
ಡಿಸೆಂಬರ್ 27ರ ಸೋಮವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವು ವಿದ್ಯಮಾನಗಳು ಜರುಗಿದ್ದು, ಒಂದೆಡೆ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯದ ಎರಡನೇ ದಿನದಾಟದಂದು ಮತ್ತೆ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯ ಮೇಲುಗೈ ಸಾಧಿಸಿದ್ದರೆ, ಇಂದು ಹೊರಬಿದ್ದಿರುವ ವರದಿಯೊಂದರ ಪ್ರಕಾರ ಭಾರತ ಏಕದಿನ ಕ್ರಿಕೆಟ್ ತಂಡವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಮುನ್ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಹೀಗೆ ಡಿಸೆಂಬರ್ 27ರ ಸೋಮವಾರದ ಕ್ರಿಕೆಟ್ ರೌಂಡ್ಅಪ್ ಈ ಕೆಳಕಂಡಂತಿದೆ..
* ಅಂಡರ್ -19 ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ಅಂಡರ್-19 ತಂಡವು ಸೆಮಿಫೈನಲ್ ಪ್ರವೇಶಿಸಿದೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 260 ರನ್ ಗುರಿ ಬೆನ್ನತ್ತಿದ ಭಾರತ 10 ಎಸೆತಗಳು ಬಾಕಿ ಇರುವಂತೆಯೇ ಗುರಿ ತಲುಪಿ ಜಯ ಸಾಧಿಸಿದೆ.
* ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ನ ಎರಡನೇ ದಿನದಾಟ ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದೆ. ಮೊದಲ ದಿನದಾಟದಲ್ಲಿ ಉತ್ತಮ ಆರಂಭ ಪಡೆದಿದ್ದ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಬೃಹತ್ ಮೊತ್ತ ಕಲೆಹಾಕುವ ಯೋಜನೆಯಲ್ಲಿತ್ತು. ಆದ್ರೆ ವೆಟ್ ಔಟ್‌ಫೀಲ್ಡ್‌ನಿಂದಾಗಿ ಎರಡನೇ ದಿನದಾಟದಲ್ಲಿ ಒಂದೂ ಎಸೆತ ಕಾಣದೆ ವಾಶ್‌ಔಟ್ ಆಗಿದೆ.
ಟೀಂ ಇಂಡಿಯಾದಲ್ಲಿ ಹೋರಾಟದ ಕಿಚ್ಚು ಹಚ್ಚಿದ ರವಿಶಾಸ್ತ್ರಿಯ ಆ ಸಂದರ್ಭವನ್ನ ಕ್ರಿಕೆಟ್ ದಿಗ್ಗಜ ಗವಾಸ್ಕರ್ ನೆನಪಿಸಿಕೊಂಡಿದ್ದು, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ ಪಂದ್ಯವೊಂದ್ರಲ್ಲಿ ಭಾರತ 36ರನ್‌ಗಳಿಗೆ ಆಲೌಟ್ ಆದ್ರೂ ಹೇಗೆ ಸರಣಿ ಗೆದ್ದು ಬಂದಿತು ಎಂಬುದನ್ನ ತಿಳಿಸಿದ್ದಾರೆ. ಇದೇ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿತ್ತು. ಅಡಿಲೇಡ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆಸೀಸ್ ವೇಗಿಗಳ ದಾಳಿಗೆ ತತ್ತರಿಸಿದ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ಕನಿಷ್ಠ ಮೊತ್ತಕ್ಕೆ ಆಲೌಟ್ ಆಯ್ತು. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಕಳೆದ 70 ವರ್ಷಗಳಲ್ಲಿ ಅತ್ಯಂತ ಕನಿಷ್ಠ ಮೊತ್ತಕ್ಕೆ (36 ರನ್) ಆಲೌಟ್ ಆಗುವು ಮೂಲಕ ಭಾರೀ ಮುಖಭಂಗ ಎದುರಿಸಿತು.
* ಹಾಗೂ ತಾವು ಕೋಚ್ ಆಗಿ ಆಯ್ಕೆಯಾಗುವ ಮುನ್ನ ಟೀಮ್ ಡೈರೆಕ್ಟರ್ ಆಗಿ ರವಿಶಾಸ್ತ್ರಿ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿಯೂ ಕೂಡ ಜರುಗಿದ ಕೆಲ ಪ್ರಮುಖ ಘಟನೆಗಳ ಕುರಿತು ರವಿ ಶಾಸ್ತ್ರಿ ಸಂದರ್ಶನದಲ್ಲಿ ಹಂಚಿಕೊಂಡಿದ್ದು, ಭಾರತದ ಮಾಜಿ ಕ್ರಿಕೆಟಿಗ ಎಂ ಎಸ್ ಧೋನಿ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿದಾಗ ಟೀಮ್ ಇಂಡಿಯಾದಲ್ಲಿ ಯಾವ ರೀತಿಯ ವಾತಾವರಣವಿತ್ತು ಮತ್ತು ಎಂಎಸ್ ಧೋನಿ ಯಾವ ರೀತಿಯಲ್ಲಿ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಲು ತೀರ್ಮಾನ ತೆಗೆದುಕೊಂಡಿದ್ದೇನೆ ಎಂಬ ವಿಚಾರವನ್ನು ತಿಳಿಸಿದರು ಎಂಬುದನ್ನು ರವಿಶಾಸ್ತ್ರಿ ಈ ಕೆಳಕಂಡಂತೆ ಬಿಚ್ಚಿಟ್ಟಿದ್ದಾರೆ.
* ಈ ಹಿಂದೆ ಭಾರತ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದಾಗ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಇದೇ ರೀತಿ ಮಳೆ ಅಡ್ಡಿಯುಂಟು ಮಾಡಿತ್ತು, ಹಾಗೂ ಇದೀಗ ಕೂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿಯೇ ಮಳೆ ಅಡ್ಡಿಯನ್ನುಂಟು ಮಾಡುತ್ತಿದೆ. ಹೀಗಾಗಿ ಟೆಸ್ಟ್ ಪಂದ್ಯಗಳಿಗೆ ಹೆಚ್ಚುವರಿ ದಿನದ ಅವಶ್ಯಕತೆ ಇದೆ ಎಂದು ನೆಟ್ಟಿಗರೊಬ್ಬರು ಹೇಳಿಕೆ ಬರೆದುಕೊಂಡಿದ್ದಾರೆ.
* ಎಂಎಸ್ ಧೋನಿ ಏಕಾಏಕಿ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಘೋಷಿಸಿದ್ದರ ಹಿಂದೆ ಆಲೋಚನೆಗಳು ಕೂಡ ಇದ್ದವು ಎಂದು ರವಿಶಾಸ್ತ್ರಿ ಹೇಳಿದ್ದಾರೆ. ತಾನು ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ನಂತರ ಟೀಮ್ ಇಂಡಿಯಾವನ್ನು ಮುನ್ನಡೆಸಲು ಸರಿಯಾದ ಆಟಗಾರ ಇರುವ ವಿಷಯವನ್ನು ಎಂಎಸ್ ಧೋನಿ ಚೆನ್ನಾಗಿ ಅರಿತ ನಂತರವಷ್ಟೇ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದರು ಎಂದು ರವಿಶಾಸ್ತ್ರಿ ಹೇಳಿದ್ದಾರೆ. ರವಿಶಾಸ್ತ್ರಿ ಮಾತಿನ ಪ್ರಕಾರ ವಿರಾಟ್ ಕೊಹ್ಲಿ ನಾಯಕತ್ವವನ್ನು ನಿರ್ವಹಿಸುವಷ್ಟು ಜವಾಬ್ದಾರಿ ಹೊಂದಿದ್ದಾರೆ ಎಂಬ ವಿಷಯವನ್ನು ಚೆನ್ನಾಗಿ ಅರಿತ ನಂತರವಷ್ಟೇ ಎಂ ಎಸ್ ಧೋನಿ ಟೆಸ್ಟ್ ಕ್ರಿಕೆಟ್‍ನಿಂದ ನಿವೃತ್ತಿ ಹೊಂದಿದರು. 3 ಆವೃತ್ತಿಗಳಲ್ಲಿಯೂ ಭಾರತ ತಂಡವನ್ನು ಮುನ್ನಡೆಸಿ ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದ ಎಂಎಸ್ ಧೋನಿ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುವ ಆಟಗಾರನಿಗೋಸ್ಕರ ಕಾಯುತ್ತಿದ್ದರು ಎಂದು ರವಿ ಶಾಸ್ತ್ರಿ ಬಿಚ್ಚಿಟ್ಟಿದ್ದಾರೆ.