ಆಗಸ್ಟ್ 25ರಂದು ಕ್ರಿಕೆಟ್‍ ಜಗತ್ತಿನಲ್ಲಿ ನಡೆದದ್ದೇನು?

ಆಗಸ್ಟ್ 25, ಬುಧವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ಹಲವಾರು ಪ್ರಮುಖ ವಿದ್ಯಮಾನಗಳು ನಡೆದಿದ್ದು ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 78 ರನ್‌ಗಳಿಗೆ ಆಲ್ಔಟ್ ಆಗಿದ್ದರೆ ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ನೂತನ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಹೀಗೆ ಆಗಸ್ಟ್ 25ರ ಬುಧವಾರದಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದಿರುವ ಪ್ರಮುಖ ಘಟನೆಗಳ ಒಂದು ಕಿರುನೋಟ ಈ ಕೆಳಕಂಡಂತಿದೆ ನೋಡಿ..

ಇಂಗ್ಲೆಂಡ್ ವಿರುದ್ಧದ ಗೆಲುವಿಗೆ ಅವರು ಮಾತ್ರ ಕಾರಣ ಎನ್ನಲೇಬೇಡಿ ಎಂದು ಕಿಡಿಕಾರಿದ ವಿರಾಟ್ ಕೊಹ್ಲಿ!ಇಂಗ್ಲೆಂಡ್ ವಿರುದ್ಧದ ಗೆಲುವಿಗೆ ಅವರು ಮಾತ್ರ ಕಾರಣ ಎನ್ನಲೇಬೇಡಿ ಎಂದು ಕಿಡಿಕಾರಿದ ವಿರಾಟ್ ಕೊಹ್ಲಿ!

* ಸೆಪ್ಟೆಂಬರ್ ತಿಂಗಳಿನಿಂದ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೂತನ ವಿದೇಶಿ ಆಟಗಾರನನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿದೆ. ಇಂಗ್ಲೆಂಡ್ ಮೂಲದ ಕ್ರಿಕೆಟಿಗ ಜಾರ್ಜ್ ಗಾರ್ಟನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

ಕೋಚ್ ಕಾಶೀನಾಥ್ ಮನೆಗೆ ಭೇಟಿ ನೀಡಿದ ನೀರಜ್ ಚೋಪ್ರಾ ಈಟಿಯಿಂದಲೇ ಚುಚ್ಚಿದ್ದು ಅದೆಷ್ಟು ಮಂದಿಗೆ!

* ಬುಧವಾರದಂದು ಲೀಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಆರಂಭವಾಗಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಜೇಮ್ಸ್ ಆ್ಯಂಡರ್ಸನ್ ಅವರಿಗೆ 7 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸುವ ಮೂಲಕ ಬೇಡವಾದ ಕೆಟ್ಟ ದಾಖಲೆಯನ್ನು ಬರೆದುಕೊಂಡಿದ್ದಾರೆ. ಜೇಮ್ಸ್ ಆ್ಯಂಡರ್ಸನ್ ಏಳನೇ ಬಾರಿ ವಿರಾಟ್ ಕೊಹ್ಲಿಯವರ ವಿಕೆಟ್ ಪಡೆಯುವುದರ ಮೂಲಕ ವಿರಾಟ್ ಕೊಹ್ಲಿಯನ್ನು ಅತಿಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದರು.

ಐಪಿಎಲ್ 2021: ಆರ್‌ಸಿಬಿ ತಂಡಕ್ಕೆ ಕೇನ್ ರಿಚರ್ಡ್ಸನ್ ಸ್ಥಾನಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆಐಪಿಎಲ್ 2021: ಆರ್‌ಸಿಬಿ ತಂಡಕ್ಕೆ ಕೇನ್ ರಿಚರ್ಡ್ಸನ್ ಸ್ಥಾನಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

* ಭಾರತ ಮತ್ತು ಇಂಗ್ಲೆಂಡ್ ನಡುವೆ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 79 ರನ್‌ಗಳಿಗೆ ಆಲ್ಔಟ್ ಆಗುವುದರ ಮೂಲಕ ಕಳಪೆ ಪ್ರದರ್ಶನ ನೀಡಿ ಮಂಕಾಗಿದೆ.

ರನ್ ಬರ ಎದುರಿಸುತ್ತಿರುವ ಕೊಹ್ಲಿಗೆ ದಿಗ್ಗಜನ ಸಹಾಯ ಪಡೆಯಲು ಗವಾಸ್ಕರ್ ಸಲಹೆರನ್ ಬರ ಎದುರಿಸುತ್ತಿರುವ ಕೊಹ್ಲಿಗೆ ದಿಗ್ಗಜನ ಸಹಾಯ ಪಡೆಯಲು ಗವಾಸ್ಕರ್ ಸಲಹೆ

* ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಆಟಗಾರರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆಗಳು ವ್ಯಕ್ತವಾಗುತ್ತಿದ್ದು ಚೇತೇಶ್ವರ್ ಪೂಜಾರ ಮತ್ತು ವಿರಾಟ್ ಕೊಹ್ಲಿ ವಿರುದ್ಧ ಅತಿ ಹೆಚ್ಚಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿರಾಟ್ ಕೊಹ್ಲಿ ನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಆದರೆ ಓರ್ವ ಬ್ಯಾಟ್ಸ್‌ಮನ್‌ ಆಗಿ ತಂಡಕ್ಕೆ ಬೇಕಾದ ಆಟವನ್ನು ವಿರಾಟ್ ಕೊಹ್ಲಿ ಪ್ರದರ್ಶಿಸುತ್ತಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಅಷ್ಟೇ ಅಲ್ಲದೇ ಚೇತೇಶ್ವರ್ ಪೂಜಾರ ಕಳಪೆ ಆಟದ ವಿರುದ್ಧವೂ ಕಿಡಿಕಾರಿರುವ ನೆಟ್ಟಿಗರು ಚೇತೇಶ್ವರ ಪೂಜಾರರನ್ನು ತಂಡದಿಂದ ಶೀಘ್ರದಲ್ಲಿಯೇ ಕೈಬಿಟ್ಟು ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ನೀಡಬೇಕೆಂದು ಬಿಸಿಸಿಐಗೆ ಮನವಿ ಮಾಡಿದ್ದಾರೆ.

ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ಸ್ಫೋಟಕ ಆಲ್‌ರೌಂಡರ್ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ಸ್ಫೋಟಕ ಆಲ್‌ರೌಂಡರ್

50 ಇನ್ನಿಂಗ್ಸ್ ಕಳೆದ್ರೂ ವಿರಾಟ್ ಬ್ಯಾಟ್ ನಿಂದ ಶತಕ ದಾಖಲಾಗಿಲ್ಲ ಯಾಕೆ? | Oneindia Kannada

* ಸೆಪ್ಟೆಂಬರ್ ತಿಂಗಳಿನಿಂದ ಮುಂದುವರೆದಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಲಿರುವ ಹಾರ್ದಿಕ್ ಪಾಂಡ್ಯ ಪಾಟೆಕ್ ಫಿಲಿಪ್ ನಾಟಿಲಸ್ ಪ್ಲಾಟಿನಂ 5711 ವಾಚನ್ನು ಖರೀದಿಸುವ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಬಳಸಿರುವ ಈ ಕೈಗಡಿಯಾರದ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿಗಳಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, August 25, 2021, 23:08 [IST]
Other articles published on Aug 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X