Steven Smith: ನಾಯಕನಾಗಿ ಹೇಗಿದೆ ಸ್ಟೀವನ್ ಸ್ಮಿತ್ ಅಂಕಿ ಅಂಶ: ಇಲ್ಲಿದೆ ವರದಿ
ಆಸ್ಟ್ರೇಲಿಯಾ ತವರಿನಲ್ಲಿ ಅಮೋಘ ಪ್ರದರ್ಶನ ನೀಡಿ ಭಾರತವನ್ನು ಮಣಿಸಿ ಬಾರ್ಡರ್ ಗವಾಸ್ಕರ್ ಸರಣಿಯನ್ನು ಗೆದ್ದುಕೊಂಡಿತ್ತು. ಕಳೆದ 10 ವರ್ಷಗಳಿಂದ ಮಾಡದ ಸಾಧನೆಯನ್ನು ಆಸ್ಟ್ರೇಲಿಯಾ ತಂಡ ಮಾಡಿ ಬೀಗಿದೆ. ಈ ಸರಣಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ ಪ್ಯಾಟ್ ಕಮಿನ್ಸ್ ಮುಂದಾಳತ್ವದ ತಂಡ 3-1 ರಿಂದ ವಶಪಡಿಸಿಕೊಂಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆದಿದೆ. ಇನ್ನು ಇನ್ನೇನು ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ.
ಶ್ರೀಲಂಕಾ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರಿಗೆ ನೀಡಲಾಗಿದೆ. ಇವರು 2023ರ ಬಳಿಕ ಇದೇ ಮೊದಲ ಬಾರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನೀಡಲಾಗಿದೆ. ಗಾಯದ ಕಾರಣದಿಂದ ಪ್ಯಾಟ್ ಕಮಿನ್ಸ್ ಶ್ರೀಲಂಕಾ ಪ್ರವಾಸವನ್ನು ಬೆಳೆಸುತ್ತಿಲ್ಲ. ಹೀಗಾಗಿ ತಂಡವನ್ನು ಸ್ಟೀವನ್ ಸ್ಮಿತ್ ಮುನ್ನಡೆಸಲಿದ್ದಾರೆ.

ಪ್ಯಾಟ್ ಕಮಿನ್ಸ್ ಪಾದದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇವರನ್ನು ತಂಡದಿಂದ ಹೊರಗಿಡಲಾಗಿದೆ. ಇವರ ಅನುಪಸ್ಥಿತಿಯಲ್ಲಿ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮಿತ್ ಈ ಹಿಂದೆಯೂ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಚೆಂಡು ವಿರೂಪ ಪ್ರಕರಣದ ನಂತರ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಯಿತು. ಇನ್ನು ಇದಾದ ಬಳಿಕ ಇವರ ಮೇಲೆ ನಿಷೇಧ ಹೇರಲಾಯಿತು. ಅಲ್ಲದೆ ಹಲವು ತಿಂಗಳುಗಳ ಬಳಿಕ ಆ ನಿಷೇಧವನ್ನು ತೆಗೆದು ಹಾಕಲಾಯಿತು. ಆ ಬಳಿಕ ಒಂದು ಸರಣಿಗೆ ಅವರು ತಂಡದ ನಾಯಕತ್ವ ನೀಡಲಾಯಿತು. ಆದರೆ ಅವರು ಗಾಯದ ಸಮಸ್ಯೆಯಿಂದ ಹೊರಗುಳಿಯಬೇಕಾಯಿತು.
ಸ್ಮಿತ್ ನಾಯಕರಾಗಿ ಸಾಧನೆ
ಸ್ಟೀವನ್ ಸ್ಮಿತ್ ಬಹುದಿನಗಳ ಬಳಿಕ ಸರಣಿಯಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾಯಕನಾಗಿ ಸ್ಮಿತ್ ದಾಖಲೆ ಅಮೋಘ. ಇವರು 38 ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿದ್ದು, ಈ ವೇಳೆ ತಂಡ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದು, 10 ಪಂದ್ಯಗಳಲ್ಲಿ ಸೋತಿದೆ. ಟೆಸ್ಟ್ ನಾಯಕನಾಗಿ ಸ್ಮಿತ್ ಗೆಲುವಿನ ಸರಾಸರಿ 67.74 ಆಗಿದೆ.
ಇನ್ನು ಇತ್ತೀಚಿನ ದಿನಗಳಲ್ಲಿ ಪ್ಯಾಟ್ ಕಮಿನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇವರ ಮುಂದಾಳತ್ವದಲ್ಲಿ ತಂಡ 33 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 20 ಪಂದ್ಯಗಳಲ್ಲಿ ಜಯ ದಾಖಲಿಸಿದೆ. ಅಲ್ಲದೆ 7 ಸೋಲು, 6 ಡ್ರಾ ಕಂಡಿದೆ. ಪ್ಯಾಟ್ ಕಮಿನ್ಸ್ ನಾಯಕರಾಗಿ ಗೆಲುವಿನ ಸರಾಸರಿ 74.07 ಆಗಿದೆ.

ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಸಾಧನೆ
ಸ್ಟೀವನ್ ಸ್ಮಿತ್ ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಸರಣಿಯಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಲ್ಲದೆ ಸುಮಾರು 500 ದಿನಗಳ ಬಳಿಕ ಶತಕ ಬಾರಿಸಿ ಸಂಭ್ರಮಿಸಿದ್ದರು. ಇವರು ಆಡಿದ 5 ಪಂದ್ಯಗಳ 9 ಇನಿಂಗ್ಸ್‌ಗಳಲ್ಲಿ 34.88ರ ಸರಾಸರಿಯಲ್ಲಿ 314 ರನ್ ಗಳಿಸಿದ್ದಾರೆ. ಈ ಮೂಲಕ ಲಯಕ್ಕೆ ಮರಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications