ಆಗಸ್ಟ್ 24ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

ಆಗಸ್ಟ್ 24, ಮಂಗಳವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಪ್ರಮುಖ ಘಟನೆಗಳು ನಡೆದಿವೆ. ಒಂದೆಡೆ ಟೀಮ್ ಇಂಡಿಯಾ ತಂಡದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು ಟೀಂ ಇಂಡಿಯಾ ಆಡುವ ಬಳಗದ ಕುರಿತೂ ಕೆಲವೊಂದಿಷ್ಟು ಮಾಹಿತಿಗಳನ್ನು ಹಂಚಿಕೊಂಡರು. ಮತ್ತೊಂದೆಡೆ ಟಿ ಟ್ವೆಂಟಿ ಸರಣಿ ಯನ್ನಾಡಲು ಬಾಂಗ್ಲಾ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ತಂಡದ ಪ್ರಮುಖ ಆಟಗಾರ ಫಿನ್ ಅಲೆನ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗೆ ಆಗಸ್ಟ್ 24ರ ಮಂಗಳವಾರದಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಪ್ರಮುಖ ಘಟನೆಗಳ ಒಂದು ಕಿರು ನೋಟ ಈ ಕೆಳಕಂಡಂತಿದೆ ಓದಿ.

ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!ಈತನಿಂದ ಎಬಿಡಿ, ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂದ ಆರ್‌ಸಿಬಿ ನೂತನ ಕೋಚ್!

* ಬುಧವಾರ ( ಆಗಸ್ಟ್ 25 ) ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಕುರಿತು ಮಾತನಾಡಿದ ವಿರಾಟ್ ಕೊಹ್ಲಿ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಯನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದರು.

ಭಾರತ vs ಇಂಗ್ಲೆಂಡ್: ತೃತೀಯ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಸ್ಥಾನ ನೀಡುವುದರ ಬಗ್ಗೆ ಮೌನ ಮುರಿದ ಕೊಹ್ಲಿಭಾರತ vs ಇಂಗ್ಲೆಂಡ್: ತೃತೀಯ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಸ್ಥಾನ ನೀಡುವುದರ ಬಗ್ಗೆ ಮೌನ ಮುರಿದ ಕೊಹ್ಲಿ

* ಇತ್ತೀಚೆಗಷ್ಟೇ ಇಂಗ್ಲೆಂಡ್‌ನಲ್ಲಿ ನಡೆದ ದ ಆಂಡ್ರಾಯ್ಡ್ ಉದ್ಘಾಟನಾ ಆವೃತ್ತಿಯಲ್ಲಿ ಭಾಗವಹಿಸಿದ್ದ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಆಟಗಾರ ಕಾರ್ಲೋಸ್ ಬ್ರಾಥ್‌ವೇಟ್ ಕೊರೊನಾ ಸೋಂಕಿಗೆ ಒಳಗಾಗಿರುವ ಕಾರಣ ಮುಂಬರಲಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವುದು ಅನುಮಾನವಾಗಿದೆ.

* ಟೋಕಿಯೋ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತದ ಕ್ರೀಡಾಪಟುಗಳಿಗೆ ಟೀಮ್ ಇಂಡಿಯಾ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಶುಭ ಹಾರೈಸಿದ್ದಾರೆ.

ಈ ಅಂಕಿಅಂಶಗಳಲ್ಲಿ ರೂಟ್, ಬಾಬರ್ ಮತ್ತು ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಬೆಸ್ಟ್!ಈ ಅಂಕಿಅಂಶಗಳಲ್ಲಿ ರೂಟ್, ಬಾಬರ್ ಮತ್ತು ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಬೆಸ್ಟ್!

* ಪಾಕಿಸ್ತಾನ ವಿರುದ್ಧದ ಅಫ್ಘಾನಿಸ್ತಾನ್‌ನ ಮೂರು ಪಂದ್ಯಗಳ ಏಕದಿನ ಸರಣಿ ಶ್ರೀಲಂಕಾದ ಹಂಬನ್‌ತೋಟದಲ್ಲಿ ನಡೆಯುವುದರಲ್ಲಿತ್ತು. ಆದರೆ ಈ ಏಕದಿನ ಸರಣಿ ಲಂಕಾದಿಂದ ಪಾಕಿಸ್ತಾನಕ್ಕೆ ಸ್ಥಳಾಂತರವಾಗಿದೆ. ಅಫ್ಘಾನಿಸ್ತಾನ ತಂಡ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸುವುದು ಪ್ರಯಾಣ ದೃಷ್ಟಿಯಲ್ಲಿ ಸವಾಲಿನದ್ದಾಗಿರುವುದರಿಂದ ಏಕದಿನ ಸರಣಿ ಸ್ಥಳಾಂತರವಾಗಿದೆ ಎಂದು ತಿಳಿದು ಬಂದಿದೆ.

* ಬುಧವಾರದಂದು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಕುರಿತು ಇಂದು ( ಆಗಸ್ಟ್ 24 ) ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆಡುವ ಬಳಗದಲ್ಲಿ ವ್ಯತ್ಯಾಸ ಮಾಡುವ ಅಗತ್ಯವಿಲ್ಲ ಎಂಬ ಹೇಳಿಕೆ ನೀಡಿದ ನಂತರ, ರವಿಚಂದ್ರನ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂಬ ವಿಷಯ ಬಹುತೇಕ ಖಚಿತವಾಗಿದ್ದು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ 'ಆವೇಶ್' ಬಲ: ಅಭ್ಯಾಸದಲ್ಲಿ ಭಾಗಿಯಾದ ಯುವ ವೇಗಿಡೆಲ್ಲಿ ಕ್ಯಾಪಿಟಲ್ಸ್‌ಗೆ 'ಆವೇಶ್' ಬಲ: ಅಭ್ಯಾಸದಲ್ಲಿ ಭಾಗಿಯಾದ ಯುವ ವೇಗಿ

ನಮ್ಮ ಗೆಲುವಿಗೆ ಅವರು ಕಾರಣ ಅಲ್ವೇ ಅಲ್ಲ ಎಂದು ಪತ್ರಕರ್ತನ ಮೇಲೆ ಕಿಡಿಕಾರಿದ ಕೊಹ್ಲಿ | Oneindia Kannada

* ಮುಂಬರಲಿರುವ ಬಾಂಗ್ಲಾದೇಶ ವಿರುದ್ಧದ 4 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನಾಡಲು ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿತು. ಹೀಗೆ ಬಾಂಗ್ಲಾದೇಶ ತಲುಪಿರುವ ನ್ಯೂಜಿಲೆಂಡ್ ತಂಡದ ಆಟಗಾರ ಫಿನ್ ಅಲೆನ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹೀಗೆ ಕೊರೊನಾ ಸೋಂಕಿಗೆ ಒಳಗಾಗಿರುವ ಫಿನ್ ಅಲೆನ್ ಅವರಿಗೆ ಡಾಕಾ ನಗರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಫಿನ್ ಅಲೆನ್ ಆದಷ್ಟು ಬೇಗ ಚೇತರಿಸಿಕೊಳ್ಳಲಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Tuesday, August 24, 2021, 22:03 [IST]
Other articles published on Aug 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X