಭಿಪ್ರಾಯಪಟ್ಟಿದ್ದರು. ಹೀಗೆ ಆಗಸ್ಟ್ 16ರ ಸೋಮವಾರದಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಕೆಲ ಪ್ರಮುಖ ಘಟನೆಗಳ ಕಿರುನೋಟ ಇಲ್ಲಿದೆ ನೋಡಿ.

'ಲಾರ್ಡ್ಸ್ ಏನು ನಿನ್ನ ಮನೆಯಲ್ಲ'; ಮೈದಾನದಲ್ಲೇ ಕಿತ್ತಾಟಕ್ಕಿಳಿದ ಕೊಹ್ಲಿ ಮತ್ತು ಆಂಡರ್‌ಸನ್‌!'ಲಾರ್ಡ್ಸ್ ಏನು ನಿನ್ನ ಮನೆಯಲ್ಲ'; ಮೈದಾನದಲ್ಲೇ ಕಿತ್ತಾಟಕ್ಕಿಳಿದ ಕೊಹ್ಲಿ ಮತ್ತು ಆಂಡರ್‌ಸನ್‌!

* ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಕ್ರಿಕೆಟಿಗ ರಶೀದ್ ಖಾನ್ ಅವರ ಕುಟುಂಬ ಸಿಲುಕಿಕೊಂಡಿದ್ದು ಇತ್ತ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಹಂಡ್ರೆಡ್ ಕ್ರಿಕೆಟ್ ಲೀಗ್‌ನಲ್ಲಿ ರಶೀದ್ ಖಾನ್ ಭಾಗವಹಿಸಿದ್ದಾರೆ. ಹೀಗಾಗಿ ರಶೀದ್ ಖಾನ್‌ ತಮ್ಮ ಕುಟುಂಬದವರನ್ನು ಅಫ್ಘಾನಿಸ್ತಾನದಿಂದ ಹೊರ ಕರೆಸಿಕೊಳ್ಳಲಾಗಿದೆ ಚಿಂತೆಗೀಡಾಗಿದ್ದಾರೆ ಎಂದು ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಹೇಳಿಕೆ ನೀಡಿದ್ದಾರೆ. ಇಷ್ಟೆಲ್ಲಾ ಚಿಂತೆ ಮನಸ್ಸಿನಲ್ಲಿದ್ದರೂ ಆಟದ ವಿಷಯ ಬಂದಾಗ ಅದನ್ನೆಲ್ಲಾ ಮರೆತು ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ರಶೀದ್ ಖಾನ್ ಕುರಿತು ಕೆವಿನ್ ಪೀಟರ್ಸನ್ ಮೆಚ್ಚುಗೆ ವ್ಯಕ್ತಪಡಿಸಿದರು.

* ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಸಾಲ್ ಪೆರೇರಾ ಕೊರೋನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಈ ಹಿಂದೆ ಭಾರತ ವಿರುದ್ಧದ ಸರಣಿಗೂ ಮುನ್ನ ಭುಜದ ನೋವಿಗೆ ಒಳಗಾಗಿದ್ದ ಕುಸಾಲ್ ಪೆರೆರಾ ಇತ್ತೀಚೆಗಷ್ಟೇ ಚೇತರಿಸಿಕೊಂಡು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಸಜ್ಜಾಗಿದ್ದರು. ಆದರೆ ಅದಕ್ಕೂ ಮುನ್ನ ಕುಸಾಲ್ ಪೆರೇರಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮುಂಬರುವ ಸರಣಿಗೆ ಅವರು ಅಲಭ್ಯರಾಗುವ ಸಾಧ್ಯತೆಗಳಿವೆ.

Virat Kohli ಹೀಗೆ DRS ತೆಗೆದುಕೊಂಡಿದ್ದು ಬಹಳ ಒಳ್ಳೆಯದಾಯಿತು | Oneindia Kannada

ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!ಭಾರತ vs ಇಂಗ್ಲೆಂಡ್: ಯಾರು ಏನೇ ಅಂದರೂ ಇಂಗ್ಲೆಂಡ್ ಗೆಲ್ಲಲಿದೆ ಎಂದ ಭಾರತದ ಮಾಜಿ ಕ್ರಿಕೆಟಿಗ!

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಈ ಪಂದ್ಯ ಕುತೂಹಲ ಘಟ್ಟ ತಲುಪಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡದೇ ಮತ್ತೊಮ್ಮೆ ವಿಫಲರಾಗಿದ್ದಾರೆ. ಕೊಹ್ಲಿ ಪದೇ ಪದೇ ಕಳಪೆ ಪ್ರದರ್ಶನ ನೀಡುತ್ತಿರುವುದರ ಕುರಿತು ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳೆಲ್ಲಾ ಔಟ್ ಆಗಿ ಟೀಮ್ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಜತೆಯಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅತ್ಯುತ್ತಮ ಜತೆಯಾಟ ಆಡುವುದರ ಮೂಲಕ ಟೀಮ್ ಇಂಡಿಯಾವನ್ನು ಸೋಲಿನ ಸುಳಿಯಿಂದ ಹೊರ ತಂದರು. ಬೌಲರ್ ಮೊಹಮ್ಮದ್ ಶಮಿ ಅಜೇಯ 56 ರನ್ ಬಾರಿಸುವುದರ ಮೂಲಕ ಆಕರ್ಷಕ ಅರ್ಧಶತಕ ಸಿಡಿಸಿದರು ಹಾಗೂ ಜಸ್ ಪ್ರೀತ್ ಬೂಮ್ರಾ ಅಜೇಯ 34 ರನ್ ಬಾರಿಸುವುದರ ಮೂಲಕ ಉತ್ತಮ ಪ್ರದರ್ಶನ ನೀಡಿದರು.

* ಯುಎಇಯಲ್ಲಿ ನಡೆಯಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತೀಯ ಹಂತಕ್ಕೆ ಅಫ್ಘಾನಿಸ್ತಾನದ ಕ್ರಿಕೆಟಿಗರಾದ ರಶೀದ್ ಖಾನ್ ಮತ್ತು ಮೊಹಮ್ಮದ್ ನಬಿ ಲಭ್ಯವಿದ್ದಾರೆ.

* ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಲಾರ್ಡ್ಸ್ ಕ್ರೀಡಾಂಗಣದ ಬಾಲ್ಕನಿಯಲ್ಲಿ ನಿಂತು ನಾಗಿನ್ ಡಾನ್ಸ್ ಮಾಡಿರುವ ವಿಡಿಯೋ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಸಾಕಷ್ಟು ನೆಟ್ಟಿಗರು ಈ ವಿಡಿಯೋವನ್ನು ಭಿನ್ನವಿಭಿನ್ನವಾಗಿ ಟ್ರೋಲ್ ಮಾಡುತ್ತಿದ್ದಾರೆ.

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಬೌಲರ್ ಆ್ಯಂಡರ್ಸನ್ ಜತೆ ಮಾತಿನ ಚಕಮಕಿ ನಡೆಸಿದ್ದಾರೆ. ಜೇಮ್ಸ್ ಆ್ಯಂಡರ್ಸನ್ ಪದೇಪದೆ ಪಿಚ್ ಮೇಲೆ ಓಡಾಡುತ್ತಿದ್ದನ್ನು ಗಮನಿಸಿದ ವಿರಾಟ್ ಕೊಹ್ಲಿ ಪಿಚ್ ಏನು ನಿಮ್ಮ ಮನೆಯ ಹಿತ್ತಲಲ್ಲಿ ಎಂದು ಜೇಮ್ಸ್ ಆ್ಯಂಡರ್ಸನ್ ವಿರುದ್ಧ ನಿಂದನೆ ಮಾಡಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಜೇಮ್ಸ್ ಆ್ಯಂಡರ್ಸನ್ ಕೂಡ ವಿರಾಟ್ ಕೊಹ್ಲಿ ವಿರುದ್ಧ ಮಾತಿನ ಚಕಮಕಿ ನಡೆಸಿದರು.

Story first published: Monday, August 16, 2021, 21:49 [IST]
Other articles published on Aug 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X