For Quick Alerts
ALLOW NOTIFICATIONS  
For Daily Alerts
 

Rohit Sharma: ಟೀಮ್ ಇಂಡಿಯಾ ನಾಯಕನ ಹುಡುಕಾಟ ಬಲು ಜೋರು; ಬಿಸಿಸಿಐ ಮುಂದೆ ರೋಹಿತ್ ಹೇಳಿದ್ದೇನು?

ಆಸ್ಟ್ರೇಲಿಯ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿನ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ವರ್ಷ, ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು. ನಂತರ ತವರಿನಲ್ಲೇ ನ್ಯೂಜಿಲೆಂಡ್‌ ಎದುರು 0-3 ಅಂತರದಲ್ಲಿ ಹಾಗೂ ಆಸ್ಟ್ರೇಲಿಯಾದಲ್ಲಿ 1-3 ಅಂತರ ಸೋಲನ್ನು ಭಾರತ ಕಂಡಿತ್ತು. ಹೀಗಾಗಿ 2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಿಂದ ಭಾರತ ಹೊರಗುಳಿದಿತ್ತು. ಇದರ ಮಧ್ಯೆ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

ವರದಿಗಳ ಪ್ರಕಾರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗಿನ ಇತ್ತೀಚಿನ ಸಭೆಯಲ್ಲಿ ರೋಹಿತ್ ಶರ್ಮಾ ಮುಂದಿನ ಕೆಲವು ತಿಂಗಳು ಭಾರತ ತಂಡದ ನಾಯಕತ್ವದಲ್ಲಿ ಮುಂದುವರಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಭೆಯಲ್ಲಿ ಬಿಸಿಸಿಐನ ಉನ್ನತ ಅಧಿಕಾರಿಗಳು, ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ಉಪಸ್ಥಿತರಿದ್ದರು.

What Rohit Sharma said in front of BCCI who are looking for Team India captain

ಶರ್ಮಾ ಹೇಳಿದ್ದೇನು?

ರೋಹಿತ್ ಶರ್ಮಾ ಅವರು ಮುಂದಿನ ಕೆಲವು ತಿಂಗಳುಗಳ ಕಾಲ ಭಾರತ ತಂಡದ ನಾಯಕತ್ವದಲ್ಲಿ ಮುಂದುವರಿಯುವ ಬಯಕೆಯನ್ನು ಬಿಸಿಸಿಐಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರೋಹಿತ್ ಶರ್ಮಾ ಹೊಸ ನಾಯಕನ ಹುಡುಕಾಟವನ್ನು ಮುಂದುವರಿಸುವಂತೆ ಬಿಸಿಸಿಐಗೆ ಕೇಳಿಕೊಂಡಿದ್ದಾರೆ.

ಬಿಸಿಸಿಐ ಜೊತೆಗಿನ ಸಭೆಯಲ್ಲಿ ರೋಹಿತ್ ಶರ್ಮಾ ಅವರ ಉತ್ತರಾಧಿಕಾರಿಯಾಗಿ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೆಸರನ್ನು ಪ್ರಸ್ತಾಪಿಸಲಾಯಿತು. ಆದರೆ ಕೆಲವರು ಬುಮ್ರಾ ಆಯ್ಕೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬುಮ್ರಾ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಬಹುದೇ? ಅಥವಾ ಇಲ್ಲವೇ? ಎಂಬುದು ಕುತೂಹಲ ಮೂಡಿಸಿದೆ.

ಭವಿಷ್ಯದಲ್ಲಿ ಭಾರತದ ಟೆಸ್ಟ್ ನಾಯಕರಾಗಿ ರೋಹಿತ್ ಶರ್ಮಾ ಬದಲಿಗೆ ಜಸ್ಪ್ರೀತ್ ಬುಮ್ರಾ ಅವರು ಮುಂಚೂಣಿಯಲ್ಲಿದ್ದಾರೆ. ಆದರೆ ಅವರ ಫಿಟ್ನೆಸ್ ಅನ್ನು ಪರಿಗಣಿಸಿ, ದೀರ್ಘಾವಧಿಯ ಆಯ್ಕೆಯಾಗಿ ಕಂಡುಬರುವುದಿಲ್ಲ ಎಂಬ ಚರ್ಚೆ ನಡೆದಿದೆ. ಇತ್ತೀಚಿನ ಬೆನ್ನುನೋವಿನ ಸಮಸ್ಯೆಯಿಂದಾಗಿ ಅವರು ಮುಂದೆ ಉಳಿದ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ, ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನವಾಗಿದೆ. ಹೀಗಾಗಿ ಟೆಸ್ಟ್ ಪಂದ್ಯಗಳಲ್ಲಿ ಅವರನ್ನು ಖಾಯಂ ನಾಯಕ ಎಂದು ಪರಿಗಣಿಸಬಹುದೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಏಕೆಂದರೆ ಈಗ ಟೆಸ್ಟ್ ಪಂದ್ಯಗಳಲ್ಲಿ ರೋಹಿತ್ ಅವರ ಭವಿಷ್ಯ ಬಹುತೇಕ ಖಚಿತವಾಗಿದೆ.

ರೋಹಿತ್ ಶರ್ಮಾ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ವರಗೆ ಭಾರತ ತಂಡದ ನಾಯಕನಾಗಿ ಉಳಿಯಲು ಬಯಸಿದ್ದಾರೆ. ಇದಾದ ನಂತರ ಆಟಗಾರರು ತಮ್ಮ ಐಪಿಎಲ್ ತಂಡಗಳಿಗೆ ಸೇರಿಕೊಳ್ಳಲಿದ್ದಾರೆ. ಐಪಿಎಲ್ ಬಳಿಕ ಭಾರತ ತಂಡವು ಇಂಗ್ಲೆಂಡ್‌ನೊಂದಿಗೆ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗೆ ರೋಹಿತ್ ಟೆಸ್ಟ್ ತಂಡದ ನಾಯಕರಾಗುತ್ತಾರೋ? ಇಲ್ಲವೋ? ಎಂಬುದು ಇನ್ನೂ ತಿಳಿದಿಲ್ಲ. ಈ ಹಂತದಲ್ಲಿ ಭಾರತದ ಟೆಸ್ಟ್ ನಾಯಕನ ಬಗ್ಗೆ ಬಿಸಿಸಿಐ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು.

Story first published: Monday, January 13, 2025, 12:27 [IST]
Other articles published on Jan 13, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+