For Quick Alerts
ALLOW NOTIFICATIONS  
For Daily Alerts
 

ಟಿ20 ಶ್ರೇಯಾಂಕದಲ್ಲಿ 4 ಸ್ಥಾನ ಕುಸಿದ ಕೊಹ್ಲಿ; ನವೆಂಬರ್‌ 10ರ ಕ್ರಿಕೆಟ್ ಸುದ್ದಿಗಳು

What happened in the cricket world on November 10

ನವೆಂಬರ್‌ 10ರ ಬುಧವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ಜರುಗಿದ್ದು ಒಂದೆಡೆ ನೂತನ ಟಿ20 ಶ್ರೇಯಾಂಕ ಪ್ರಕಟವಾಗಿದ್ದು ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರೆ ಮತ್ತೊಂದೆಡೆ ನ್ಯೂಜಿಲೆಂಡ್‌ ವಿರುದ್ಧದ ಟಿ 20 ಸರಣಿಗೆ ಆಯ್ಕೆಯಾಗಿರುವ ವೆಂಕಟೇಶ್ ಐಯ್ಯರ್ ವಿರಾಟ್ ಕೊಹ್ಲಿ ತನಗೆ ನೀಡಿದ್ದ ಹಳೇ ಸಂದೇಶವನ್ನು ನೆನಪಿಸಿಕೊಂಡಿದ್ದಾರೆ. ಹೀಗೆ ಕ್ರಿಕೆಟ್‌ ಜಗತ್ತಿನಲ್ಲಿ ನವೆಂಬರ್‌ 10ರಂದು ನಡೆದ ಕೆಲ ಪ್ರಮುಖ ಘಟನೆಗಳ ಪಟ್ಟಿ ಈ ಕೆಳಕಂಡಂತಿದೆ..

* ದುಬೈನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಆರಂಭಿಕ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಸೋಲಿನ ಬಳಿಕ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಅದ್ರಲ್ಲೂ ವಿರಾಟ್ ಕೊಹ್ಲಿ ಮಗಳಿಗೆ ಆನ್‌ಲೈನ್‌ನಲ್ಲಿ ಅತ್ಯಾಚಾರದ ಬೆದರಿಕೆಯನ್ನು ಒಡ್ಡಿದ್ದ ಯುವಕನನ್ನು ಬಂಧಿಸುವಲ್ಲಿ ಸೈಬರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಹೈದ್ರಾಬಾದ್‌ನಲ್ಲಿ ನೆಲೆಸಿದ್ದ 23 ವರ್ಷದ ರಾಮನಾಗೇಶ್‌ ಅಲಿಬತಿನಿ ಎಂಬ ಯುವಕನನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನ ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ.

*ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಮುಕ್ತಾಯವಾದ ನಂತರ ಐಸಿಸಿ ನೂತನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ನಾಲ್ಕು ಸ್ಥಾನ ಕುಸಿತ ಕಂಡಿದ್ದು 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಐದನೇ ಸ್ಥಾನವನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ತಮ್ಮ ಅಂಕವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಮೂಲಕ ಉತ್ತಮ ಅಂತರವನ್ನು ಕಾಯ್ದುಕೊಂಡಿದ್ದಾರೆ. ಈ ಮೂಲಕ ಅಗ್ರ ಸ್ಥಾನದಲ್ಲಿ ಭದ್ರವಾಗಿ ನೆಲೆಯೂರಿದ್ದಾರೆ ಪಾಕ್ ನಾಯಕ.

* ಆರ್‌ಸಿಬಿ ಪರ ಮಿಂಚಿನ ದಾಳಿ ನಡೆಸಿದ ಹರ್ಷಲ್ ಪಟೇಲ್ ತಮ್ಮ ಅಮೋಘ ಫಾರ್ಮ್ ಅನ್ನು ಅಂತರಾಷ್ಟ್ರೀಯ ಮಟ್ಟದಲ್ಲೂ ಮುಂದುವರೆಸಬಹುದು ಎಂದು ಸುನಿಲ್ ಗವಾಸ್ಕರ್ ಊಹಿಸಿದ್ದಾರೆ. ಹರಿಯಾಣದ ಆಲ್‌ರೌಂಡರ್ ಅವರ ಕಠಿಣ ಪ್ರಯತ್ನಕ್ಕೆ ಸಿಕ್ಕ ಬಹುಮಾನ ಇದಾಗಿದೆ. ಇದನ್ನು ಎಲ್ಲರೂ ಪಾಲಿಸಬೇಕು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ. ''ಐಪಿಎಲ್‌ನಲ್ಲಿ ಅವರ ಪ್ರದರ್ಶನವನ್ನು ನೋಡಿ, ಅವರು ಈ ಟೀಮ್ ಇಂಡಿಯಾ ಕ್ಯಾಪ್‌ಗೆ ಅರ್ಹರು. ಅವರು ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಮತ್ತು ವಯಸ್ಸಿನ ಬಗ್ಗೆ ಯಾರೂ ಯೋಚಿಸಬೇಡಿ. ಏಕೆಂದರೆ 15 ದಿನಗಳ ಹಿಂದೆ ಅವರು ಇಷ್ಟು ವಿಕೆಟ್‌ಗಳನ್ನು ಪಡೆದಿದ್ದು, ಇದೇ ರೀತಿಯ ವಿಕೆಟ್ ಪಡೆಯುವುದನ್ನು ತಡೆಯಲಾಗದು. ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಮತ್ತು ಅವರ ಪ್ರಯತ್ನಗಳಿಗೆ ಪ್ರತಿಫಲವನ್ನು ಪಡೆದಿದ್ದಾರೆ ಹಾಗೂ ನಾವು ಅದನ್ನು ಪಾಲಿಸಬೇಕು." ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಈತನ ಎಂಟ್ರಿಯಿಂದ ಟೀಂ ಇಂಡಿಯಾದಲ್ಲಿ ಹಾರ್ದಿಕ್ ಭವಿಷ್ಯ ಅತಂತ್ರ | Oneindia Kannada

Story first published: Wednesday, November 10, 2021, 20:37 [IST]
Other articles published on Nov 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+