ದ.ಆಫ್ರಿಕಾ ಟೆಸ್ಟ್ ಸರಣಿಯಿಂದ ರೋಹಿತ್ ಔಟ್, ಡಿಕಾಕ್ ಕೂಡ ಅಲಭ್ಯ; ಡಿ.13ರ ಕ್ರಿಕೆಟ್ ರೌಂಡ್ಅಪ್

ಡಿಸೆಂಬರ್ 13ರ ಸೋಮವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವು ವಿದ್ಯಮಾನಗಳು ಜರುಗಿದ್ದು, ಒಂದೆಡೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿರುವ ಟೆಸ್ಟ್ ಸರಣಿಗೆ ಪ್ರಕಟವಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ರೋಹಿತ್ ಶರ್ಮಾ ಗಾಯದ ಸಮಸ್ಯೆಗೊಳಗಾಗಿರುವ ಕಾರಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯುತ್ತಿರುವ ಟಿ ಟ್ವೆಂಟಿ ಸರಣಿಯ ಚೊಚ್ಚಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ ಭರ್ಜರಿ ಜಯ ಸಾಧಿಸಿದೆ. ಹೀಗೆ ಡಿಸೆಂಬರ್ 13ರ ಕ್ರಿಕೆಟ್ ಸುದ್ದಿಗಳ ರೌಂಡ್ಅಪ್ ಈ ಕೆಳಕಂಡಂತಿದೆ..
* ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲನೇ ಟಿ ೨೦ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ ೬೩ ರನ್ ಗಳ ಭರ್ಜರಿ ಜಯವನ್ನು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನವನ್ನು ನೀಡಿತು. ಅತ್ತ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 200 ರನ್ ಕಲೆ ಹಾಕುವುದರ ಮೂಲಕ ಕೆರಿಬಿಯನ್ನರಿಗೆ 201 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಹಾಗೂ ಎದುರಾಳಿ ವೆಸ್ಟ್ ಇಂಡೀಸ್ ತಂಡವನ್ನು 19 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲ್ ಔಟ್ ಮಾಡಿದ ಪಾಕಿಸ್ತಾನ 63 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿದೆ. ಈ ಮೂಲಕ ಪಾಕಿಸ್ತಾನ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
* ದಕ್ಷಿಣ ಆಫ್ರಿಕಾದ ಪ್ರಮುಖ ಕ್ರಿಕೆಟಿಗ ಕ್ವಿಂಟನ್ ಡಿಕಾಕ್ ಭಾರತ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರವೇ ಲಭ್ಯವಾಗುವ ಸಾಧ್ಯತೆಯಿದೆ. ಕ್ವಿಂಟನ್ ಡಿಕಾಕ್ ಹಾಗೂ ಅವರ ಪತ್ನಿ ಸಶಾ ಹರ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು ಇದೇ ಕಾರಣದಿಂದಾಗಿ ಕ್ವಿಂಟನ್ ಡಿಕಾಕ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯವಾಗುವ ಸಾಧ್ಯತೆಯಿದೆ.
* ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯ ಮುಖ್ಯಸ್ಥರಾಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಧಿಕೃತವಾಗಿ ನೇಮಕವಾಗಿದ್ದು ಇಂದು ತಮ್ಮ ಮೊದಲ ದಿನದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಬಗ್ಗೆ ಸ್ವತಃ ವಿವಿಎಸ್ ಲಕ್ಷ್ಮಣ್ ಸಾಮಾಜಿಕ ಜಾಲತಾಣದಲ್ಲಿ ಫೊಟೋ ಹಂಚಿಕೊಂಡಿದ್ದು ಹೊಸ ಜವಾಬ್ಧಾರಿಯನ್ನು ವಹಿಸಿಕೊಂಡ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
* ಆಸ್ಟ್ರೇಲಿಯಾದ ಸ್ಫೋಟಕ ಓಪನಿಂಗ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ನವೆಂಬರ್ ತಿಂಗಳ 'ICC ಪ್ಲೇಯರ್ ಆಫ್ ದಿ Month' ಪ್ರಶಸ್ತಿಯನ್ನ ಗೆದ್ದುಕೊಂಡಿದ್ದಾರೆ. ಇನ್ನು ಮಹಿಳಾ ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಹೇಲಿ ಮ್ಯಾಥ್ಯೂಸ್ ಕೂಡ ನವೆಂಬರ್ ತಿಂಗಳ ಪ್ರಶಸ್ತಿ ಗೆದ್ದಿದ್ದಾರೆ.
* ಹರಿಣಗಳ ನಾಡಿಗೆ ಕಾಲಿಡುವ ಮುನ್ನವೇ ಟೀಂ ಇಂಡಿಯಾ ಆಘಾತ ಅನುಭವಿಸಿದೆ. ಟೀಂ ಇಂಡಿಯಾದ ಲಿಮಿಟೆಡ್ ಓವರ್ ಕ್ಯಾಪ್ಟನ್ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಗಾಯಾಳುವಾಗಿ ತಂಡದಿಂದ ಹೊರಬಿದ್ದಿದ್ದಾರೆ. ಡಿಸೆಂಬರ್ 26ರಿಂದ ಪ್ರಾರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯ ಹಿನ್ನಲೆಯಲ್ಲಿ ಭಾರತವು ಇದೇ ತಿಂಗಳು ಡಿ. 16ರಂದೇ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಬೇಕಿತ್ತು. ಆದ್ರೆ ರೋಹಿತ್ ಶರ್ಮಾ ಅಭ್ಯಾಸದ ವೇಳೆ ಗಾಯಗೊಂಡಿದ್ದು, ಇಡೀ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ.
* ಮುಂದಿನ 9 ವರ್ಷಗಳಲ್ಲಿ ಭಾರತ ಐಸಿಸಿ ಟ್ರೋಫಿ ಬೇಟೆಯಾಡಲಿದೆ 2022 ರಿಂದ 2031 ರ ನಡುವೆ ನಡೆಯಲಿರುವ ಐಸಿಸಿ ಟೂರ್ನಿಗಳಲ್ಲಿ ಭಾರತ ತಂಡವು ಪ್ರಮುಖ ಪ್ರಶಸ್ತಿ ಸ್ಪರ್ಧಿಗಳಾಗಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಅವಧಿಯಲ್ಲಿ ತಂಡವು ಐದು ಟಿ20 ವಿಶ್ವಕಪ್‌ಗಳು, ಮೂರು 50 ಓವರ್‌ಗಳ ವಿಶ್ವಕಪ್‌ಗಳು ಮತ್ತು ಎರಡು ಚಾಂಪಿಯನ್ಸ್ ಟ್ರೋಫಿಗಳಲ್ಲಿ ಭಾಗವಹಿಸಲಿದೆ. ಇದರಲ್ಲಿ ಬಹುತೇಕ ಟೂರ್ನಿಯಲ್ಲಿ ಗೆಲುವಿನ ನೆಚ್ಚಿನ ತಂಡವಾಗಿರಲಿದೆ ಎಂದು ಗಂಗೂಲಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications