ಆಗಸ್ಟ್ 5ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

ಆಗಸ್ಟ್ 5 ಗುರುವಾರದಂದು ಕ್ರಿಕೆಟ್ ಜಗತ್ತಿನ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟಿಗರು ಟಿ ಟ್ವೆಂಟಿ ವಿಶ್ವಕಪ್, ಪ್ರಸ್ತುತ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಕುರಿತು ಈ ಕೆಳಕಂಡಂತೆ ಮಾತನಾಡಿದ್ದಾರೆ. ಹಾಗೂ ಆಗಸ್ಟ್ 5ರಂದು ಕ್ರಿಕೆಟ್ ಜಗತ್ತಿನಲ್ಲಿ ಜರುಗಿದ ಕೆಲ ಪ್ರಮುಖ ಘಟನೆಗಳ ಮಾಹಿತಿ ಕೂಡ ಈ ಕೆಳಗಿದೆ ಓದಿ..

ಭಾರತ vs ಇಂಗ್ಲೆಂಡ್: ಈ ಕೆಟ್ಟ ದಾಖಲೆಯಲ್ಲಿ ಧೋನಿಯನ್ನೂ ಹಿಂದಿಕ್ಕಿದ ವಿರಾಟ್ ಕೊಹ್ಲಿ!ಭಾರತ vs ಇಂಗ್ಲೆಂಡ್: ಈ ಕೆಟ್ಟ ದಾಖಲೆಯಲ್ಲಿ ಧೋನಿಯನ್ನೂ ಹಿಂದಿಕ್ಕಿದ ವಿರಾಟ್ ಕೊಹ್ಲಿ!

* ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾಗ ಕೊರೋನಾವೈರಸ್ ಸೋಂಕಿಗೆ ಒಳಗಾಗಿದ್ದ ಕೃನಾಲ್ ಪಾಂಡ್ಯ ಸದ್ಯ ಚೇತರಿಸಿಕೊಂಡಿದ್ದು ಭಾರತಕ್ಕೆ ಮರಳಿದ್ದಾರೆ.

* ಪಾಕಿಸ್ತಾನದ ವೇಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಕುರಿತು ಮಾತನಾಡಿದ್ದು ಪಾಕಿಸ್ತಾನ ತಂಡ ಭಾರತದ ವಿರುದ್ಧದ ಹಣಾಹಣಿ ನಡೆಸುವ ಕುರಿತು ಗಮನ ಹರಿಸುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ

* ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ಬೌಲರ್‌ಗಳ ಉತ್ತಮ ಪ್ರದರ್ಶನವನ್ನು ಶ್ಲಾಘಿಸಿರುವ ವಿವಿಎಸ್ ಲಕ್ಷ್ಮಣ್ ಭಾರತೀಯ ಬೌಲರ್‌ಗಳು ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದಾರೆ ಎಂದಿದ್ದಾರೆ.

* ಭಾರತದ ಮಾಜಿ ಕ್ರಿಕೆಟಿಗ ದಿಲೀಪ್ ವೆಂಗಸರ್ಕರ್ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಕುರಿತು ಮಾತನಾಡಿದ್ದು ಇಂಗ್ಲೆಂಡ್ ವಿರುದ್ಧ ಭಾರತ ಜಯ ಸಾಧಿಸಲಿದೆ ಎಂದಿದ್ದಾರೆ.

ಭಾರತ vs ಇಂಗ್ಲೆಂಡ್: ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾಗೆ ಆಪತ್ಬಾಂಧವನಾದ ಕನ್ನಡಿಗ ಕೆಎಲ್ ರಾಹುಲ್ಭಾರತ vs ಇಂಗ್ಲೆಂಡ್: ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾಗೆ ಆಪತ್ಬಾಂಧವನಾದ ಕನ್ನಡಿಗ ಕೆಎಲ್ ರಾಹುಲ್

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಮಳೆ ಆಗಮನವಾಗಿದ್ದು ಟೀಮ್ ಇಂಡಿಯಾ 4 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ. ಭಾರತದ ಪರ ಕೆ ಎಲ್ ರಾಹುಲ್ ಅಜೇಯ 57 ರನ್ ಗಳಿಸುವುದರ ಮೂಲಕ ಆಪತ್ಬಾಂಧವನಾಗಿ ನಿಂತಿದ್ದಾರೆ.

* ಗಾಯಕ್ಕೀಡಾಗಿದ್ದ ಇಂಗ್ಲೆಂಡ್ ತಂಡದ ವೇಗಿ ಜೋಫ್ರಾ ಆರ್ಚರ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಮತ್ತು ಆ್ಯಶಸ್ ಸರಣಿಯಿಂದ ಹೊರಬಿದ್ದಿದ್ದಾರೆ.

ಕೆಟ್ಟ ದಾಖಲೆ ಬರೆದ ವಿರಾಟ್ ಕೊಹ್ಲಿ

ಕೆಟ್ಟ ದಾಖಲೆ ಬರೆದ ವಿರಾಟ್ ಕೊಹ್ಲಿ

ಭಾರತದ ನಾಯಕ ವಿರಾಟ್ ಕೊಹ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆಗುವ ಮೂಲಕ ಬೇಡವಾದ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಟೆಸ್ಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಡಕ್ ಔಟ್ ಆಗಿರುವ ಭಾರತದ ನಾಯಕ ಎಂಬ ಕೆಟ್ಟ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಪಡೆದುಕೊಳ್ಳುವುದರ ಮೂಲಕ ಈ ಕೆಟ್ಟ ದಾಖಲೆಯಲ್ಲಿ ಮಹೇಂದ್ರ ಸಿಂಗ್ ಧೋನಿಯನ್ನು ಹಿಂದಿಕ್ಕಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ವಿರಾಟ್ ಕೊಹ್ಲಿ 9 ಬಾರಿ ಡಕ್ ಔಟ್ ಆಗಿದ್ದಾರೆ, ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿದರೆ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ 8 ಬಾರಿ ಡಕ್ ಔಟ್ ಆಗಿದ್ದಾರೆ ಮತ್ತು ಭಾರತದ ಮಾಜಿ ಕ್ರಿಕೆಟಿಗ ಮನ್ಸೂರ್ ಅಲಿ ಖಾನ್ ಪಟೌಡಿ 7 ಬಾರಿ ಡಕ್ ಔಟ್ ಆಗಿದ್ದಾರೆ.

ವಿರಾಟ್ ಕುರಿತು ವ್ಯಂಗ್ಯವಾಡಿದ ಡೇನಿಯಲ್ ಅಲೆಕ್ಸಾಂಡರ್

ವಿರಾಟ್ ಕುರಿತು ವ್ಯಂಗ್ಯವಾಡಿದ ಡೇನಿಯಲ್ ಅಲೆಕ್ಸಾಂಡರ್

ಇನ್ನು ಶ್ರೀಲಂಕಾದ ಕ್ರೀಡಾ ಪತ್ರಕರ್ತ ಡೇನಿಯಲ್ ಅಲೆಕ್ಸಾಂಡರ್ ವಿರಾಟ್ ಕೊಹ್ಲಿ ಡಕ್ ಔಟ್ ಆಗಿರುವ ಕುರಿತು ವ್ಯಂಗ್ಯವಾಡಿದ್ದಾರೆ. ವಿರಾಟ್ ಕೊಹ್ಲಿ ಯಾವುದೇ ರನ್ ಗಳಿಸದೆ ಮೊದಲ ಎಸೆತದಲ್ಲಿಯೇ ಗೋಲ್ಡನ್ ಡಕ್ ಔಟ್ ಆಗಿರುವ ಕಾರಣ ಭಾರತ ಕೊನೆಗೂ ಚಿನ್ನದ ಪದಕವನ್ನು ಗೆದ್ದಿದೆ ಆದರೆ ಒಲಿಂಪಿಕ್ಸ್‌ನಲ್ಲಿ ಅಲ್ಲ ಬದಲಾಗಿ ಕ್ರಿಕೆಟ್‍ನಲ್ಲಿ ಎಂದು ಡೇನಿಯಲ್ ಅಲೆಕ್ಸಾಂಡರ್ ಟೀಕೆ ಮಾಡಿದ್ದಾರೆ.

VIRAT KOHLI ಟೆಸ್ಟ್ ಮ್ಯಾಚ್ ನಲ್ಲಿ ಮಾಡಿದ ಹೊಸ ದಾಖಲೆ !! | Oneindia Kannada
 ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋಲುವ ಮೂಲಕ ಮತ್ತೊಂದು ಬೇಡವಾದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಟೆಸ್ಟ್ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಟಾಸ್ ಸೋತಿರುವ ಭಾರತದ ನಾಯಕ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಟೆಸ್ಟ್ ಕ್ರಿಕೆಟ್‍ನಲ್ಲಿ ಇದುವರೆಗೂ ಒಟ್ಟು 35 ಬಾರಿ ಟಾಸ್ ಸೋತಿರುವ ವಿರಾಟ್ ಕೊಹ್ಲಿ ಈ ದಾಖಲೆಗೆ ಒಳಗಾಗಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, August 5, 2021, 23:35 [IST]
Other articles published on Aug 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X