For Quick Alerts
ALLOW NOTIFICATIONS  
For Daily Alerts
 

ರೋ-ಕೊ ಜೋಡಿ ಮತ್ತೆ ಮೈದಾನಕ್ಕೆ ಇಳಿಯುವುದು ಯಾವಾಗ?

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಈ ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ಮೊದಲ ಬಾರಿಗೆ ಭಾರತದಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ಭಾರತದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಮೂರನೇ ಏಕದಿನ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದ್ದಾರೆ. ಈ ಮೂಲಕ ತಮ್ಮಲ್ಲಿರುವ ಬ್ಯಾಟಿಂಗ್ ಕ್ಷಮತೆಯನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವುದು ಯಾವಾಗ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಭಾರತದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಗಿಲ್ ಪಡೆ ನಿರಾಸೆ ಅನುಭವಿಸಿದೆ. ಈ ಸರಣಿಯಲ್ಲಿ ಗಿಲ್ ಪಡೆ ಸೋಲು ಕಂಡಿದ್ದು, ತವರಿನಲ್ಲಿ ಆಡಿದ ಮೊದಲ ಏಕದಿನ ಸರಣಿಯಲ್ಲಿ ಹಿನ್ನಡೆ ಅನುಭವಿಸಿದೆ. ಟೀಮ್ ಇಂಡಿಯಾ ಈ ಸರಣಿಯ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಡುತ್ತಿಲ್ಲ. ಹೀಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತೆ ಅಂಗಳಕ್ಕೆ ಮರಳುವುದು ಯಾವಾಗ ಎಂಬ ಕುತೂಹಲ ಮನೆಮಾಡಿದೆ.

When Will Virat Kohli and Rohit Sharma Return to International Cricket Check the Full Schedule

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಟಿ20 ವಿಶ್ವಕಪ್ ನಡೆಯಲಿದೆ. ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ವಿಶ್ವಕಪ್‌ 2026ಕ್ಕೆ ಆತಿಥ್ಯ ನೀಡಲಿವೆ. ಭಾರತದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ ಆಡುತ್ತಿಲ್ಲ. ಹೀಗಾಗಿ ವಿರಾಟ್‌ ಹಾಗೂ ರೋಹಿತ್‌ ಇನ್ನು ಏಕದಿನ ಕ್ರಿಕೆಟ್‌ಗೆ ಭಾರತದ ಪರ ಆಡುವುದು ಯಾವಾಗ ಎಂಬ ಪ್ರಶ್ನೆಗಳು ಎದ್ದಿವೆ.

ಇಂಗ್ಲೆಂಡ್ ಪ್ರವಾಸ..

ಟೀಮ್ ಇಂಡಿಯಾ ತನ್ನ ಮುಂದಿನ ಏಕದಿನ ಸರಣಿಯನ್ನು ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ತಂಡ ಐದು ಪಂದ್ಯಗಳ ಟಿ20 ಸರಣಿ ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಅಲ್ಲಿ ಆಡಲಿದೆ. ಸರಣಿಯ ಆರಂಭ ಟಿ20 ಸರಣಿಯಿಂದ ಆಗಲಿದ್ದು ಮೊದಲ ಪಂದ್ಯ ಜುಲೈ 1 ರಂದು ನಡೆಯಲಿದೆ. ಕೊನೆಯ ಟಿ20 ಪಂದ್ಯ ಜುಲೈ 11 ರಂದು ನಡೆಯಲಿದೆ. ಈ ಸರಣಿ ಮುಗಿದ ಬಳಿಕ ಜುಲೈ 14 ರಂದು ಏಕದಿನ ಸರಣಿಗಳು ಆರಂಭವಾಗಲಿವೆ. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಈ ಸರಣಿಯ ಮೂಲಕ ಮತ್ತೆ ಅಖಾಡಕ್ಕೆ ಎಂಟ್ರಿ ನೀಡಲಿದ್ದಾರೆ.

When Will Virat Kohli and Rohit Sharma Return to International Cricket Check the Full Schedule

ಇಂಗ್ಲೆಂಡ್ ಪ್ರವಾಸಕ್ಕೆ ಇನ್ನು ಭಾರತ ತಂಡವನ್ನು ಪ್ರಕಟಿಸಿಲ್ಲ. ಆದರೂ ಸದ್ಯದ ಫಾರ್ಮ್‌ ನೋಡಿದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಈ ಸರಣಿಯಲ್ಲಿ ಆಡಬಹುದು ಎಂದು ಅಂದಾಜಿಸಲಾಗಿದೆ. ಇಬ್ಬರೂ ಆಟಗಾರರು 2027 ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಕನಸು ಕಾಣುತ್ತಿದ್ದಾರೆ. ಆದ್ದರಿಂದ, ಅವರಲ್ಲಿ ಯಾರಾದರೂ ಏಕದಿನ ಪಂದ್ಯಗಳಿಂದ ದೂರ ಉಳಿಯುವ ಸಾಧ್ಯತೆಯಿಲ್ಲ. ಏಕದಿನ ವಿಶ್ವಕಪ್‌ಗೆ ಮುನ್ನ ಈ ಸರಣಿ ಇಬ್ಬರೂ ಆಟಗಾರರಿಗೆ ಬಹಳ ಮುಖ್ಯವಾಗಿದೆ.

Story first published: Monday, January 19, 2026, 16:34 [IST]
Other articles published on Jan 19, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+