ರೋಹಿತ್-ಕೊಹ್ಲಿ-ಬುಮ್ರಾ ಕೊನೆಯದಾಗಿ ದೇಶೀಯ ಕ್ರಿಕೆಟ್ ಆಡಿದ್ದು ಯಾವಾಗ?
ಆಗಸ್ಟ್ 16 ಶುಕ್ರವಾರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು 2024-25ರ ದುಲೀಪ್ ಟ್ರೋಫಿಗಾಗಿ ಎಲ್ಲಾ ನಾಲ್ಕು ತಂಡಗಳನ್ನು ಪ್ರಕಟಿಸಿದೆ.
ಭಾರತದ ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿ ಅವರು ದುಲೀಪ್ ಟ್ರೋಫಿಯಲ್ಲಿ ಆಡುವ ಬಗ್ಗೆ ಮೂಲಗಳು ತಿಳಿಸಿದ್ದವು. ಆದರೆ, ಈ ಮೂವರು ದೇಶೀಯ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಸೆಪ್ಟೆಂಬರ್ 5 ರಿಂದ ದುಲೀಪ್ ಟ್ರೋಫಿ ಆರಂಭವಾಗಲಿದೆ. ಮೊದಲ ಸುತ್ತಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಾದ ನಂತರ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದ್ದು, ಈ ಟೆಸ್ಟ್ ಸರಣಿಗೆ ಬಲಿಷ್ಠ ಭಾರತ ತಂಡವನ್ನು ಕಟ್ಟಲು ಬಿಸಿಸಿಐ ಆಯ್ಕೆ ಸಮಿತಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಇದರ ಬೆನ್ನಲ್ಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ದೇಶೀಯ ಕ್ರಿಕೆಟ್ ಅನ್ನು ಕೊನೆಯದಾಗಿ ಯಾವಾಗ ಆಡಿದ್ದರು ಎಂಬ ಪ್ರಶ್ನೆಗಳು ಭಾರತೀಯ ಕ್ರೀಡಾಭಿಮಾನಿಗಳಲ್ಲಿ ಹುಟ್ಟುಕೊಂಡಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ.
ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತನ್ನ ಕೊನೆಯ ದೇಶೀಯ ಕ್ರಿಕೆಟ್ ಪಂದ್ಯವನ್ನು 8 ವರ್ಷಗಳ ಹಿಂದೆ ಸೆಪ್ಟೆಂಬರ್ 2016 ರಲ್ಲಿ ಆಡಿದ್ದರು. ಅವರ ಕೊನೆಯ ಹೋಮ್ ಪಂದ್ಯ ದುಲೀಪ್ ಟ್ರೋಫಿಯಲ್ಲಿ ಇಂಡಿಯಾ ರೆಡ್ ವಿರುದ್ಧ ಇಂಡಿಯಾ ಬ್ಲೂ ಪರ ಕಣಕ್ಕಿಳಿದಿದ್ದರು.
ಈ ಪಂದ್ಯದಲ್ಲಿ ಅವರ ಪ್ರದರ್ಶನ ಉತ್ತಮವಾಗಿರಲಿಲ್ಲ. ಎರಡೂ ಇನ್ನಿಂಗ್ಸ್‌ಗಳಲ್ಲಿ ದೊಡ್ಡ ಮೊತ್ತವನ್ನು ಗಳಿಸಲು ವಿಫಲವಾಗಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾದರೆ ಎರಡನೇ ಇನ್ನಿಂಗ್ಸ್‌ನಲ್ಲಿ =ಕೇವಲ 32 ರನ್ ಗಳಿಸಿದ್ದರು.
ವಿರಾಟ್ ಕೊಹ್ಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದೇಶೀಯ ಕ್ರಿಕೆಟ್ ಆಡಿ ಒಂದು ದಶಕಕ್ಕೂ ಹೆಚ್ಚು ಸಮಯ ಕಳೆದಿದೆ. ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ವಿಶೇಷವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತವಾಗಿ ಕಾಣಿಸಿಕೊಂಡಿರುವ ಕೊಹ್ಲಿ ಭಾರತದ ಪರ ಅತಿಹೆಚ್ಚು ದ್ವಿಶತಕ ಶತಕಗಳನ್ನು ಹೊಡೆದಿರುವ ಮೊದಲ ಬ್ಯಾಟರ್ ಆಗಿದ್ದಾರೆ. 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಕೊಹ್ಲಿ ಮಾಡಿದ್ದರು. ಇದಾದ ಬಳಿಕ 2012-13 ಸಾಲಿನ ರಣಜಿ ಟ್ರೋಫಿಯಲ್ಲಿ ಉತ್ತರ ಪ್ರದೇಶ ವಿರುದ್ಧ ಪಂದ್ಯದಲ್ಲಿ ಅವರು ದೆಹಲಿ ಪರ ಆಡಿದ್ದರು. ಈ ಪಂದ್ಯದಲ್ಲಿ ಕೇವಲ ಎರಡು ಇನ್ನಿಂಗ್ಸ್‌ಗಳಿಂದ 14 ಮತ್ತು 43 ರನ್ ಕಲೆ ಹಾಕಿದ್ದರು.
ಜಸ್ಪ್ರೀತ್ ಬುಮ್ರಾ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅತ್ಯುತ್ತಮ ಬೌಲರ್ ಎಂಬುದರಲ್ಲಿ ಎರಡು ಮಾತಿಲ್ಲ. ಪರಿಸ್ಥಿತಿಗಳಿಗೆ ತಕ್ಕಂತೆ ಹೊಂದಿಕೊಂಡು ಬೌಲಿಂಗ್ ಮಾಡು ಸಾಮರ್ಥ್ಯವನ್ನು ಹೊಂದಿದ್ದಾರೆ. ಬುಮ್ರಾ 2018 ರಲ್ಲಿ ಭಾರತದ ಪರ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಇದರ ನಂತರ, ಅವರು ಮೊದಲ ದಿನದಿಂದಲೂ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗದ ಪ್ರಮುಖ ಭಾಗವಾಗಿದ್ದಾರೆ.
ಆದರೆ ಜೂನ್ 29 ರಂದು ಟಿ20 ವಿಶ್ವಕಪ್ ಗೆದ್ದ ನಂತರ ಬುಮ್ರಾ ಯಾವುದೇ ಸರಣಿಗಳಲ್ಲಿ ಕಾಣಿಸಿಕೊಂಡಿಲ್ಲ.ಅಲ್ಲದೆ, ದುಲೀಪ್ ಟ್ರೋಫಿ ಟೂರ್ನಿಯಿಂದಲ್ಲೂ ದೂರ ಉಳಿದಿದ್ದಾರೆ. ಬುಮ್ರಾ 2016-17ರಲ್ಲಿ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಟೂರ್ನಿಯಲ್ಲಿ ಗುಜರಾತ್ ತಂಡವನ್ನು ಕೊನೆಯ ಬಾರಿ ಪ್ರತಿನಿಧಿಸಿದ್ದರು. ಈ ಪಂದ್ಯದಲ್ಲಿ 29 ರನ್‌ಗೆ 6 ವಿಕೆಟ್ ಪಡೆದು ಮಿಂಚಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications