Shardul Thakur: ಆಸ್ಟ್ರೇಲಿಯಾದಲ್ಲಿ ಕೊಹ್ಲಿಯ ಅತ್ಯುತ್ತಮ ಪ್ರದರ್ಶನದ ಬಗ್ಗೆ ಶಾರ್ದೂಲ್ ಠಾಕೂರ್ ಹೇಳಿದ್ದೇನು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ಈ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚಿನ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನ ನಿರಾಶಾದಾಯಕವಾಗಿತ್ತು. ಹೀಗಾಗಿ ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳುವ ಬಗ್ಗೆ ಟೀಮ್ ಇಂಡಿಯಾದ ಹಾಲಿ ಮತ್ತು ಮಾಜಿ ಆಟಗಾರರು ಭವಿಷ್ಯ ನುಡಿಯುತ್ತಿದ್ದಾರೆ.
ಟೀಮ್ ಇಂಡಿಯಾದ ವೇಗದ ಬೌಲರ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಅವರು ವಿರಾಟ್ ಕೊಹ್ಲಿಯಿಂದ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದ್ದಾರೆ. ಶಾರ್ದೂಲ್ ತಮ್ಮ ಮಾಜಿ ನಾಯಕನನ್ನು ಬೆಂಬಲಿಸಿದ್ದು, ಶೀಘ್ರದಲ್ಲೇ ಫಾರ್ಮ್‌ಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ.

ಶಾರ್ದೂಲ್ ಠಾಕೂರ್ ಹೇಳಿದ್ದೇನು?
ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಶತಕ ಬಾರಿಸುವುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಶಾರ್ದೂಲ್ ಠಾಕೂರ್, 'ವಿರಾಟ್ ಬ್ಯಾಟಿಂಗ್ ಮಾಡುವಾಗ, ಅವರು ಪ್ರತಿ ಬಾರಿ ಶತಕ ಗಳಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ಹೀಗಾಗಿ 70 ರನ್ ಗಳಿಸಿದರೂ ಫೇಲ್ ಆದ ಹಾಗೆ ಕಂಡರೂ 70 ರನ್ ಗಳಿಸಿದ್ದು ಮಾತ್ರ ನಿಜ. ಅವರು ಹಲವು ಶತಕಗಳನ್ನು ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವದ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಆಟಗಾರ ವಿರಾಟ್. ಕಳೆದ ಕೆಲವು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕೊಹ್ಲಿ 13 ಟೆಸ್ಟ್ ಪಂದ್ಯಗಳಲ್ಲಿ 54.08 ಸರಾಸರಿಯಲ್ಲಿ 1352 ರನ್ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಭರ್ಜರಿ ಕಮ್‌ಬ್ಯಾಕ್
ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಎಷ್ಟು ಚೆನ್ನಾಗಿ ಆಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿ ಯಶಸ್ವಿಯಾಗಲು ಎಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ನಂತರ ಅವರು ಫಾರ್ಮ್ ಕಂಡುಕೊಂಡಿರುವುದನ್ನು ಸಾಬೀತುಪಡಿಸಿದ್ದಾರೆ. ಈ ಬಾರಿಯೂ ಅವರು ಅದೇ ರೀತಿ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅವರು ಕಮ್‌ಬ್ಯಾಕ್ ಮಾಡುತ್ತಾರೆ, ಚಿಂತಿಸಬೇಡ ಎಂದು ಶಾರ್ದೂಲ್ ಠಾಕೂರ್ ಭವಿಷ್ಯ ನುಡಿದ್ದಾರೆ.
ನಾನು ಫಿಟ್ ಆಗಿದ್ದೇನೆ
ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇತ್ತೀಚಿನ ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, 'ಒಂದೆರಡು ಪಂದ್ಯಗಳಲ್ಲಿ ಆಡುವಾಗ ಸ್ವಲ್ಪ ಹಿಂಜರಿಯುತ್ತಿದ್ದೆ, ಆದರೆ ಶಸ್ತ್ರಚಿಕಿತ್ಸೆಯ ನಂತರ ಪಂದ್ಯಗಳನ್ನು ಆಡುತ್ತಲೇ ಇದ್ದಾಗ ಆತ್ಮವಿಶ್ವಾಸ ಹೆಚ್ಚಿತು. ಈಗ ನಾನು 100% ಫಿಟ್ ಆಗಿದ್ದೇನೆ. ಅದು ನನ್ನ ಬೌಲಿಂಗ್‌ನಲ್ಲಿಯೂ ಗೊತ್ತಾಗುತ್ತದೆ. ಕಳೆದ ಮೂರು-ನಾಲ್ಕು ಪಂದ್ಯಗಳಲ್ಲಿ ನಾನು ತುಂಬ ಉತ್ಸಾಹದಿಂದ ಬೌಲಿಂಗ್ ಮಾಡಿದ್ದೇನೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications