ನಮೀಬಿಯಾ ಸೂಪರ್12ಗೆ, ರದ್ದಾಗಿದ್ದ ಭಾರತ vs ಇಂಗ್ಲೆಂಡ್ ಟೆಸ್ಟ್ ದಿನಾಂಕ ಪ್ರಕಟ; ಅ.22ರ ಪ್ರಮುಖ ಸುದ್ದಿಗಳು

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಅಂತ ಶುರುವಾಗುವ ಸನಿಹ ಬರುತ್ತಿದ್ದಂತೆಯೇ ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಪ್ರಮುಖ ವಿದ್ಯಮಾನಗಳು ಜರುಗಿವೆ. ಹೀಗೆ ಅಕ್ಟೋಬರ್ 22ರ ಶುಕ್ರವಾರದಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದ ಕೆಲ ಪ್ರಮುಖ ವಿದ್ಯಮಾನಗಳ ಕಿರುನೋಟ ಈ ಕೆಳಕಂಡಂತಿದೆ.
* ಇಂದು (ಅಕ್ಟೋಬರ್ 22) ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಐರ್ಲೆಂಡ್ ಮತ್ತು ನಮೀಬಿಯಾ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 125 ರನ್ ಗಳಿಸುವುದರ ಮೂಲಕ ಎದುರಾಳಿ ನಮೀಬಿಯಾ ತಂಡಕ್ಕೆ 126 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಕೂಡ ನಮೀಬಿಯಾ ಯಶಸ್ವಿಯಾಗಿ 18.3 ಓವರ್‌ಗಳಲ್ಲಿ ಚೇಸ್ ಮಾಡುವ ಮೂಲಕ 8 ವಿಕೆಟ್‍ಗಳ ಜಯ ಸಾಧಿಸಿ ಸೂಪರ್ 12 ಹಂತಕ್ಕೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡು ಗ್ರೂಪ್ 2ಗೆ ಸೇರಿಕೊಂಡಿದೆ.
* ಅರ್ಹತಾ ಸುತ್ತಿನ ಅಂತಿಮ ಪಂದ್ಯದಲ್ಲಿ ಇಂದು (ಅಕ್ಟೋಬರ್ 22) ಶ್ರೀಲಂಕಾ ಮತ್ತು ನೆದರ್ಲೆಂಡ್ಸ್ ತಂಡಗಳು ಸೆಣಸಾಟ ನಡೆಸಿದವು. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡು ನೆದರ್ಲೆಂಡ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿತ್ತು . ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ 10 ಓವರ್‌ಗಳಲ್ಲಿ 44 ರನ್‌ಗಳಿಗೆ ಆಲ್ ಔಟ್ ಆಯಿತು. ಇನ್ನು ನೆದರ್ಲೆಂಡ್ಸ್ ತಂಡ ನೀಡಿದ 45 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 7.1 ಓವರ್‌ಗಳಲ್ಲಿ 45 ರನ್ ಗಳಿಸುವುದರ ಮೂಲಕ 8 ವಿಕೆಟ್‍ಗಳ ಗೆಲುವನ್ನು ಸಾಧಿಸಿದೆ. ಇನ್ನು ಈ ಪಂದ್ಯ ಮುಗಿಯುವ ಮೂಲಕ ಇದೀಗ ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿಗೆ ತೆರೆಬಿದ್ದಿದ್ದು ನಾಳೆಯಿಂದ ( ಅಕ್ಟೋಬರ್ 23 ) ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಲಿವೆ.
* 2022ರಲ್ಲಿ ಭಾರತ ಏಕದಿನ ಮತ್ತು ಟಿ ಟ್ವೆಂಟಿ ಸರಣಿಯನ್ನಾಡಲು ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಲಿದ್ದು ಅದೇ ಸಮಯದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಟೆಸ್ಟ್ ಪಂದ್ಯವನ್ನು ನಡೆಸಲು ಈ ಹಿಂದೆಯೇ ತೀರ್ಮಾನಿಸಲಾಗಿತ್ತು. ಇದೀಗ ಆ ಪಂದ್ಯದ ದಿನಾಂಕ ಮತ್ತು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸೀಮಿತ ಓವರ್‌ಗಳ ಸರಣಿಗಳ ದಿನಾಂಕವನ್ನು ಪ್ರಕಟಿಸಲಾಗಿದೆ.
ಈ ವರ್ಷ ರದ್ದಾಗಿ ಮುಂದೂಡಲ್ಪಟ್ಟಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಜುಲೈ 1ರಿಂದ ಜುಲೈ 5ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು ಈ ಪಂದ್ಯ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ರದ್ದಾಗಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಮುಗಿದ ನಂತರ 3 ಟಿ ಟ್ವೆಂಟಿ ಮತ್ತು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಹೀಗೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ 3 ಟಿ ಟ್ವೆಂಟಿ ಪಂದ್ಯಗಳ ಸರಣಿಯ ವೇಳಾ ಪಟ್ಟಿ ಈ ಕೆಳಕಂಡಂತಿದೆ.
> ಮೊದಲ ಟಿ ಟ್ವೆಂಟಿ ಪಂದ್ಯ ಜುಲೈ 7ಕ್ಕೆ ಏಜೀಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ
> ದ್ವಿತೀಯ ಟಿ ಟ್ವೆಂಟಿ ಪಂದ್ಯ ಜುಲೈ 9ಕ್ಕೆ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ
> ತೃತೀಯ ಟಿ ಟ್ವೆಂಟಿ ಪಂದ್ಯ ಜುಲೈ 10ಕ್ಕೆ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯಲಿದೆ
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿಯ ವೇಳಾಪಟ್ಟಿ ಈ ಕೆಳಕಂಡಂತಿದೆ.
> ಮೊದಲ ಏಕದಿನ ಪಂದ್ಯ ಜುಲೈ 12ರಂದು ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
> ದ್ವಿತೀಯ ಏಕದಿನ ಪಂದ್ಯ ಜುಲೈ 14ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
> ತೃತೀಯ ಏಕದಿನ ಪಂದ್ಯ ಜುಲೈ 17ರಂದು ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications