ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಗಸ್ಟ್ 26ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on august 26

ಭಾರತ 26, ಗುರುವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಪ್ರಮುಖ ಘಟನೆಗಳು ನಡೆದಿದ್ದು ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವೆ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ತನ್ನ ಉತ್ತಮ ಆಟವನ್ನು ನಡೆಸಿದ್ದು ಭಾರತದ ವಿರುದ್ಧ ಎರಡನೇ ದಿನವೂ ಸಹ ಮೇಲುಗೈ ಸಾಧಿಸಿದೆ, ಮತ್ತೊಂದೆಡೆ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಟೆಡ್ ಡೆಕ್ಸ್ಟರ್ ನಿಧನ ಹೊಂದಿದ್ದಾರೆ. ಹೀಗೆ ಆಗಸ್ಟ್ 26 ರ ಗುರುವಾರದಂದು ಹಲವಾರು ಪ್ರಮುಖ ಘಟನೆಗಳು ನಡೆದಿದ್ದು, ಅವುಗಳ ಒಂದು ಕಿರು ನೋಟ ಈ ಕೆಳಕಂಡಂತಿದೆ ನೋಡಿ..

ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಡ್ ಡೆಕ್ಸ್ಟರ್ ನಿಧನಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಡ್ ಡೆಕ್ಸ್ಟರ್ ನಿಧನ

* ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಗ್ಯಾಲರಿಯಲ್ಲಿ ಕುಳಿತಿದ್ದ ಇಂಗ್ಲೆಂಡ್ ಪ್ರೇಕ್ಷಕರು ಬಾಲ್ ಎಸೆಯುವುದರ ಮೂಲಕ ಮೊಹಮ್ಮದ್ ಸಿರಾಜ್ ವಿರುದ್ಧ ದುರ್ವರ್ತನೆ ತೋರಿದ್ದಾರೆ.

* ಭಾರತ ಮತ್ತು ಇಂಗ್ಲೆಂಡ್ ನಡುವೆ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೊಹಮ್ಮದ್ ಸಿರಾಜ್ ಅವರಿಗೆ ನಿಮ್ಮ ತಂಡದ ಸ್ಕೋರ್ ಎಷ್ಟು ಎಂದು ಕೇಳುವುದರ ಮೂಲಕ ಇಂಗ್ಲೆಂಡ್ ಪ್ರೇಕ್ಷಕರು ಮೊಹಮ್ಮದ್ ಸಿರಾಜ್ ಅವರ ಕಾಲನ್ನು ಎಳೆಯಲು ಪ್ರಯತ್ನಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮೊಹಮ್ಮದ್ ಸಿರಾಜ್ '1-0' ಎಂದು ಕೈ ಸನ್ನೆಯ ಮೂಲಕ ಇಂಗ್ಲೆಂಡ್ ಪ್ರೇಕ್ಷಕರಿಗೆ ತಿರುಗೇಟು ನೀಡಿದರು. ಭಾರತ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 78 ರನ್ ಗಳಿಸಿ ಆಲ್ ಔಟ್ ಆದ ಕಾರಣ ಮೊಹಮ್ಮದ್ ಸಿರಾಜ್ ಅವರಿಗೆ ನಿಮ್ಮ ತಂಡ ಎಷ್ಟು ರನ್ ಗಳಿಸಿದೆ ಎಂದು ಕೇಳುವುದರ ಮೂಲಕ ಕಾಲೆಳೆಯಲು ನೋಡಿದ ಇಂಗ್ಲೆಂಡ್ ಪ್ರೇಕ್ಷಕರಿಗೆ, ಭಾರತ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ ಎಂಬ ಕೈಸನ್ನೆಯ ಉತ್ತರದ ಮೂಲಕ ಮೊಹಮ್ಮದ್ ಸಿರಾಜ್ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ.

* ಆಗಸ್ಟ್ 26 ರ ಗುರುವಾರದಂದು ಕೆರಿಬಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯ ಒಂಬತ್ತನೇ ಆವೃತ್ತಿ ಆರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ಟ್ರಿನ್‌ಬ್ಯಾಗೋ ನೈಟ್ ರೈಡರ್ಸ್ ಮತ್ತು ಗಯಾನಾ ಅಮೆಜಾನ್ ವಾರಿಯರ್ಸ್ ಸೆಣಸಾಡಲಿವೆ.

ಹೆಡಿಂಗ್ಲೆ ಟೆಸ್ಟ್: ಭಾರತದ ಕಳಪೆ ಪ್ರದರ್ಶನಕ್ಕೆ ಈ ಇಬ್ಬರು ಆಟಗಾರರು ಹೊಣೆ ಎಂದ ಇನ್ಜಮಾಮ್ ಉಲ್ ಹಕ್ಹೆಡಿಂಗ್ಲೆ ಟೆಸ್ಟ್: ಭಾರತದ ಕಳಪೆ ಪ್ರದರ್ಶನಕ್ಕೆ ಈ ಇಬ್ಬರು ಆಟಗಾರರು ಹೊಣೆ ಎಂದ ಇನ್ಜಮಾಮ್ ಉಲ್ ಹಕ್

* ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಡ್ ಡೆಕ್ಸ್ಟರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಆಲ್ ರೌಂಡರ್ ಆಗಿದ್ದ ಡೆಕ್ಸ್ಟರ್ ಬಲಿಷ್ಠ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಮತ್ತು ಮಧ್ಯಮ ಕ್ರಮಾಂಕದ ವೇಗಿಯಾಗಿದ್ದರು.

