For Quick Alerts
ALLOW NOTIFICATIONS  
For Daily Alerts
 

ಸೆಪ್ಟೆಂಬರ್ 17ರಂದು ಕ್ರಿಕೆಟ್‌ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on September 17

ಸೆಪ್ಟೆಂಬರ್ 17ರ ಶುಕ್ರವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ಹಲವಾರು ಪ್ರಮುಖ ಘಟನೆಗಳು ನಡೆದಿದ್ದು ಒಂದೆಡೆ ನ್ಯೂಜಿಲೆಂಡ್ ಸರ್ಕಾರದಿಂದ ಭದ್ರತೆಯ ಎಚ್ಚರಿಕೆ ಬಂದ ಹಿನ್ನಲೆಯಲ್ಲಿ ಉದ್ದೇಶಿತ ಸರಣಿ ಮುಂದೂಡಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಷಭ್ ಪಂತ್ ಅವರೇ ನಾಯಕನಾಗಿ ಮುಂದುವರಿಯಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ. ಹೀಗೆ ಕ್ರಿಕೆಟ್‌ ಜಗತ್ತಿನಲ್ಲಿ ಸೆಪ್ಟೆಂಬರ್ 17ರ ಶುಕ್ರವಾರದಂದು ನಡೆದ ವಿದ್ಯಮಾನಗಳ ಒಂದು ಕಿರುನೋಟ ಈ ಕೆಳಕಂಡಂತಿದೆ ನೋಡಿ.

* ಇದೇ ತಿಂಗಳ 19ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಪುನಾರಂಭವಾಗುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿಜೇತ ತಂಡವಾಗಿ ಹೊರ ಹೊಮ್ಮುವ ಸಾಧ್ಯತೆಗಳು ಹೆಚ್ಚಿವೆ ಎಂದು ಕೆವಿನ್ ಪೀಟರ್ಸನ್ ಭವಿಷ್ಯ ನುಡಿದಿದ್ದಾರೆ.

* ನೂತನವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಿರುವ ಆಟಗಾರರ ಪೈಕಿ ಶ್ರೀಲಂಕಾದ ವನಿಂದು ಹಸರಂಗ ಮತ್ತು ದುಷ್ಮಂತ ಚಮೀರ ಇತ್ತೀಚೆಗಷ್ಟೇ ಯುಎಇ ತಲುಪಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದರು. ಇದೀಗ ಸಿಂಗಾಪುರ್ ತಂಡದ ಸ್ಫೋಟಕ ಆಲ್ ರೌಂಡರ್ ಆಟಗಾರ ಟಿಮ್ ಡೇವಿಡ್ ದುಬೈ ತಲುಪಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಸೇರಿಕೊಂಡಿದ್ದಾರೆ. ಈ ಕುರಿತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಟಿಮ್ ಡೇವಿಡ್ ಅವರಿಗೆ ಸ್ವಾಗತವನ್ನು ಕೋರಿದೆ.

* ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ತೆಗೆದುಕೊಂಡಿರುವ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರದ ಕುರಿತು ತಮ್ಮ ಇನ್ ಸ್ಟಾಗ್ರಾಂ ಖಾತೆಯ ಸ್ಟೋರಿಯ ಮೂಲಕ ಪ್ರತಿಕ್ರಿಯೆ ನೀಡಿದ್ದು 'ಹಾರ್ಟ್ ಇಮೋಜಿ' ಬಳಸುವುದರ ಮೂಲಕ ವಿರಾಟ್ ಕೊಹ್ಲಿ ನಡೆಗೆ ತಮ್ಮ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದಾರೆ.

* ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಯಾರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರಲಿದ್ದಾರೆ ಎಂಬ ಗೊಂದಲಗಳು ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮುಂದುವರಿಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಷಭ್ ಪಂತ್ ಅವರೇ ನಾಯಕನಾಗಿ ಮುಂದುವರಿಯಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.

ಇತ್ತೀಚೆಗಷ್ಟೇ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಯಾವುದೇ ಪಂದ್ಯದಲ್ಲಿಯೂ ಕೂಡ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಬಳಗದಲ್ಲಿ ಅವಕಾಶವನ್ನು ನೀಡಲಿಲ್ಲ. ಹೀಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಸಮಾಧಾನಪಡಿಸಲು ಆತನಿಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಅವಕಾಶವನ್ನು ನೀಡಲಾಗಿದೆ ಅಷ್ಟೇ ಎಂದು ಸುನಿಲ್ ಗವಾಸ್ಕರ್ ವ್ಯಂಗ್ಯವಾಡಿದ್ದಾರೆ.

* ಬರೋಬ್ಬರಿ 18 ವರ್ಷಗಳ ಬಳಿಕ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಬಂದಿತ್ತು. ಆದರೆ ನ್ಯೂಜಿಲೆಂಡ್ vs ಪಾಕಿಸ್ತಾನ ನಡುವಿನ ಈ ಉದ್ದೇಶಿತ ಪ್ರವಾಸ ಸರಣಿ ಮುಂದೂಡಲ್ಪಟ್ಟಿದೆ. ನ್ಯೂಜಿಲೆಂಡ್ ಸರ್ಕಾರದಿಂದ ಭದ್ರತೆಯ ಎಚ್ಚರಿಕೆ ಬಂದ ಹಿನ್ನಲೆಯಲ್ಲಿ ಉದ್ದೇಶಿತ ಸರಣಿ ಮುಂದೂಡಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ನ್ಯೂಜಿಲೆಂಡ್ ಕ್ರಿಕೆಟ್ ತಂಡ ತವರಿಗೆ ವಾಪಸ್ಸಾಗಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಮೊಹಮ್ಮದ್ ಸಿರಾಜ್ ಗೆ BCCI ಇಂಥಾ ಮೋಸ ಮಾಡಬಾರದಿತ್ತು | Oneindia Kannada

* ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್, ಆಲ್ ರೌಂಡರ್ ಡ್ವೇನ್ ಬ್ರಾವೋ, ಸ್ಪಿನ್ನರ್ ಇಮ್ರಾನ್ ತಾಹಿರ್ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಸೆಪ್ಟೆಂಬರ್‌ 16ರ ಗುರುವಾರ ದುಬೈಗೆ ಬಂದಿಳಿದಿದ್ದಾರೆ.

Story first published: Friday, September 17, 2021, 22:29 [IST]
Other articles published on Sep 17, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+