ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಭಾರತ: ಡಿಸೆಂಬರ್ 6ರ ಕ್ರಿಕೆಟ್‍ ಸುದ್ದಿಗಳು

ಡಿಸೆಂಬರ್ 6ರ ಸೋಮವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ಹಲವು ಪ್ರಮುಖ ವಿದ್ಯಮಾನಗಳು ಜರುಗಿದ್ದು ಒಂದೆಡೆ ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಮ್ ಇಂಡಿಯಾ 372 ರನ್‌ಗಳ ಅಂತರದ ಬೃಹತ್ ಗೆಲುವನ್ನು ದಾಖಲಿಸುವುದರ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಲ್ಲಿ ವಶಕ್ಕೆ ಪಡೆದುಕೊಂಡಿದ್ದರೆ, ಮತ್ತೊಂದೆಡೆ ವಾಂಖೆಡೆ ಕ್ರಿಕೆಟ್‌ ಕ್ರೀಡಾಂಗಣದ ಪಿಚ್ ಮೇಲ್ವಿಚಾರಕರಿಗೆ ಟೀಮ್ ಇಂಡಿಯಾ 35,000 ರೂಪಾಯಿಗಳನ್ನು ಡೊನೇಷನ್ ಆಗಿ ನೀಡಿದೆ. ಹೀಗೆ ಡಿಸೆಂಬರ್ 6ರ ಪ್ರಮುಖ ಕ್ರಿಕೆಟ್ ಸುದ್ದಿಗಳು ಈ ಕೆಳಕಂಡಂತಿವೆ..

* ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಇತ್ತೀಚಿನ ದಿನಗಳಲ್ಲಿ ಮಂಕಾದಂತೆ ಕಂಡುಬರುತ್ತಿದೆ. ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕ ಸಿಡಿಯದೆ ಅದಾಗಲೇ ಎರಡು ವರ್ಷಗಳಾಗಿದೆ. ಹಾಗಿದ್ದರೂ ವಿರಾಟ್ ಕೊಹ್ಲಿ ಒಂದರ ನಂತರ ಮತ್ತೊಂದು ದಾಖಲೆಯನ್ನು ಮಾಡುತ್ತಲೇ ಇದ್ದಾರೆ. ಇದೀಗ ವಿಶ್ವ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿ 50 ಗೆಲುವು ಸಾಧಿಸಿದ ಪ್ರಥಮ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

* ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಗೆಲುವಿನ ಮೂಲಕ ಸರಣಿಯನ್ನು ವಶಕ್ಕೆ ಪಡೆದಿರುವ ಭಾರತೀಯ ಕ್ರಿಕೆಟ್ ತಂಡ ತವರಿನಲ್ಲಿ ಟೆಸ್ಟ್ ಸರಣಿಯ ಸತತ ಗೆಲುವಿನ ಸಾಧನೆಯನ್ನು 14ನೇ ಸರಣಿಗೂ ವಿಸ್ತರಿಸಿದೆ. ಅಲ್ಲದೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತದಲ್ಲಿ ಆಡಿದ 11 ಸರಣಿಗಳ ಪೈಕಿ 11ರಲ್ಲಿಯೂ ಭಾರತ ವಿಜಯ ಸಾಧಿಸಿದೆ ಎಂಬುದು ಗಮನಾರ್ಹ ಸಂಗತಿ. ಇನ್ನು ನ್ಯೂಜಿಲೆಂಡ್ ವಿರುದ್ಧ ಭಾರತ ಕಳೆದ ಹಲವು ವರ್ಷಗಳಿಂದ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಇದರಲ್ಲಿ ಭಾರತ ಸರಣಿಯನ್ನು ಸೋತೇ ಇಲ್ಲ. ಇದು ತವರಿನಲ್ಲಿ ನ್ಯೂಜಿಲೆಂಡ್ ತಮಡದ ವಿರುದ್ಧ ಭಾರತ ಗೆಲುವು ಸಾಧಿಸುತ್ತಿರುವ ಸತತ 4ನೇ ಸರಣಿ ಗೆಲುವಾಗಿದೆ. ನ್ಯೂಜಿಲೆಂಡ್ ಭಾರತದ ವಿರುದ್ಧ ಭಾರತದಲ್ಲಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು 1988ರಲ್ಲಿ. ಅಲ್ಲಿಂದ ಈವರೆಗೆ ಕಿವೀಸ್ ಪಡೆ ಭಾರತದಲ್ಲಿ ಒಂದೇ ಒಂಡು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

* ಮುಂಬೈ ಟೆಸ್ಟ್‌ನಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದರೂ ನ್ಯೂಜಿಲೆಂಡ್ ತಂಡದ ಸ್ಪಿನ್ನರ್ ಸಾಧನೆಗೆ ಕ್ರಿಕೆಟ್ ಪ್ರೇಮಿಗಳು ಭಾರೀ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನಿಂಗ್ಸ್‌ವೊಂದರ ಎಲ್ಲಾ 10 ವಿಕೆಟ್‌ಗಳನ್ನು ಪಡೆಯುವ ಮೂಲಕ ಅಜಾಜ್ ಪಟೇಲ್ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಅಜಾಜ್ ಪಟೇಲ್‌ಗೆ ಟೀಮ್ ಇಂಡಿಯಾ ಕಡೆಯಿಂದ ವಿಶೇಷ ಉಡುಗೊರೆಯೊಂದು ದೊರೆತಿದೆ. ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕೂಡ ಸಹಿ ಹಾಕಿದ ಜರ್ಸಿಯನ್ನು ಕಿವೀಸ್ ತಂಡದ ಆಟಗಾರನಿಗೆ ನೀಡಿದ್ದಾರೆ. ಅಲ್ಲದೆ ಮುಂಬೈ ಮುಂಬೈ ಕ್ರಿಕೆಟ್ ಅಸೋಸಿಯೇಶನ್(ಎಂಸಿಎ) ಕೂಡ ಅಜಾಜ್ ಪಟೇಲದ ಅವರ ಈ ಸಾಧನೆಗೆ ವಿಶೇಷ ಸನ್ಮಾನವನ್ನು ಮಾಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದಿದ್ದ ಪಟೇಲ್ ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಸಂಪಾದಿಸಿದ್ದು ಒಟ್ಟು 14 ವಿಕೆಟ್ ಗಳಿಸಿದ್ದಾರೆ.

* ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ಮುಗಿದ ನಂತರ 2021-23ರ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಅಂಕ ಪಟ್ಟಿ ಈ ಕೆಳಕಂಡಂತಿದೆ. ಇದುವರೆಗೂ ಒಟ್ಟು 1 ಸರಣಿಯನ್ನು ಆಡಿರುವ ಶ್ರೀಲಂಕಾ ಆ ಸರಣಿಯ ಎಲ್ಲಾ 2 ಪಂದ್ಯಗಳಲ್ಲಿಯೂ ಜಯ ಗಳಿಸುವುದರ ಮೂಲಕ 24 ಅಂಕ ಮತ್ತು ಗೆಲುವಿನ ಶೇಕಡಾಂಶ 100ನ್ನು ಪಡೆದುಕೊಂಡಿದೆ. ಈ ಮೂಲಕ ಯಾವುದೇ ಡ್ರಾ, ಸೋಲು ಮತ್ತು ಪೆನಾಲ್ಟಿಗೆ ಒಳಗಾಗದೇ ಇರುವ ಶ್ರೀಲಂಕಾ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಇದುವರೆಗೂ ಒಟ್ಟು 2 ಸರಣಿಗಳನ್ನು ಆಡಿರುವ ಪಾಕಿಸ್ತಾನ ಆ ಸರಣಿಗಳ ಪೈಕಿ 2 ಪಂದ್ಯಗಳಲ್ಲಿ ಗೆದ್ದು, 1 ಪಂದ್ಯದಲ್ಲಿ ಸೋತು, 24 ಅಂಕಗಳನ್ನು ಪಡೆದುಕೊಂಡು, 66.6 ಗೆಲುವಿನ ಶೇಕಡಾಂಶದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಇದುವರೆಗೂ ಒಟ್ಟು 2 ಟೆಸ್ಟ್ ಸರಣಿಗಳಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾ 3 ಪಂದ್ಯಗಳಲ್ಲಿ ಗೆದ್ದು, 1 ಪಂದ್ಯದಲ್ಲಿ ಸೋತು, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡು, 42 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ. ಹೀಗೆ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳಿಗಿಂತ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡರೂ ಸಹ ಟೀಮ್ ಇಂಡಿಯಾ ತೃತೀಯ ಸ್ಥಾನ ಪಡೆದುಕೊಳ್ಳುವುದಕ್ಕೆ ಕಾರಣ ಗೆಲುವಿನ ಶೇಕಡಾಂಶ ಮತ್ತು ಪೆನಾಲ್ಟಿ. ಹೌದು, ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳಿಗಿಂತ ಟೀಮ್ ಇಂಡಿಯಾ ಹೆಚ್ಚು ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡಿದೆ ಹಾಗೂ ಪಂದ್ಯವೊಂದರಲ್ಲಿ ಸೋತಿದೆ ಕೂಡ. ಹೀಗಾಗಿಯೇ ಟೀಮ್ ಇಂಡಿಯಾದ ಗೆಲುವಿನ ಶೇಕಡಾಂಶ ಕೇವಲ 58.33 ಇದ್ದು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದೆ.

ವಿರಾಟ್ ಕೊಹ್ಲಿ ಅಭಿಮಾನಿಗಳ ಒತ್ತಾಯದ ಮೇರೆಗೆ ಕುಣಿದದ್ದು ಹೀಗೆ | Oneindia Kannada

For Quick Alerts
ALLOW NOTIFICATIONS
For Daily Alerts
Story first published: Monday, December 6, 2021, 22:12 [IST]
Other articles published on Dec 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X