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಆಟಗಾರರು ನೀಡಿದ ಕಳಪೆ ಪ್ರದರ್ಶನದ ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಕಿಡಿಕಾರಿದ್ದಾರೆ. ಅದರಲ್ಲಿಯೂ ರೋಹಿತ್ ಶರ್ಮಾ ವಿರುದ್ಧ ಬ್ಯಾಟಿಂಗ್ ವೈಖರಿಯ ವಿರುದ್ಧ ತುಸು ಹೆಚ್ಚೇ ಕಿಡಿಕಾರಿರುವ ಮೈಕಲ್ ವಾನ್ ರೋಹಿತ್ ಶರ್ಮಾ ತಂಡಕ್ಕಾಗಿ ಆಡದೇ ತನ್ನ ಉಳಿವಿಗಾಗಿ ಮಾತ್ರ ಆಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

* ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಎಲ್ಲಾ ಬ್ಯಾಟ್ಸ್‌ಮನ್‌ಗಳೂ ಸಹ ವಿಫಲರಾದ ಕಾರಣ ಪಾಕಿಸ್ತಾನದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತದ ಕಳಪೆ ಪ್ರದರ್ಶನಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನೇರ ಹೊಣೆಗಾರರು ಎಂದಿದ್ದಾರೆ. * ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಈಗಾಗಲೇ ಭಾರೀ ಅಂತರದ ಮುನ್ನಡೆಯನ್ನು ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವನ್ನು ಕೇವಲ 78 ರನ್‌ಗಳಿಗೆ ಆಲೌಟ್ ಮಾಡಿರುವ ಇಂಗ್ಲೆಂಡ್ ತನ್ನ ಮೊದಲ ಸರದಿಯಲ್ಲಿ ಈಗಾಗಲೇ 423 ರನ್‌ಗಳನ್ನು ಗಳಿಸಿದ್ದು 8 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದೆ. ಸದ್ಯ ಇಂಗ್ಲೆಂಡ್ ತಂಡ ಭಾರತದ ವಿರುದ್ಧ 345 ರನ್‌ಗಳ ಅಂತರದ ದೊಡ್ಡ ಮುನ್ನಡೆಯನ್ನು ಸಾಧಿಸಿದೆ.

* ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅವರ ಅದ್ಭುತ ಫಾರ್ಮ್ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಮುಂದುವರಿದಿದೆ. ಈ ಸರಣಿಯ ಮೂರನೇ ಪಂದ್ಯದಲ್ಲಿಯೂ ಜೋ ರೂಟ್ ಶತಕ ಸಿಡಿಸಿದ್ದು ಈ ಸರಣಿಯಲ್ಲಿ 3ನೇ ಶತಕ ಸಿಡಿಸಿದಂತಾಗಿದೆ. ಈ ಶತಕದ ಮೂಲಕ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ಶತಕ ಸಿಡಿಸಿ ಆಟಗಾರ ಎನಿಸಿದ್ದಾರೆ ಜೋ ರೂಟ್. ಈ ಸಾಧನೆ ಮಾಡಲು ಇಂಗ್ಲೆಂಡ್ ನಾಯಕ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಆಲೆಸ್ಟರ್ ಕುಕ್ ದಾಖಲೆಯನ್ನು ಮುರಿದಿದ್ದಾರೆ. ಇನ್ನು ಮತ್ತೊಂದು ಪ್ರಮುಖ ದಾಖಲೆಯನ್ನು ಕೂಡ ರೂಟ್ ತಮ್ಮ ಹೆಸರಿಗೆ ಬರೆದಿದ್ದಾರೆ. ಒಂದು ವರ್ಷದಲ್ಲಿ ಎರಡು ಬಾರಿಗೆ ಸತತ ಮೂರು ಪಂದ್ಯಗಳಲ್ಲಿ ಶತಕ ಸಿಡಿಸಿದ ಏಕೈಕ ಆಟಗಾರ ಎನಿಸಿದ್ದಾರೆ ಜೋ ರೂಟ್.

* ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್ 41 ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಈಗ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಆಟಗಾರರಾದ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಹಾಗೂ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲೆಸ್ಟರ್ ಕುಕ್ ತಲಾ 7 ಶತಕಗಳನ್ನು ಸಿಡಿಸಿದ್ದು ಈ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ.

ಸಿರಾಜ್ ಹಾಗು ಕೊಹ್ಲಿ ಸೇರಿ ಪಂತ್ ಮಾತಿಗೆ ವಿರುದ್ಧವಾಗಿ ನಡೆದಾಗ | Oneindia Kannada

* ಇನ್ನು ಈ ಶತಕದ ಮೂಲಕ ಜೋ ರೂಟ್ ಮತ್ತೊಂದು ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಒಂದೇ ವರ್ಷದಲ್ಲಿ ಎರಡು ಬಾರಿ ಸತತ 3 ಪಂದ್ಯಗಳಲ್ಲಿ ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿದ್ದಾರೆ. ಇದಕ್ಕೂ ಮುನ್ನ ನಾಟಿಂಗ್‌ಹ್ಯಾಮ್ ಟೆಸ್ಟ್‌ನಲ್ಲಿ ಹಾಗೂ ಲಾರ್ಡ್ಸ್ ಟೆಸ್ಟ್‌ನಲ್ಲಿಯೂ ಜೋ ರೂಟ್ ಶತಕ ಸಿಡಿಸಿ ಮಿಂಚಿದ್ದರು.

Story first published: Friday, August 27, 2021, 5:07 [IST]
Other articles published on Aug 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X