Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್‌ ಕೊಹ್ಲಿ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು?

ಭಾರತ ಸದ್ಯ ತವರಿನಲ್ಲಿ ಏಕದಿನ ಸರಣಿಯನ್ನು ಆಡಲು ಸಜ್ಜಾಗುತ್ತಿದೆ. ಇದಕ್ಕೂ ಮೊದಲು ಅಫ್ಘಾನಿಸ್ತಾನದ ವಿರುದ್ಧ ನಡೆದ ಏಕೈಕ ಟೆಸ್ಟ್‌ ಪಂದ್ಯದಲ್ಲಿ ಇನಿಂಗ್ಸ್‌ ಹಾಗೂ 300 ರನ್‌ಗಳಿಂದ ಜಯ ಸಾಧಿಸಿದೆ. ಶನಿವಾರದಿಂದ ಉಭಯ ತಂಡಗಳ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಅಫ್ಘಾನ್ ವಿರುದ್ಧದ ಸರಣಿಯಲ್ಲಿ ಗಾಯದ ಕಾರಣದಿಂದಾಗಿ ವಿರಾಟ್‌ ಕೊಹ್ಲಿ ತಂಡದಿಂದ ಹೊರ ನಡೆದಿದ್ದಾರೆ. ಹೀಗಾಗಿ ತಂಡಕ್ಕೆ ದೊಡ್ಡ ಚಿಂತೆಯೊಂದು ಶುರುವಾಗಿದೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಏಕದಿನ ಫಾರ್ಮೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಾರೆ. ಇವರು ಈ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಎದುರಾಳಿ ಬೌಲರ್‌ಗಳನ್ನು ಕಾಡುವ ಕ್ಷಮತೆಯನ್ನು ಹೊಂದಿದ್ದಾರೆ. ಈಗ ಇವರ ಅನುಪಸ್ಥಿತಿಯಲ್ಲಿ ಈ ಸ್ಥಾನದಲ್ಲಿ ಆಡುವುದು ಯಾರು? ಎಂಬ ಪ್ರಶ್ನೆ ಉದ್ಭವಿಸಿದೆ. ಇದಕ್ಕೆ ಉತ್ತರ ಹುಡುಕುವ ಹುಡುಕಾಟ ನಡೆದಿದೆ.

Who Will Bat at No 3

ಮೂರನೇ ಸ್ಥಾನದಲ್ಲಿ ಆಡುವುದು ಯಾರು?

ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕ್ಷಮತೆಯನ್ನು ಹೊಂದಿರುವ ಆಟಗಾರರು ತಂಡದಲ್ಲಿದ್ದಾರೆ. ಇದರಲ್ಲಿ ಉಪನಾಯಕ ಶ್ರೇಯಸ್ ಅಯ್ಯರ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಇವರು ಈಗಾಗಲೇ ಭಾರತದ ಪರ ಮೂರನೇ ಕ್ರಮಾಂಕದಲ್ಲಿ 12 ಪಂದ್ಯಗಳಲ್ಲಿ ಬ್ಯಾಟ್ ಮಾಡಿದ್ದಾರೆ. ಈ ವೇಳೆ 57ರ ಸರಾಸರಿಯಲ್ಲಿ 694 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 7 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ಇನ್ನು ಈ ಸ್ಥಾನದಲ್ಲಿ ಆಡಲು ಇಶಾನ್‌ ಕಿಶನ್‌ ಸಹ ಸಜ್ಜಾಗಿದ್ದಾರೆ. ವಿರಾಟ್‌ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಸೇರಿರುವ ಇಶಾನ್‌ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಇಶಾನ್‌ ಕಿಶನ್‌ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ಇವರು ಸಹ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ.

ಕನ್ನಡಿಗನಿಗೆ ಸಿಗುತ್ತಾ ಅವಕಾಶ

ಇದೇ ಕ್ರಮಾಂಕದಲ್ಲಿ ಆಡಲು ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಸಹ ಕಣ್ಣು ನೆಟ್ಟಿದ್ದಾರೆ. ಇವರು ಏಕದಿನ ಫಾರ್ಮೆಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದು, ವಿರಾಟ್‌ ಕೊಹ್ಲಿ ಅನುಪಸ್ಥಿತಿಯ ಲಾಭ ಪಡೆಯಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈ ಸ್ಥಾನದಲ್ಲಿ ಆಡಿದ ಅನುಭವ ರಾಹುಲ್‌ಗೆ ಇದೆ. ಹೀಗಾಗಿ ಈ ಸ್ಥಾನ ಇವರಿಗೆ ಲಭಿಸುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

ವೇಳಾಪಟ್ಟಿ

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೊದಲ ಏಕದಿನ ಪಂದ್ಯ ಜೂನ್ 13, ಎರಡನೇ ಏಕದಿನ ಪಂದ್ಯ ಜೂನ್ 17 ಮತ್ತು ಮೂರನೇ ಏಕದಿನ ಪಂದ್ಯ 20 ರಂದು ನಡೆಯಲಿದೆ.

Story first published: Tuesday, June 9, 2026, 21:35 [IST]
Other articles published on Jun 9, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+