ಅಕ್ಟೋಬರ್ 13ರಂದು ಕ್ರಿಕೆಟ್‌ ಜಗತ್ತಿನಲ್ಲಿ ನಡೆದದ್ದೇನು?

ಅಕ್ಟೋಬರ್ 13, ಬುಧವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ಜರುಗಿದ್ದು, ಒಂದೆಡೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಧರಿಸಲಿರುವ ಜೆರ್ಸಿಯನ್ನು ಅನಾವರಣಗೊಳಿಸಲಾಯಿತು. ಮತ್ತೊಂದೆಡೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕ್ವಾಲಿಫೈಯರ್ 2 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಿದವು. ಹೀಗೆ ಅಕ್ಟೋಬರ್ 13ರ ಬುಧವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಘಟನೆಗಳು ನಡೆದಿದ್ದು,ಅವುಗಳ ಕಿರುನೋಟ ಈ ಕೆಳಕಂಡಂತಿದೆ..

* ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಬೌಲರ್ ಬ್ರೆಟ್ ಲೀ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಆಸ್ಟ್ರೇಲಿಯಾ ತಂಡ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಸದ್ಯಕ್ಕಿರುವ ಆಸ್ಟ್ರೇಲಿಯಾ ತಂಡ ಹಿಂದೆಗಿಂತಲೂ ತುಂಬಾ ಬಲಿಷ್ಠವಾದ ತಂಡವಾಗಿದ್ದು ಟ್ರೋಫಿ ಗೆಲ್ಲುವಲ್ಲಿ ಸಫಲವಾಗಲಿದೆ ಎಂದಿದ್ದಾರೆ.

ಐಪಿಎಲ್ ಯುಎಇ ಚರಣದಲ್ಲಿ ಆರ್‌ಸಿಬಿಗೆ ಕೈಕೊಟ್ಟು 'ಫ್ಲಾಪ್ ಸ್ಟಾರ್' ಆದ ಸ್ಟಾರ್ ಬ್ಯಾಟ್ಸ್‌ಮನ್‌ ಇವರೇ!ಐಪಿಎಲ್ ಯುಎಇ ಚರಣದಲ್ಲಿ ಆರ್‌ಸಿಬಿಗೆ ಕೈಕೊಟ್ಟು 'ಫ್ಲಾಪ್ ಸ್ಟಾರ್' ಆದ ಸ್ಟಾರ್ ಬ್ಯಾಟ್ಸ್‌ಮನ್‌ ಇವರೇ!

* ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಮುಂಬರಲಿರುವ ಐಪಿಎಲ್ ಟೂರ್ನಿಯಲ್ಲಿ 2 ಹೊಸ ತಂಡಗಳ ಸೇರ್ಪಡೆಯಾಗುತ್ತಿದ್ದು ಟೂರ್ನಿ ಮತ್ತಷ್ಟು ದೊಡ್ಡ ಮಟ್ಟದ್ದಾಗುತ್ತಿರುವ ಕಾರಣ ಟೂರ್ನಿಯಲ್ಲಿ ಭಾಗವಹಿಸುವ ಇಂಗಿತವನ್ನು ಜೋ ರೂಟ್ ವ್ಯಕ್ತಪಡಿಸಿದ್ದಾರೆ.

* ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಈ ಹಿಂದೆ ಪ್ರಕಟವಾಗಿದ್ದ ಭಾರತ ತಂಡದಲ್ಲಿ ಬಿಸಿಸಿಐ ನೂತನ ಬದಲಾವಣೆಯನ್ನು ತಂದಿದ್ದು ಈ ಬೌಲರ್ ಅಕ್ಷರ್ ಪಟೇಲ್ ಅವರನ್ನು ತಂಡದಿಂದ ಕೈಬಿಟ್ಟು, ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

* ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಡೇವಿಡ್ ಗೋವರ್ ವಿರಾಟ್ ಕೊಹ್ಲಿ ತಮ್ಮ ನಾಯಕತ್ವದಲ್ಲಿ ಮೊಟ್ಟಮೊದಲ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

* ಮಾಜಿ ಕ್ರಿಕೆಟಿಗ ಡೇವಿಡ್ ಲಾಯ್ಡ್ ಆಸ್ಟ್ರೇಲಿಯಾ ವಿರುದ್ಧದ ಆಶಸ್ ಸರಣಿಗೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡದ ಕುರಿತು ಕಿಡಿಕಾರಿದ್ದಾರೆ.

ಎಲಿಮಿನೇಟರ್ ಪಂದ್ಯದಲ್ಲಿ ಕೊಹ್ಲಿ ಮಾಡಿದ ಈ ತಪ್ಪಿನಿಂದಲೇ ಆರ್‌ಸಿಬಿ ಸೋಲುಂಡಿತು: ಗಂಭೀರ್ಎಲಿಮಿನೇಟರ್ ಪಂದ್ಯದಲ್ಲಿ ಕೊಹ್ಲಿ ಮಾಡಿದ ಈ ತಪ್ಪಿನಿಂದಲೇ ಆರ್‌ಸಿಬಿ ಸೋಲುಂಡಿತು: ಗಂಭೀರ್

* ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಕ್ವಾಲಿಫೈಯರ್ 2 ಪಂದ್ಯಕ್ಕೂ ಮುನ್ನ ಮಾತನಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಡ್ ಕೋಚ್ ರಿಕಿ ಪಾಂಟಿಂಗ್ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ಹೊಸ ಜರ್ಸಿ ಅನಾವರಣ:ನಿಮ್ಗೂ ಇದೆ ಧರಿಸೋ ಅವಕಾಶ | Oneindia Kannada

* ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ವಿರಾಟ್ ಕೊಹ್ಲಿ ನಂತರ ಮುಂಬರಲಿರುವ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಜೋಸ್ ಬಟ್ಲರ್ ಮಹೇಂದ್ರ ಸಿಂಗ್ ಧೋನಿ ರೀತಿಯ ನಾಯಕತ್ವದ ಗುಣಗಳನ್ನು ಹೊಂದಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಲು ಸರಿಯಾದ ನಾಯಕ ಎಂದಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 20 - October 27 2021, 03:30 PM
ಇಂಗ್ಲೆಂಡ್
ಬಾಂಗ್ಲಾದೇಶ್
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, October 13, 2021, 22:55 [IST]
Other articles published on Oct 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X