ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್‌ ವಿರುದ್ಧ ಟೀಮ್ ಇಂಡಿಯಾಗೆ ದ್ವಿತೀಯ ಜಯ; ನವೆಂಬರ್‌ 19ರ ಕ್ರಿಕೆಟ್‍ ಸುದ್ದಿಗಳು

What happened in the cricket world on November 19

ನವೆಂಬರ್‌ 19ರ ಶುಕ್ರವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ಜರುಗಿದ್ದು ಒಂದೆಡೆ ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ್ದು 3 ಪಂದ್ಯಗಳ ಟಿ 20 ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸುವುದರ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದ್ದರೆ ಮತ್ತೊಂದೆಡೆ ಎಬಿ ಡಿವಿಲಿಯರ್ಸ್ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. ಇನ್ನೂ ಮುಂತಾದ ನವೆಂಬರ್‌ 19ರ ಕ್ರಿಕೆಟ್ ಸುದ್ದಿಗಳು ಈ ಕೆಳಕಂಡಂತಿವೆ.

* ವಿಶ್ವ ಕ್ರಿಕೆಟ್‌ನ ದಿಗ್ಗಜ ಆಟಗಾರರಲ್ಲಿ ಒಬ್ಬರೆನಿಸಿರುವ ಎಬಿ ಡಿವಿಲಿಯರ್ಸ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಎಬಿ ಡಿವಿಲಿಯರ್ಸ್ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದು ಐಪಿಎಲ್ ಸಹಿತ ಉಳಿದ ಎಲ್ಲಾ ಕ್ರಿಕೆಟ್‌ನಿಂದಲೂ ನಿವೃತ್ತಿಯನ್ನು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಮೂಲದ ಈ ದಿಗ್ಗಜ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಈಗಾಗಲೇ ನಿವೃತ್ತಿಯನ್ನು ಪಡೆದಿದ್ದರು. ಆದರೆ ಲೀಗ್ ಕ್ರಿಕೆಟ್‌ಗಳ ಮೂಲಕ ಸಕ್ರಿಯವಾಗಿದ್ದು ಅಭಿಮಾನಿಗಳನ್ನು ರಂಜಿಸುತ್ತಿದ್ದರು. ಕಳೆದ ಹಲವು ವರ್ಷಗಳಿಮದ ಆರ್‌ಸಿಬಿ ಪರವಾಗಿ ಐಪಿಎಲ್‌ನಲ್ಲಿ ಆಡುತ್ತಿದ್ದ ಎಬಿ ಡಿವಿಲಿಯರ್ಸ್ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೊಂದು ಅದ್ಭುತವಾದ ಪ್ರಯಾಣವಾಗಿದ್ದು ಈಗ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಿವೃತ್ತಿಯನ್ನು ಘೋಷಿಸುತ್ತಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಘೋಷಿಸಿದ್ದಾರೆ.

* ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಚುಟುಕು ಕ್ರಿಕೆಟ್ ಸರಣಿಯನ್ನ ಮುಡಿಗೇರಿಸಿಕೊಂಡಿದೆ. ಹೊಸ ನಾಯಕ ರೋಹಿತ್ ಶರ್ಮಾ ಮತ್ತು ಹೊಸ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ಮೊದಲ ಸರಣಿಯನ್ನ ಗೆದ್ದು ಬೀಗಿದೆ. ಸತತ ಎರಡು ಟಿ20 ಪಂದ್ಯ ಗೆದ್ದ ಭಾರತವು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ತನ್ನದಾಗಿಸಿಕೊಂಡಿದೆ. ಚೊಚ್ಚಲ ಪಂದ್ಯದಲ್ಲೇ ನಾಲ್ಕು ಓವರ್‌ಗಳಿಗೆ 25 ರನ್‌ ನೀಡಿ 2 ವಿಕೆಟ್ ಕಬಳಿಸಿದ ಹರ್ಷಲ್ ಪಟೇಲ್, ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆಯುವ ಮೂಲಕ ಮಿಂಚಿದ್ದಾರೆ.

* ನ್ಯೂಜಿಲೆಂಡ್ ತಂಡದ ಸ್ಫೋಟಕ ಓಪನರ್ ಮಾರ್ಟಿನ್ ಗಪ್ಟಿಲ್‌, ಟೀಮ್ ಇಂಡಿಯಾದ ಚೇಸಿಂಗ್ ಮಾಸ್ಟರ್ ವಿರಾಟ್‌ ಕೊಹ್ಲಿಯ ಬಹುದೊಡ್ಡ ದಾಖಲೆಯೊಂದನ್ನ ಸರಿಗಟ್ಟಿದ್ದಾರೆ. ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಷನಲ್‌ ಸ್ಟೇಡಿಯಂನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ 35 ವರ್ಷದ ಮಾರ್ಟಿನ್ ಗಪ್ಟಿಲ್ ಮೊದಲ ಓವರ್‌ನಲ್ಲಿ ಭುವನೇಶ್ವರ್ ಬೌಲಿಂಗ್‌ನಲ್ಲಿ 14 ರನ್‌ಗಳನ್ನ ಕಲೆಹಾಕಿದ್ರು. ಇದೇ ಓವರ್‌ನಲ್ಲಿ ಮಾರ್ಟಿನ್ ಗಪ್ಟಿಲ್ ಮಾಡ್ರನ್ ಲೆಜೆಂಡ್ ವಿರಾಟ್‌ ಕೊಹ್ಲಿ ಹೆಸರಲಿದ್ದ ಅಪರೂಪದ ದಾಖಲೆಯನ್ನ ತಮ್ಮದಾಗಿಸಿಕೊಂಡ್ರು. ಹೌದು ಮಾರ್ಟಿನ್ ಗಪ್ಟಿಲ್ ಸದ್ಯ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಕಲೆಹಾಕಿರುವ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತದ ವಿರುದ್ಧ 15 ಎಸೆತಗಳಲ್ಲಿ 31 ರನ್‌ ಸಿಡಿಸಿ ವಿಕೆಟ್ ಒಪ್ಪಿಸಿದ ಗಪ್ಟಿಲ್ ಟಿ20 ಕ್ರಿಕೆಟ್‌ನಲ್ಲಿ 3,231ರನ್ ಕಲೆಹಾಕಿದ್ರು. ಈ ಮೂಲಕ ವಿರಾಟ್ ಹೆಸರಲ್ಲಿ 3,227ರನ್‌ಗಳ ದಾಖಲೆಯನ್ನ ಸರಿಗಟ್ಟಿದ್ರು.

* ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ರೋಚಕ ಗೆಲುವು ಸಾಧಿಸಿದೆ. ಬಾಂಗ್ಲಾದೇಶದ ಶೇರ್‌ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ತಂಡಗಳ ಮಧ್ಯೆ ಸಾಕಷ್ಟು ಪೈಪೋಟಿಯ ಸೆಣೆಸಾಟ ನಡೆದರು ಕೂಡ ಅಂತಿಮವಾಗಿ ಪಾಕಿಸ್ತಾನ ಭರ್ಜರಿಯಾಗಿ ಗೆದ್ದುಕೊಂಡಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ 127 ರನ್‌ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಪಾಕಿಸ್ತಾನ ಇನ್ನೂ ನಾಲ್ಕು ಎಸೆತಗಳು ಬಾಕಿಯಿರುವಂತೆಯೇ 4 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.

ಸೆಮಿ ಫೈನಲ್ ಪ್ರವೇಶಿಸಿದ ಕರ್ನಾಟಕ , ಸೂಪರ್ ಓವರ್ ನಲ್ಲಿ ಗೆಲುವು | Oneindia Kannada

Story first published: Saturday, November 20, 2021, 8:25 [IST]
Other articles published on Nov 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X