For Quick Alerts
ALLOW NOTIFICATIONS  
For Daily Alerts
 

BCCI: ಬಿಸಿಸಿಐನ ನೂತನ ಕಾರ್ಯದರ್ಶಿ ಯಾರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ( ಬಿಸಿಸಿಐ) ಪ್ರಸ್ತುತ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾಗಿದ್ದಾರೆ. ಬಿಸಿಸಿಐ ಜೊತೆಗಿನ ಅವರ ಅಧಿಕಾರಾವಧಿ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಈಗ ಉದ್ಭವಿಸಿರುವ ದೊಡ್ಡ ಪ್ರಶ್ನೆಯೆಂದರೆ ಅವರ ಸ್ಥಾನಕ್ಕೆ ಮುಂದಿನ ಬಿಸಿಸಿಐ ಕಾರ್ಯದರ್ಶಿ ಯಾರು?

ಡಿಸೆಂಬರ್ 1 ರಂದು ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇತ್ತ ಅವರ ಸ್ಥಾನಕ್ಕೆ ಪ್ರಬಲ ಅಭ್ಯರ್ಥಿಯನ್ನು ಬಿಸಿಸಿಐ ಹುಡುಕುತ್ತಿದೆ. ಬಿಸಿಸಿಐ ಕಾರ್ಯದರ್ಶಿ ಆಯ್ಕೆ ಪ್ರಕ್ರಿಯೆಯಲ್ಲಿ ಹೊಸಬರ ಹೆಸರುಗಳು ಚರ್ಚೆ ಆಗುತ್ತಿವೆ.

Who will be the next BCCI secretary

ಭಾನುವಾರ ಬೆಂಗಳೂರಿನಲ್ಲಿ ಬಿಸಿಸಿಐನ 93ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ನಡೆದಿತ್ತು. ಸಭೆಯಲ್ಲಿ ಹಾಜರಿದ್ದ ಸದಸ್ಯರು, ಹಾಲಿ ಕಾರ್ಯದರ್ಶಿ ಜಯ್ ಷಾ ಅವರ ಉತ್ತರಾಧಿಕಾರಿಯನ್ನು ಹುಡುಕುವ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಹೊಸ ಕಾರ್ಯದರ್ಶಿಯ ಬಗ್ಗೆ ಮಾತನಾಡುವುದು ಸಭೆಯ ಮುಖ್ಯ ವಿಷಯವಲ್ಲದಿದ್ದರೂ, ಹಾಜರಿದ್ದ ಸದಸ್ಯರು ಈ ವಿಷಯದ ಬಗ್ಗೆ ಮುಕ್ತವಾಗಿ ಮಾತನಾಡಿದರು.

ರೇಸ್‌ನಲ್ಲಿ ನಾಲ್ವರ ಹೆಸರು

ಮೂಲಗಳ ಪ್ರಕಾರ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಲ್ವರು ಪ್ರಬಲ ಅಭ್ಯರ್ಥಿಗಳ ಹೆಸರು ಮುಂಚೂಣಿಯಲ್ಲಿದೆ. ಈ ವರ್ಷ ನವೆಂಬರ್ ಅಂತ್ಯದಲ್ಲಿ ಜಯ್ ಶಾ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದು, ಡಿಸೆಂಬರ್ 1 ರಿಂದ ಮುಂದಿನ 3 ವರ್ಷಗಳ ಕಾಲ ಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಹುದ್ದೆಗೆ ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರೋಹನ್ ಜೇಟ್ಲಿ, ಜಂಟಿ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ಮತ್ತು ಗುಜರಾತ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಅನಿಲ್ ಪಟೇಲ್ ರೇಸ್‌ನಲ್ಲಿದ್ದಾರೆ.

ಜಯ್ ಶಾ ಏಷ್ಯನ್ ಕ್ರಿಕೆಟ್‌ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರೂ ಆಗಿದ್ದಾರೆ. ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಈ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಅವರ ಸ್ಥಾನಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅಧ್ಯಕ್ಷರಾಗುವ ಸಾಧ್ಯತೆಯಿದೆ.

ಎಜಿಎಂ ಸಭೆಯಲ್ಲಿ ಏನಾಯಿತು?

ಐಸಿಸಿ ಸಭೆಗಲ್ಲಿ ಪಾಲ್ಗೊಳ್ಳಲು ಭಾರತದಿಂದ ಇಬ್ಬರು ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡುವುದು ಎಜಿಎಂನ ಮತ್ತೊಂದು ಆದ್ಯತೆಯಾಗಿದೆ. ಅರುಣ್ ಧುಮಾಲ್ ಮತ್ತು ಅಭಿಷೇಕ್ ದಾಲ್ಮಿಯಾ ಅವರು ಐಪಿಎಲ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯ ಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದಾರೆ. ಧುಮಾಲ್ ಮುಂಬರುವ ಐಪಿಎಲ್ 2025 ರವರೆಗೆ ಲೀಗ್ ಅಧ್ಯಕ್ಷರಾಗಿ ಮುಂದುವರಿಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಯಿತು.

Story first published: Tuesday, October 1, 2024, 19:00 [IST]
Other articles published on Oct 1, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+