Rohit Sharma-Virat Kohli: ರೋಹಿತ್-ವಿರಾಟ್ ಮೈದಾನಕ್ಕೆ ಮರಳುವುದು ಯಾವಾಗ?
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 10 ವರ್ಷಗಳ ನಂತರ ಭಾರತ ಕಳೆದುಕೊಂಡಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಸೋಲಿನ ನಂತರ ಭಾರತ ಟೀಕೆಗಳಿಗೆ ಗುರಿಯಾಗಿದೆ. ಸೋಲಿಗೆ ಕಾರಣವೇನು ಎಂಬ ಚರ್ಚೆಗಳನ್ನು ಕ್ರಿಕೆಟ್ ಪಂಡಿತರು ನಡೆಸುತ್ತಿದ್ದಾರೆ. ಇದರ ಮಧ್ಯೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಳಪೆ ಫಾರ್ಮ್ ಸಮಸ್ಯೆ ಎದುರಿಸಿದ ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೈದಾನಕ್ಕೆ ಯಾವಾಗ ಮರಳುತ್ತಾರೆ ಎಂದು ಯೋಚಿಸುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಬ್ಬರಿಸಲಿಲ್ಲ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿದರೂ, ಸರಣಿಯುದಕ್ಕೂ ಮಂಕಾಗಿದ್ದರು. ಇನ್ನೂ ರೋಹಿತ್ ಶರ್ಮಾ ಎರಡನೇ ಮಗುವಿನ ಜನನದ ಕಾರಣ ಮೊದಲ ಟೆಸ್ಟ್ ಪಂದ್ಯ ಆಡಿರಲಿಲ್ಲ. ನಂತರ ಟೀಮ್ ಇಂಡಿಯಾ ಸೇರಿದ ರೋಹಿತ್ ಶರ್ಮಾ ಕೂಡ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಇದಾದ ನಂತರ ಸ್ಟಾರ್ ಬ್ಯಾಟರ್‌ಗಳ ವೃತ್ತಿಜೀವನದ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ.

ಮರಳುವುದು ಯಾವಾಗ?
ಆಸ್ಟ್ರೇಲಿಯಾ ಟೆಸ್ಟ್ ಪ್ರವಾಸ ಮುಗಿಸಿರುವ ಭಾರತ ಸದ್ಯ ವಿಶ್ರಾಂತಿಗೆ ಜಾರಿದೆ. ಇದಾದ ನಂತರ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾ ಸಂಪೂರ್ಣವಾಗಿ ಸಿದ್ಧವಾಗಿದೆ. ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಈ ಸರಣಿಯೂ ಪ್ರಮುಖವಾಗಿದೆ. ಭಾರತ ತಂಡವನ್ನು ಪ್ರಕಟಿಸುವ ಮುನ್ನ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.
ವರದಿಗಳ ಪ್ರಕಾರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫೆಬ್ರವರಿ 6 ರಿಂದ ತವರು ನೆಲದಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡದ ಭಾಗವಾಗಲಿದ್ದಾರೆ. ಈ ಸರಣಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಗೆ ಪ್ರಮುಖವಾಗಿದೆ. ಕಳಪೆ ಫಾರ್ಮ್ ಎದುರಿಸುತ್ತಿರುವ ಈ ಇಬ್ಬರು ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಯ ಕಂಡುಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಈ ಸರಣಿಯ ಭಾಗವಾಗಲು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರಿಗೂ ಬಿಸಿಸಿಐ ಆಯ್ಕೆ ಸಮಿತಿ ತಿಳಿಸಿದೆ ಎನ್ನಲಾಗಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಪ್ರಾರಂಭವಾಗುವ ಮೊದಲು, ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ, ಇಂಗ್ಲೆಂಡ್ ಜನವರಿ 22 ಮತ್ತು ಫೆಬ್ರವರಿ 2 ರ ನಡುವೆ ಮೊದಲ 5 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರ ನಡುವೆ 3 ಏಕದಿನ ಪಂದ್ಯಗಳನ್ನು ಉಭಯ ತಂಡಗಳು ಆಡಲಿವೆ.
ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭವಾಗಲು ಇನ್ನೂ ಒಂದು ತಿಂಗಳು ಬಾಕಿ ಇದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಪುನರಾಗಮನ ಮಾಡುತ್ತಾರೆ ಎಂದು ನಿರೀಕ್ಷಿಸಲಾಗಿದೆ. ಈ ಸರಣಿಯಲ್ಲಿ ಇಬ್ಬರೂ ಲಯ ಕಂಡುಕೊಂಡರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಭರವಸೆ ಇದೆ. ಈ ಮೂಲಕ 11 ವರ್ಷಗಳ ನಂತರ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮತ್ತೊಮ್ಮೆ ಗೆಲ್ಲಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications