ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸೆಪ್ಟೆಂಬರ್ 7ರಂದು ಕ್ರಿಕೆಟ್‌ ಜಗತ್ತಿನಲ್ಲಿ ನಡೆದದ್ದೇನು?

What happened in the cricket world on September 7

ಸೆಪ್ಟೆಂಬರ್ 7 ರ ಮಂಗಳವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ಹಲವಾರು ವಿದ್ಯಮಾನಗಳು ಜರುಗಿದ್ದು ಒಂದೆಡೆ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 78 ರನ್‌ಗಳ ಜಯವನ್ನು ಸಾಧಿಸಿದ್ದರೆ, ಮತ್ತೊಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟವಾಗಿದ್ದು ಜೋಸ್ ಬಟ್ಲರ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಹೀಗೆ ಸೆಪ್ಟೆಂಬರ್ 7 ರ ಮಂಗಳವಾರದಂದು ಕ್ರಿಕೆಟ್‌ ಜಗತ್ತಿನಲ್ಲಿ ನಡೆದ ಘಟನೆಗಳ ಒಂದು ಕಿರುನೋಟ ಇಲ್ಲಿದೆ ನೋಡಿ..

* ಕಳೆದ ಕೆಲ ವರ್ಷಗಳಿಂದ ಟೆಸ್ಟ್ ಕ್ರಿಕೆಟ್‍ನಲ್ಲಿ ಟೀಮ್ ಇಂಡಿಯಾ ನೀಡುತ್ತಿರುವ ಉತ್ತಮ ಪ್ರದರ್ಶನವನ್ನು ಕೊಂಡಾಡಿರುವ ಶೇನ್ ವಾರ್ನ್ 'ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‍ನಲ್ಲಿ ಪವರ್‌ಹೌಸ್ ಆಗಿದ್ದು, ಆ ತಂಡಕ್ಕೆ ವಿರಾಟ್ ಕೊಹ್ಲಿಯಂತಹ ಅತ್ಯುತ್ತಮ ಸೂಪರ್‌ಸ್ಟಾರ್ ರೀತಿಯ ನಾಯಕ ಸಿಕ್ಕಿರುವುದು ದೊಡ್ಡ ಮಟ್ಟದ ಯಶಸ್ಸಿಗೆ ಕಾರಣ. ವಿರಾಟ್ ಕೊಹ್ಲಿ ಯಾವಾಗಲೂ ನಾವು ಆಸ್ಟ್ರೇಲಿಯಾಕ್ಕೆ ಹೋಗಿ ಸರಣಿ ಗೆಲ್ಲುತ್ತೇವೆ, ಇಂಗ್ಲೆಂಡ್ ಪ್ರವಾಸ ಕೈಗೊಂಡು ಸರಣಿ ಗೆಲ್ಲುತ್ತೇವೆ ಎಂಬ ವಿಶ್ವಾಸದೊಂದಿಗೆ ವಿದೇಶಿ ಪ್ರಯಾಣ ಕೈಗೊಂಡು ಅವರ ನೆಲದಲ್ಲಿಯೇ ಎದುರಾಳಿಗಳನ್ನು ಸೋಲಿಸುತ್ತಿದ್ದಾರೆ' ಎಂದು ವಿರಾಟ್ ಕೊಹ್ಲಿ ಮತ್ತು ಭಾರತ ತಂಡವನ್ನು ಕೊಂಡಾಡಿದರು.

ಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾಓವಲ್ ಟೆಸ್ಟ್: ಪಂದ್ಯಶ್ರೇಷ್ಠ ಪ್ರಶಸ್ತಿಗೆ ನನಗಿಂತ ಈ ಆಟಗಾರ ಅರ್ಹ ಎಂದ ರೋಹಿತ್ ಶರ್ಮಾ

* ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಮ್ ಇಂಡಿಯಾ ಮತ್ತೆ ನಂ.1 ಸ್ಥಾನಕ್ಕೇರಿದೆ. ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ ಭಾಗವಾಗಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್‌ ಸರಣಿಯಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿರುವುದರಿಂದ ಪಾಯಿಂಟ್ಸ್ ಟೇಬಲ್‌ನಲ್ಲಿ ವಿರಾಟ್ ಕೊಹ್ಲಿ ಪಡೆ ಮೊದಲ ಸ್ಥಾನಕ್ಕೇರಿದೆ. ದ್ವಿತೀಯ ಸ್ಥಾನದಲ್ಲಿ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ ತಂಡವಿದೆ. ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಆರಂಭಿಕ ಆವೃತ್ತಿ ಮುಕ್ತಾಯಗೊಂಡ ಬಳಿಕ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯೊಂದಿಗೆ ದ್ವಿತೀಯ ಆವೃತ್ತಿ ಶುರುವಾಗಿದೆ. ಹಿಂದಿನ ಆವೃತ್ತಿಯ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಕಾದಾಡಿದ್ದವು. ಇದರಲ್ಲಿ ನ್ಯೂಜಿಲೆಂಡ್ ಚಾಂಪಿಯನ್ಸ್ ತಂಡವಾಗಿ ಹೊರ ಹೊಮ್ಮಿತ್ತು. ಈ ಆವೃತ್ತಿಯಲ್ಲಿ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದ್ದು, ಭಾರತ 2 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 1 ಪಂದ್ಯ ಗೆದ್ದಿದೆ. ಆರಂಭಿಕ ಪಂದ್ಯ ಡ್ರಾ ಎನಿಸಿತ್ತು. ಆಡಿದ ನಾಲ್ಕು ಪಂದ್ಯಗಳಲ್ಲಿ 2 ಗೆಲುವು, 1 ಸೋಲು, 1 ಡ್ರಾದೊಂದಿಗೆ ಭಾರತ WTC ಅಂಕಪಟ್ಟಿಯಲ್ಲಿ 26 ಅಂಕ ಕಲೆ ಹಾಕಿದೆ. ಶೇಕಡಾವಾರು ಗೆಲುವಿನಲ್ಲಿ 54.17 ಶೇ. ಪಾಯಿಂಟ್ಸ್‌ ಗಳಿಸಿದೆ. ಆದರೆ ಸ್ಲೋ ಓವರ್‌ ರೇಟ್‌ಗಾಗಿ ಭಾರತ ಎರಡು ಪೆನಾಲ್ಟಿ ಓವರ್‌ಗಳನ್ನು ಹೊಂದಿದೆ.

* 50 ವರ್ಷಗಳ ನಂತರ ಓವಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿದ ಕೊಹ್ಲಿ ಪಡೆಗೆ ಡ್ರೆಸ್ಸಿಂಗ್ ರೂಂನಲ್ಲಿ ಅದ್ದೂರಿ ಸ್ವಾಗತ ದೊರೆತಿದೆ. ಪಂದ್ಯ ಗೆದ್ದು ಡ್ರೆಸಿಂಗ್ ರೂಮ್ ತಲುಪಿದ ಟೀಮ್ ಇಂಡಿಯಾ ಆಟಗಾರರು ಸಂಭ್ರಮಾಚರಣೆಯನ್ನೂ ಮಾಡಿದ್ದಾರೆ. ಟೀಮ್ ಇಂಡಿಯಾದ ಸಿಬ್ಬಂದಿ ವರ್ಗದವರು ಕೂಡ ಆಟಗಾರರ ಜತೆ ಸೇರಿಕೊಂಡು ಓವೆಲ್ ಕ್ರೀಡಾಂಗಣದಲ್ಲಿ ಸಾಧಿಸಿದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ವಿಶೇಷವಾದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು ಭಾರತದ ಕ್ರಿಕೆಟ್ ಅಭಿಮಾನಿಗಳ ಜೊತೆ ಹಂಚಿಕೊಂಡಿದೆ. ಸದ್ಯ ಬಿಸಿಸಿಐ ಟ್ವೀಟ್ ಮಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Kohli ಅವರ ಈ celebration ಇಷ್ಟರ ಮಟ್ಟಿಗೆ ಚರ್ಚೆಗೆ ಗ್ರಾಸವಾಗಿದೆ | Oneindia Kannada

* ಭಾರತದ ಸ್ಟಾರ್ ಸ್ಫೋಟಕ ಯುವ ಬ್ಯಾಟ್ಸ್‌ಮನ್‌ ಶೆಫಾಲಿ ವರ್ಮಾ ನೂತನ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಹಿಳಾ ಟಿ20ಐ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. 759 ರೇಟಿಂಗ್ ಪಾಯಿಂಟ್ಸ್ ಗಳಿಸಿರುವ ಶೆಫಾಲಿ ಅಗ್ರ ಸ್ಥಾನದಲ್ಲಿ ಮಿಂಚಿದ್ದಾರೆ.

Story first published: Tuesday, September 7, 2021, 22:57 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X