ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾದ ಈ 13 ವರ್ಷದ ಆಟಗಾರ ಯಾರು?
ಭಾರತದಲ್ಲಿ ಕ್ರಿಕೆಟ್ ಪ್ರತಿಭೆಗಳಿಗೆ ಕೊರೆತೆ ಇಲ್ಲ. ಪ್ರತಿ ಮನೆಯಲ್ಲೂ ಒಬ್ಬರಾದರೂ ಕ್ರಿಕೆಟ್ ಅಭಿಮಾನಿಯಾಗಿ ಹೋಗಿದ್ದಾರೆ. ಹೀಗಾಗಿ ಭಾರತದಲ್ಲಿ ಕ್ರಿಕೆಟ್ ಅತ್ಯಂತ ವೇಗವಾಗಿ ಬೆಳಯುತ್ತಿರುವ ಕ್ರೀಡೆಯಾಗಿದೆ.
ಯುವ ಪ್ರತಿಭೆಗಳು ಟೀಮ್ ಇಂಡಿಯಾ ಪರ ಆಡಬೇಕೆಂದು ಆಸೆ ಪಡುತ್ತಾರೆ. ಅದರಂತೆ ತಮ್ಮ ನೆಚ್ಚಿನ ಆಟದ ಮೇಲೆ ಕಠಿಣ ಪರಿಶ್ರಮ ಹಾಕಿ ಅಭ್ಯಾಸ ನಡೆಸುತ್ತಾರೆ. ಇದರಲ್ಲಿ ಕೆಲವರಿಗೆ ಮಾತ್ರ ಭಾರತ ತಂಡ ಸೇರುವ ಅದೃಷ್ಟದ ಬಾಗಿಲು ತೆಗೆಯುತ್ತದೆ.

ಇದೀಗ ಬಿಹಾರದ ಯುವ ಆಟಗಾರನ ಅದೃಷ್ಟದ ಬಾಗಿಲು ತೆರೆದಿದೆ. 13 ವರ್ಷದ ಉದಯೋನ್ಮುಖ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಆಸ್ಟ್ರೇಲಿಯಾ ವಿರುದ್ಧ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ . ಈ ವರ್ಷದ ಆರಂಭದಲ್ಲಿ ಅವರು ರಣಜಿ ಟೂರ್ನಿಯಲ್ಲಿ ಆಡಿದ್ದಾರೆ. ಇದರೊಂದಿಗೆ ರಣಜಿಯಲ್ಲಿ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ.
ವೈಭವ್ ಸೂರ್ಯವಂಶಿ ಬಿಹಾರದ ಸಮಸ್ತಿಪುರ್ ನಿವಾಸಿಯಾಗಿದ್ದು, ಪಾಟ್ನಾದ ಜೆನೆಕ್ಸ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಈಗ ಅವರು ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾದ ಸುದ್ದಿ ತಿಳಿದು ವೈಭವ್ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಅಬ್ಬರಿಸಲು ರೆಡಿ
ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧ ಭಾರತ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಎಡಗೈ ಬ್ಯಾಟರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಪರಾಕ್ರಮವನ್ನು ತೋರಿಸಲು ಸಜ್ಜಾಗಿದ್ದಾರೆ.
ಭಾರತ ತಂಡದಲ್ಲಿ ಆರಂಭಿಕರಾಗಿ ಆಯ್ಕೆಯಾಗಿದ್ದು, ಈ ತಂಡದಲ್ಲಿ ಅವರು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್‌ನೊಂದಿಗೆ ಆಡಲಿದ್ದಾರೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 10 ರವರೆಗೆ ಚೆನ್ನೈನಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ.
ಅತ್ಯುತ್ತಮ ದಾಖಲೆ
ವೈಭವ್ ಕಳೆದ ವರ್ಷ ನವೆಂಬರ್‌ನಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶದ ಅಂಡರ್-19 ಬಿ ತಂಡದ ವಿರುದ್ಧ ಆಡಿದ್ದರು. ಅವರು ಐದು ಪಂದ್ಯಗಳಲ್ಲಿ 177 ರನ್ ಗಳಿಸಿದ್ದರು. ಅವರನ್ನು ಬಿಸಿಸಿಐ ಆಯ್ಕೆ ಮಾಡುವ ಮುನ್ನ, ಅಸ್ಸಾಂನಲ್ಲಿ ನಡೆದ ಅಂಡರ್-19 ವಿನೂ ಮಕಾಂದ್ ಟ್ರೋಫಿ ಸ್ಪರ್ಧೆಯಲ್ಲಿ ಬಿಹಾರ ಪರ ಆಡುವಾಗ 360 ರನ್ ಬಾರಿಸಿದ್ದರು. ಅವರ ಸಾಧನೆಗೆ ಬಿಹಾರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಾಕೇಶ್ ತಿವಾರಿ ಅಭಿನಂದನೆ ಸಲ್ಲಿಸಿದ್ದರು.
ಭಾರತ ಅಂಡರ್-19 ತಂಡ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ, ಸೋಹಮ್ ಪಟವರ್ಧನ್ (ನಾಯಕ), ಕಾರ್ತಿಕೇಯ ಕೆಪಿ, ಸಮಿತ್ ದ್ರಾವಿಡ್, ಅಭಿಗ್ಯಾನ್ ಕುಂದು (ವಿಕೆಟ್ ಕೀಪರ್), ಹರ್ವಂಶ್ ಸಿಂಗ್ ಪಾಂಗ್ಲಿಯಾ (ವಿಕೆಟ್ ಕೀಪರ್), ಚೇತನ್ ಶರ್ಮಾ, ಸಮರ್ಥ್ ಎನ್, ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜಿತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಅನನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications