For Quick Alerts
ALLOW NOTIFICATIONS  
For Daily Alerts
 

2ನೇ ಟೆಸ್ಟ್ ಗೆದ್ದ ಆಸ್ಟ್ರೇಲಿಯಾ, ಭಾರತ vs ದ.ಆಫ್ರಿಕಾ ಟೆಸ್ಟ್‌ಗೆ ಪ್ರೇಕ್ಷಕರಿಲ್ಲ: ಡಿ.20ರ ಕ್ರಿಕೆಟ್ ರೌಂಡ್ಅಪ್

What happened in the cricket world on December 20

ಡಿಸೆಂಬರ್ 20ರ ಸೋಮವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ಹಲವು ವಿದ್ಯಮಾನಗಳು ಜರುಗಿದ್ದು ಒಂದೆಡೆ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆದ ಆಶಸ್ ಟೆಸ್ಟ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 275 ರನ್‌ಗಳ ಭರ್ಜರಿ ಜಯ ಸಾಧಿಸಿದ್ದರೆ, ಮತ್ತೊಂದೆಡೆ ಭಾರತ ಮತ್ತು ದ.ಆಫ್ರಿಕಾ ನಡುವಿನ ಯಾವುದೇ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶವಿಲ್ಲ ಎಂದು ತೀರ್ಮಾನಿಸಲಾಗಿದೆ. ಹೀಗೆ ಡಿಸೆಂಬರ್ 20ರ ಕ್ರಿಕೆಟ್ ಸುದ್ದಿಗಳ ರೌಂಡ್ಅಪ್ ಈ ಕೆಳಕಂಡಂತಿದೆ.

* ಬದ್ಧ ವೈರಿಗಳ ಕಾಳಗ ಎಂದೇ ಹೆಸರು ಮಾಡಿರುವ ಆಶಸ್ ಟೆಸ್ಟ್ ಸರಣಿಯ ಈ ಬಾರಿಯ ಆವೃತ್ತಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೂಡ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗಿದೆ. ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಮುಗಿಸಿದ ಆಸ್ಟ್ರೇಲಿಯಾ ಎದುರಾಳಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಬರೋಬ್ಬರಿ 467 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಹೀಗೆ ಆಸ್ಟ್ರೇಲಿಯಾ ನೀಡಿದ್ದ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಗಳ ಊಹೆಯಂತೆ ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾಗಿ 275 ರನ್‌ಗಳ ಹೀನಾಯ ಸೋಲು ಕಂಡಿದೆ. ಪ್ರಥಮ ಮತ್ತು ದ್ವಿತೀಯ ಎರಡೂ ಇನ್ನಿಂಗ್ಸ್‌ನಲ್ಲಿಯೂ ಜವಾಬ್ದಾರಿಯುತ ಆಟವನ್ನು ಆಡಿದ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಸ್‌ಚಾಗ್ನೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

* ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಡಿಸೆಂಬರ್ 26ರಿಂದ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಆದರೆ ಈ ಟೆಸ್ಟ್ ಸರಣಿಯನ್ನು ಪ್ರೇಕ್ಷಕರಿಲ್ಲದೆ ಆಯೋಜಿಸಲು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ಧಾರ ಮಾಡಿದೆ. ಈ ಬಗ್ಗೆ ಅಧಿಕೃತವಾಗಿ ಪ್ರಕಟಣೆಯನ್ನು ಕೂಡ ಕ್ರಿಕೆಟ್ ಸೌತ್ ಆಫ್ರಿಕಾ ಹೊರಡಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಕೊರೊನಾವೈರಸ್‌ನ ಹಾವಳಿ ಅತಿಯಾಗಿದೆ. ಅದರಲ್ಲೂ ಹೊಸ ರೂಪಾಂತರಿ ಒಮೈಕ್ರಾನ್ ದಕ್ಷಿಣ ಆಫ್ರಿಕಾದಲ್ಲಿ ಸಾಕಷ್ಟು ಆತಂಕದ ವಾತಾವರಣವನ್ನುಂಟು ಮಾಡಿದೆ. ಹೀಗಾಗಿ ಮು್ನನೆಚ್ಚರಿಕಾ ಕ್ರಮವಾಗಿ ಪ್ರೇಕ್ಷಕರ ಅಲಭ್ಯತೆಯಲ್ಲಿ ಸರಣಿಯನ್ನು ಆಯೋಜನೆ ಮಾಡಲು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತೀರ್ಮಾನ ತೆಗೆದುಕೊಂಡಿದೆ.

* ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆಶಸ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಜಯ ಗಳಿಸಿದ್ದು 24 ಅಂಕಗಳನ್ನು ಪಡೆದಿದ್ದು 100ರ ಗೆಲುವಿನ ಶೇಕಡಾಂಶದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಈ ಮೂಲಕ ಈ ಹಿಂದೆ ದ್ವಿತೀಯ ಸ್ಥಾನದಲ್ಲಿದ್ದ ಪಾಕಿಸ್ತಾನ ತೃತೀಯ ಸ್ಥಾನಕ್ಕೆ ಕುಸಿದಿದ್ದು, ತೃತೀಯ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ.

* ಪಾಕಿಸ್ತಾನ ಪ್ರವಾಸಕ್ಕೆ ಸುದೀರ್ಘ ಕಾಲದ ಬಳಿಕ ತೆರಳಿದ್ದ ನ್ಯೂಜಿಲೆಂಡ್ ತಂಡ ಸರಣಿಯ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಸರಣಿಯನ್ನು ಆಡದಿರುವ ನಿರ್ಧಾರ ತೆಗೆದುಕೊಂಡಿತ್ತು. ಭದ್ರತಾ ಕಾರಣವನ್ನು ಮುಂದಿಟ್ಟುಕೊಂಡು ನ್ಯೂಜಿಲೆಂಡ್ ಮಂಡಳಿ ಈ ನಿರ್ಧಾರವನ್ನು ತೆಗೆದುಒಂಡಿತ್ತು, ಇದು ಪಾಕಿಸ್ತಾನ ತಂಡಕ್ಕೆ ಆರ್ಥಿಕವಾಗಿ ನಷ್ಟವನ್ನುಂಟು ಮಾಡಿದ್ದು ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಮುಜುಗರಕ್ಕೆ ಕಾರಣವಾಗಿತ್ತು. ಆದರೆ ಇದೀಗ ನ್ಯೂಜಿಲೆಂಡ್ ತಂಡ ಮುಂಬರುವ 2022-23ರ ಕ್ರಿಕೆಟ್ ಋತುವಿನಲ್ಲಿ ಒಂದಲ್ಲ ಎರಡು ಬಾರಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲು ನಿರ್ಧರಿಸಿದೆ. ಆದರೆ ಈ ಸರಣಿ 2022ರ ಅಂತಿಮ ಘಟ್ಟದಲ್ಲಿ ನಡೆಯಲಿದೆ. ಅಂದರೆ ಡಿಸೆಂಬರ್ ವೇಳೆಗೆ ಆಯೋಜಿಸಲು ನಿರ್ಧರಿಸಲಾಗಿದೆ. 2023ರ ಏಪ್ರಿಲ್‌ನಲ್ಲಿ ಕಿವೀಸ್ ಎರಡನೇ ಬಾರಿಗೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯಕ್ಕೆ ಮಳೆ ಅಡ್ಡಿ | Oneindia Kannada

* ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯ ಸೆಂಚುರಿಯನ್ ನಗರದ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಕ್ವಾರಂಟೈನ್ ಮುಗಿಸಿದ ಟೀಮ್ ಇಂಡಿಯಾ ಆಟಗಾರರು ಇಂದು ಕ್ರೀಡಾಂಗಣಕ್ಕೆ ಕಾಲಿಟ್ಟು ಮೈದಾನದಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗೆ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣಕ್ಕೆ ಭಾರತೀಯ ಆಟಗಾರರ ಜೊತೆ ಕಾಲಿಟ್ಟ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಲ್ಲಿನ ಪಿಚ್ ಮೇಲಿನ ಹುಲ್ಲನ್ನು ನೋಡಿ ಆಶ್ಚರ್ಯಕ್ಕೊಳಗಾಗಿದ್ದಾರೆ.

Story first published: Monday, December 20, 2021, 22:55 [IST]
Other articles published on Dec 20, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+