Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

BCCI central contracts: ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಕನ್ನಡಿಗರಿಗೆ ಕಡೆಗಣನೆ

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ (ಏಪ್ರಿಲ್ 21) 2024-25ರ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಹಲವು ಹೊಸ ಹೆಸರುಗಳು ಸೇರ್ಪಡೆಯಾಗಿವೆ. ಬಿಸಿಸಿಐ 5 ಆಟಗಾರರ ಅದೃಷ್ಟವನ್ನು ತೆರೆದಿದ್ದು, ಮೊದಲ ಬಾರಿಗೆ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕೆಲವು ಆಟಗಾರರು ನಿರಾಶೆಯನ್ನೂ ಎದುರಿಸಿದ್ದಾರೆ. ಶಾರ್ದೂಲ್ ಠಾಕೂರ್ ಸೇರಿದಂತೆ 9 ಆಟಗಾರರನ್ನು ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿದೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಎ+ ಗ್ರೇಡ್‌ನಲ್ಲಿ ಉಳಿದಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು 'ಬಿ' ಗ್ರೇಡ್‌ನಿಂದ 'ಎ' ಗೆ ಬಡ್ತಿ ನೀಡಲಾಗಿದೆ. ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗೆಲುವಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು 'ಬಿ' ಗ್ರೇಡ್‌ಗೆ ಬಡ್ತಿ ನೀಡಲಾಗಿದೆ. ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಅವರು ಐದು ಇನ್ನಿಂಗ್ಸ್‌ಗಳಲ್ಲಿ 48.60 ಸರಾಸರಿಯಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 243 ರನ್ ಗಳಿಸಿದರು.

Who are the players left out of the BCCI central contract list for 2025

ಇಶಾನ್ ಕಿಶನ್ ಕಮ್‌ಬ್ಯಾಕ್

ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಸಿ ಗ್ರೇಡ್‌ನಲ್ಲಿ ಸೇರಿಸಲಾಗಿದೆ. ಕಳೆದ ವರ್ಷ ಅಯ್ಯರ್ ಮತ್ತು ಕಿಶನ್ ಅವರಿಗೆ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈ ಬಿಡಲಾಗಿತ್ತು. ದೇಶೀಯ ಕ್ರಿಕೆಟ್‌ ಆಡದ ಕಾರಣ ಅಯ್ಯರ್ ಮತ್ತು ಕಿಶನ್ ಇಬ್ಬರೂ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿದ್ದರು. ಆದರೆ ಬಿಸಿಸಿಐ ಸಾರ್ವಜನಿಕವಾಗಿ ಈ ಕಾರಣವನ್ನು ಬಹಿರಂಗಪಡಿಸಲಿಲ್ಲ.

ಐವರು ಆಟಗಾರರಿಗೆ ಅದೃಷ್ಟ

2024 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅದ್ಭುತ ಪುನರಾಗಮನ ಮಾಡಿದ ನಂತರ ವರುಣ್ ಚಕ್ರವರ್ತಿ ಅವರು ಸಿ ಗ್ರೇಡ್ ಅಡಿಯಲ್ಲಿ ತಮ್ಮ ಮೊದಲ ಗುತ್ತಿಗೆಯನ್ನು ಪಡೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಜಂಟಿಯಾಗಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಅವರು ಮೂರು ಇನ್ನಿಂಗ್ಸ್‌ಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದರು. 2024-25ರ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡ ತಮ್ಮ ಚೊಚ್ಚಲ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸ್ಫೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ, ವೇಗಿ ಆಕಾಶ್ ದೀಪ್ ಮತ್ತು ಹರ್ಷಿತ್ ರಾಣಾ ಅವರಿಗೆ ಮೊದಲ ಬಾರಿಗೆ ಸ್ಥಾನ ನೀಡಲಾಗಿದೆ.

9 ಆಟಗಾರರು ಔಟ್

ಜಿತೇಶ್ ಶರ್ಮಾ, ಶಾರ್ದೂಲ್ ಠಾಕೂರ್, ಕೆಎಸ್ ಭರತ್ ಮತ್ತು ಆವೇಶ್ ಖಾನ್ ಅವರನ್ನು ಸಿ ಗ್ರೇಡ್‌ನಿಂದ ಕೈ ಬಿಡಲಾಗಿದೆ. ಡಿಸೆಂಬರ್ 2024 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಅನುಭವಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಅವರನ್ನು ಎ ಗ್ರೇಡ್‌ನಿಂದ ತೆಗೆದುಹಾಕಲಾಗಿದೆ. ವೇಗದ ಬೌಲರ್‌ಗಳಾದ ವಿಜಯ್‌ಕುಮಾರ್ ವೈಶಾಕ್, ಉಮ್ರಾನ್ ಮಲಿಕ್, ಯಶ್ ದಯಾಳ್ ಮತ್ತು ವಿದಾವತ್ ಕಾವೇರಪ್ಪ ಕೂಡ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿದ್ದಾರೆ.

ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿ

ಗ್ರೇಡ್-ಎ+: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ.

ಗ್ರೇಡ್-ಎ: ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕೆಎಲ್ ರಾಹುಲ್, ಶುಭಮನ್ ಗಿಲ್, ರಿಷಭ್ ಪಂತ್.

ಗ್ರೇಡ್-ಬಿ: ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್.

ಗ್ರೇಡ್-ಸಿ: ರಿಂಕು ಸಿಂಗ್, ತಿಲಕ್ ವರ್ಮಾ, ರಿತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟಿದಾರ್, ಧ್ರುವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ಇಶಾನ್ ಕಿಶನ್, ಅಖಿಷೇಕ್ ಶರ್ಮ ವರ್ಮಾ, ಅಭಿಷೇಕ್ ಶರ್ಮಾ ವರ್ತಿ.

ಯಾವ ದರ್ಜೆಗೆ ಎಷ್ಟು ಸಂಬಳ?

ಎ+ ದರ್ಜೆ - ವಾರ್ಷಿಕ 7 ಕೋಟಿ ರೂ.
ಎ ಗ್ರೇಡ್ - ವಾರ್ಷಿಕ 5 ಕೋಟಿ ರೂ.
ಬಿ ಗ್ರೇಡ್ - ವಾರ್ಷಿಕ 3 ಕೋಟಿ ರೂ.
ಸಿ ಗ್ರೇಡ್ - ವಾರ್ಷಿಕ 1 ಕೋಟಿ ರೂ.

Story first published: Tuesday, April 22, 2025, 10:04 [IST]
Other articles published on Apr 22, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+