ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸೆಪ್ಟೆಂಬರ್ 4ರಂದು ಕ್ರಿಕೆಟ್ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on September 4

ಸೆಪ್ಟೆಂಬರ್ 4ರ ಶನಿವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವು ಘಟನೆಗಳು ನಡೆದಿದ್ದು, ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕ್ರಿಕೆಟ್ ಜೀವನದ ಚೊಚ್ಚಲ ಓವರ್‌ಸೀಸ್ ಶತಕವನ್ನು ಬಾರಿಸಿದ್ದಾರೆ, ಮತ್ತೊಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮುನ್ನ ಪಂದ್ಯದ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೂರನೇ ದಿನದಾಟದಂದು ಭಾರತದ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟವನ್ನು ಆಡಲಿದ್ದಾರೆ, ಸದ್ಯ ಪಿಚ್ ಪರಿಸ್ಥಿತಿಯನ್ನು ಗಮನಿಸಿದರೆ ಈ ಪಂದ್ಯವನ್ನು ಭಾರತ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಹೀಗೆ ಕ್ರಿಕೆಟ್‌ ಜಗತ್ತಿನಲ್ಲಿ ಸೆಪ್ಟೆಂಬರ್ 4 ರ ಶನಿವಾರದಂದು ನಡೆದಿರುವ ಘಟನೆಗಳ ಒಂದು ಕಿರು ನೋಟ ಇಲ್ಲಿದೆ ನೋಡಿ..

* ಜಾರ್ವೊ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೈದಾನಕ್ಕೆ ನುಗ್ಗಿದ ನಂತರ ಆತನಿಗೆ ಹೆಡಿಂಗ್ಲೆ ಕ್ರಿಕೆಟ್ ಮೈದಾನ ಪ್ರವೇಶಿಸುವಂತಿಲ್ಲ ಎಂದು ಅಜೀವ ನಿಷೇಧವನ್ನು ಹೇರಲಾಗಿತ್ತು. ಆದರೂ ಸಹ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಜಾರ್ವೊ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿಯೇ ಆತ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ಮೈದಾನಕ್ಕೆ ನುಗ್ಗಿದ್ದು ಹಲವಾರು ಮಾಜಿ ಕ್ರಿಕೆಟಿಗರು ಭದ್ರತೆಯ ಪ್ರಶ್ನೆಯನ್ನು ಹಾಕಿದ್ದಾರೆ, ಅಲ್ಲದೆ ಕೊರೋನಾ ವೈರಸ್ ಇರುವ ಈ ಸಂದರ್ಭದಲ್ಲಿ ಈ ರೀತಿಯ ಹುಚ್ಚಾಟಗಳು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ. ಹೀಗೆ ಪ್ರತಿ ಪಂದ್ಯಕ್ಕೂ ಅಕ್ರಮವಾಗಿ ಮೈದಾನಕ್ಕೆ ನುಗ್ಗುತ್ತಿದ್ದ ಜಾರ್ವೊ ಪೊಲೀಸರ ಅತಿಥಿಯಾಗಿದ್ದು ಮುಂದಿನ ದಿನಗಳಲ್ಲಿ ಇಂಗ್ಲೆಂಡ್‌ನ ಎಲ್ಲಾ ಕ್ರೀಡಾಂಗಣಗಳಲ್ಲೂ ಜಾರ್ವೊಗೆ ನಿಷೇಧ ಹೇರುವ ಸಾಧ್ಯತೆಗಳಿವೆ.

* ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿಯೂ ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೇ ಬೆಂಚ್ ಕಾಯುತ್ತಿದ್ದಾರೆ. ಈ ಕುರಿತಾಗಿ ತನ್ನ ಪಾಲಿನ ಟೀಕೆಯನ್ನು ಇಂಗ್ಲೆಂಡ್ ದೇಶದ ಕ್ರಿಕೆಟ್ ಆಟಗಾರ ನಿಕ್ ಕಾಂಪ್ಟನ್ ವ್ಯಕ್ತಪಡಿಸಿದ್ದು ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ನಡುವೆ ಇರುವ ವೈಯಕ್ತಿಕ ಭಿನ್ನಾಭಿಪ್ರಾಯದಿಂದಲೇ ಈ ರೀತಿಯ ನಿರ್ಧಾರವನ್ನು ವಿರಾಟ್ ಕೊಹ್ಲಿ ತೆಗೆದುಕೊಂಡಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ನಡುವಿನ ವೈಯಕ್ತಿಕ ಜಗಳದಿಂದಲೇ ಇಷ್ಟೆಲ್ಲಾ ನಡೆಯುತ್ತಿದೆ ಎಂದು ನಿಕ್ ಕಾಂಪ್ಟನ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಭಾರತ vs ಇಂಗ್ಲೆಂಡ್: ವಿರೇಂದ್ರ ಸೆಹ್ವಾಗ್ ದಾಖಲೆ ಮುರಿದ ಶಾರ್ದೂಲ್ ಠಾಕೂರ್ಭಾರತ vs ಇಂಗ್ಲೆಂಡ್: ವಿರೇಂದ್ರ ಸೆಹ್ವಾಗ್ ದಾಖಲೆ ಮುರಿದ ಶಾರ್ದೂಲ್ ಠಾಕೂರ್

* ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮುನ್ನ ಪಂದ್ಯದ ಕುರಿತು ಮಾತನಾಡಿದ್ದ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೂರನೇ ದಿನದಾಟದಂದು ಭಾರತದ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟವನ್ನು ಆಡಲಿದ್ದಾರೆ, ಸದ್ಯ ಪಿಚ್ ಪರಿಸ್ಥಿತಿಯನ್ನು ಗಮನಿಸಿದರೆ ಈ ಪಂದ್ಯವನ್ನು ಭಾರತ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

* 204 ಎಸೆತಗಳಲ್ಲಿ ಶತಕ ಪೂರೈಸಿ ತನ್ನ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ ರೋಹಿತ್ ಶರ್ಮಾ 127 ರನ್ ಗಳಿಸಿ ರಾಬಿನ್ಸನ್ ಎಸೆತದಲ್ಲಿ ಕ್ರಿಸ್ ವೋಕ್ಸ್‌ಗೆ ಕ್ಯಾಚ್ ನೀಡಿ ಪೆವಿಲಿಯನ್ ಕಡೆ ಪಯಣ ಬೆಳೆಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ತಂಡಕ್ಕೆ ದೊಡ್ಡ ಮಟ್ಟದಲ್ಲಿ ರೋಹಿತ್ ಶರ್ಮಾ ಆಸರೆಯಾಗಿದ್ದಾರೆ.

ವೈಯಕ್ತಿಕ ಜಗಳದಿಂದ ಅಶ್ವಿನ್‌ಗೆ ಕೊಹ್ಲಿ ತಂಡದಲ್ಲಿ ಸ್ಥಾನ ನೀಡುತ್ತಿಲ್ಲ ಎಂದು ಹೇಳಿಕೆ ನೀಡಿದ ಕ್ರಿಕೆಟಿಗ!ವೈಯಕ್ತಿಕ ಜಗಳದಿಂದ ಅಶ್ವಿನ್‌ಗೆ ಕೊಹ್ಲಿ ತಂಡದಲ್ಲಿ ಸ್ಥಾನ ನೀಡುತ್ತಿಲ್ಲ ಎಂದು ಹೇಳಿಕೆ ನೀಡಿದ ಕ್ರಿಕೆಟಿಗ!

* ಸದ್ಯ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅತ್ಯದ್ಭುತ ಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಈ ಕೆಳಕಂಡ 6 ಮೈಲಿಗಲ್ಲುಗಳನ್ನು ಮುಟ್ಟಿದ್ದಾರೆ..
1. 2021ರಲ್ಲಿ ರೋಹಿತ್ ಶರ್ಮಾ 1,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ್ದಾರೆ.

2. ಈ ಇನ್ನಿಂಗ್ಸ್ ಮೂಲಕ ರೋಹಿತ್ ಶರ್ಮಾ ಇಂಗ್ಲೆಂಡ್ ನೆಲದಲ್ಲಿ 2,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ್ದಾರೆ.

3. ರೋಹಿತ್ ಶರ್ಮಾ 3,000 ಟೆಸ್ಟ್ ರನ್‌ಗಳನ್ನು ಈ ಇನ್ನಿಂಗ್ಸ್ ಮೂಲಕ ಪೂರೈಸಿಕೊಂಡಿದ್ದಾರೆ.

4. ಈ ಇನ್ನಿಂಗ್ಸ್ ಮೂಲಕ ರೋಹಿತ್ ಶರ್ಮಾ 15,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ್ದಾರೆ.

5. ರೋಹಿತ್ ಶರ್ಮಾ ತನ್ನ ಟೆಸ್ಟ್ ಕ್ರಿಕೆಟ್ ಜೀವನದಲ್ಲಿಯೇ ಇದೇ ಮೊದಲ ಬಾರಿಗೆ ಓವರ್‌ಸೀಸ್ ಶತಕವನ್ನು ಬಾರಿಸಿದ್ದಾರೆ.

6. ಈ ಇನ್ನಿಂಗ್ಸ್ ಮೂಲಕ ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ 11,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ್ದಾರೆ.

Story first published: Saturday, September 4, 2021, 23:33 [IST]
Other articles published on Sep 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X