IND vs BAN: ಬಾಂಗ್ಲಾದೇಶ ವಿರುದ್ಧದ ತವರಿನ ಸರಣಿಗೆ ಭಾರತ ತಯಾರು; ಮೈದಾನಕ್ಕೆ ಎಂಟ್ರಿ ಯಾವಾಗ?
ಆಗಸ್ಟ್ 10 ಶನಿವಾರ, ಶ್ರೀಲಂಕಾ ಪ್ರವಾಸ ಬಳಿಕ ಯಾವಾಗ ಟೀಮ್ ಇಂಡಿಯಾ ಮೈದಾನಕ್ಕೆ ಎಂಟ್ರಿ ಕೊಡಲಿದೆ ಎಂಬುದು ಭಾರತೀಯ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಮುಗಿಯುತ್ತಿದ್ದಂತೆ ಟೀಮ್ ಇಂಡಿಯಾದ ಆಟಗಾರರು ಸುದೀರ್ಘ ವಿರಾಮದಲ್ಲಿದ್ದಾರೆ.
ವಿರಾಮದ ನಂತರ ಸೆಪ್ಟೆಂಬರ್ 19ರಂದು ಭಾರತ ತಂಡ ನೇರವಾಗಿ ಕ್ರಿಕೆಟ್ ಮೈದಾನ ಪ್ರವೇಶಿಸಬೇಕಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಪೂರ್ವಭ್ಯಾಸ ನಡೆಸಲಿದ್ದಾರೆ.

ಉಭಯ ತಂಡಗಳ ನಡುವಿನ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ. ಟೆಸ್ಟ್ ಸರಣಿಯ ನಂತರ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯೂ ಆರಂಭವಾಗಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 23 ರವರೆಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.
ಬಾಂಗ್ಲಾದೇಶ ವಿರುದ್ಧದ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಂತಹ ಸ್ಟಾರ್ ಅನುಭವಿ ಆಟಗಾರರು ಆಡಲಿದ್ದಾರೆ.
ಇದಲ್ಲದೆ, ವಿಕೆಟ್‌ಕೀಪರ್ ಮತ್ತು ಬ್ಯಾಟರ್ ರಿಷಬ್ ಪಂತ್ ಕೂಡ ಬಹುದಿನಗಳ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ರಿಷಬ್ ಪಂತ್ ಅತ್ಯಂತ ಅಪಾಯಕಾರಿ ಬ್ಯಾಟರ್ ಆಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ.
ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ ವೇಳಾಪಟ್ಟಿ
- ಮೊದಲ ಟೆಸ್ಟ್ ಪಂದ್ಯ - ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 23, ಬೆಳಿಗ್ಗೆ 9.30 ಗಂಟೆಗೆ, ಚೆನ್ನೈ
- ಎರಡನೇ ಟೆಸ್ಟ್ ಪಂದ್ಯ - ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1, ಬೆಳಗ್ಗೆ 9.30 ಗಂಟೆಗೆ, ಕಾನ್ಪುರ
ಟೆಸ್ಟ್ ಬಳಿಕ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯಲಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಅಂತಾರಾಷ್ಟ್ರೀಯ ಸರಣಿ ಅಕ್ಟೋಬರ್ 6 ರಿಂದ ಅಕ್ಟೋಬರ್ 12 ರವರೆಗೆ ನಡೆಯಲಿದೆ. ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಭಾರತ vs ಬಾಂಗ್ಲಾದೇಶ ಟಿ20 ಸರಣಿ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ - ಅಕ್ಟೋಬರ್ 6, ರಾತ್ರಿ 7.00 ಗಂಟೆಗೆ, ಧರ್ಮಶಾಲಾ
- ಎರಡನೇ ಟಿ20 ಪಂದ್ಯ - ಅಕ್ಟೋಬರ್ 9, ಸಂಜೆ 7.00 ಗಂಟೆಗೆ, ದೆಹಲಿ
- ಮೂರನೇ ಟಿ20 ಪಂದ್ಯ - ಅಕ್ಟೋಬರ್ 12, ರಾತ್ರಿ 7.00 ಗಂಟೆಗೆ, ಹೈದರಾಬಾದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications