ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಬದಲಿಗೆ ಟೆಸ್ಟ್ ಮಾದರಿಯಲ್ಲಿ ಭಾರತವನ್ನು ಮುನ್ನಡೆಸುವವರು ಯಾರು?: ಬ್ರೇಟ್ ಲೀ ಹೇಳಿದ್ದಿಷ್ಟು!

Who will be the next captain of team India: Brett Lee reaction on Kohli’s replacement for Test captaincy

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಅಂತರದಿಂದ ಸೋಲು ಅನುಭವಿಸಿದ ಬಳಿಕ ಭಾರತ ತಂಡದ ಟೆಸ್ಟ್ ನಾಯಕತ್ವದಿಂದಲೂ ವಿರಾಟ್ ಕೊಹ್ಲಿ ಕೆಳಕ್ಕಿಳಿಯುವ ಘೋಷಣೆ ಮಾಡಿದರು. ಹೀಗಾಗಿ ಭಾರತ ತಂಡವನ್ನು ಟೆಸ್ಟ್ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಮುನ್ನಡೆಸುವವರು ಯಾರು ಎಂಬುದು ಕುತೂಹಲ ಮೂಡಿಸಿದೆ. ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ಚರ್ಚೆಗಳು ನಡೆಯುತ್ತಿದ್ದು ಅಭಿಮಾನಿಗಳು ಕ್ರಿಕೆಟ್ ವಿಶ್ಲೇಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಬಹುತೇಕರ ಮೊದಲ ಆಯ್ಕೆ ಅನುಭವಿ ಆಟಗಾರ ರೋಹಿತ್ ಶರ್ಮಾ ಆಗಿದ್ದರೂ ಫಿಟ್‌ನೆಸ್ ಸಮಸ್ಯೆ ರೋಹಿತ್ ನಾಯಕತ್ವಕ್ಕೇರಲು ಹಿನ್ನಡೆಯಾಗಲೂ ಬಹುದು ಎನ್ನಲಾಗುತ್ತಿದೆ.

ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಟೆಸ್ಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಕ್ಕಿಳಿದ ಬಳಿಕ ಮುನ್ನಡೆಸುವ ಆಟಗಾರ ಯಾರು ಎಂಬ ವಿಚಾರವಾಗಿ ಬ್ರೆಟ್ ಲೀ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಧೋನಿಯೇ ಐಪಿಎಲ್‌ನ ಶ್ರೇಷ್ಠ ನಾಯಕ, ನಾನು ಸಿಎಸ್‌ಕೆ ಪರ ಆಡಬೇಕು ಎಂದ ಆರ್‌ಸಿಬಿಯ ಸ್ಟಾರ್ ಆಟಗಾರ!ಧೋನಿಯೇ ಐಪಿಎಲ್‌ನ ಶ್ರೇಷ್ಠ ನಾಯಕ, ನಾನು ಸಿಎಸ್‌ಕೆ ಪರ ಆಡಬೇಕು ಎಂದ ಆರ್‌ಸಿಬಿಯ ಸ್ಟಾರ್ ಆಟಗಾರ!

ಈ ಸಂದರ್ಭದಲ್ಲಿ ಬ್ರೇಟ್ ಲೀ ತಾನು ಆಸ್ಟ್ರೇಲಿಯಾದಲ್ಲಿ ಬಿಗ್‌ಬ್ಯಾಶ್ ಲೀಗ್ ಹಾಗೂ ಆಶಸ್ ಟೆಸ್ಟ್ ಸರಣಿಯ ಕಾರಣದಿಂದಾಗಿ ಇತ್ತೀಚೆಗೆ ಭಾರತೀಯ ಕ್ರಿಕೆಟ್‌ಅನ್ನು ಹೆಚ್ಚಾಗಿ ಅನುಸರಿಸಿಲ್ಲ. ಹೀಗಾಗಿ ಅಲ್ಲಿನ ಬೆಳವಣಿಗೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇಲ್ಲ. ಆ ಕಾರಣದಿಂದಾಗಿ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಕ್ಕಿಳಿದ ನಿರ್ಧಾರದ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ ಎಂದುದ್ದಾರೆ. ಆದರೆ ವಿರಾಟ್ ಕೊಹ್ಲಿ ತೊರೆದಿರುವ ನಾಯಕತ್ವದ ಹುದ್ದೆಯನ್ನು ತುಂಬಲು ಭಾರತೀಯ ತಂಡದಲ್ಲಿ 4-5 ಆಟಗಾರರು ಸಮರ್ಥ ಅಭ್ಯರ್ಥಿಗಳು ಇದ್ದಾರೆ ಎಂದು ಬ್ರೇಟ್ ಲೀ ಹೇಳಿದ್ದಾರೆ.

"ನಾಯಕತ್ವದಿಂದ ಕೆಳಕ್ಕಿಳಿಯುವುದು ಸಂಪೂರ್ಣವಾಗಿ ವಿರಾಟ್ ಕೊಹ್ಲಿಗೆ ಬಿಟ್ಟಂತಹ ವಿಚಾರ. ಅದು ಅವರದ್ದೇ ನಿರ್ಧಾರ. ಆದರೆ ನಾನು ಬಿಗ್‌ಬ್ಯಾಶ್ ಲೀಗ್ ಹಾಗೂ ಆಶಸ್ ಸರಣಿಯಲ್ಲಿ ಭಾಗಿಯಾಗಿದ್ದ ಕಾರಣಈ ಬಗ್ಗೆ ಹೆಚ್ಚಾಗಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಆದರೆ ಈ ಕ್ಷಣದಲ್ಲಿ ಭಾರತ ತಂಡವನ್ನು ಮುನ್ನಡೆಸಬಲ್ಲ ನಾಲ್ಕರಿಂದ ಐವರು ಆಟಗಾರರು ಇದ್ದಾರೆ. ಆದರೆ ಯಾರು ಮುನ್ನಡೆಸಲಿದ್ದಾರೆ ಎಂಬುದನ್ನು ಸಮಯವೇ ತಿಳಿಸಲಿದೆ" ಎಂದು ಬ್ರೆಟ್ ಲೀ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಭಾರತ vs ವೆಸ್ಟ್ ಇಂಡೀಸ್ ಏಕದಿನ: ತಂಡದಿಂದ ಹೊರಬಿದ್ದ ಕೆಎಲ್ ರಾಹುಲ್; ಕಾರಣವೇನು?ಭಾರತ vs ವೆಸ್ಟ್ ಇಂಡೀಸ್ ಏಕದಿನ: ತಂಡದಿಂದ ಹೊರಬಿದ್ದ ಕೆಎಲ್ ರಾಹುಲ್; ಕಾರಣವೇನು?

ಬ್ರೆಟ್ ಲೀ ಕ್ರಿಕೆಟ್ ಕಂಡ ವೇಗದ ಬೌಲರ್‌ಗಳಲ್ಲಿ ಒಬ್ಬರು. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿಯೂ ಲೀ ಅದ್ಭುತ ದಾಖಲೆಯನ್ನು ಹೊಂದಿದ್ದರು. ಅವರು ಆಸ್ಟ್ರೇಲಿಯನ್ ತಂಡದ ಪರವಾಗಿ 76 ಟೆಸ್ಟ್‌ಗಳಲ್ಲಿ ಭಾಗಿಯಾಗಿದ್ದು 310 ವಿಕೆಟ್‌ಗಳನ್ನು ಪಡೆದಿದ್ದಾರೆ. 221 ಏಕದಿನ ಪಂದ್ಯಗಳಲ್ಲಿ ಪ್ರತಿನಿಧಿಸಿರುವ ಅವರು 380 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದಿಂದ ವಾಪಾಸಾಗಿದ್ದು ಮುಂದೆ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಗೆ ಸಜ್ಜಾಗುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಅದಾದ ಬಳಿಕ ಶ್ರೀಲಂಕಾ ತಂಡ ಭಾರತ ಪ್ರವಾಸವನ್ನು ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೆಸ್ಟ್ ಸರಣಿ ನಡೆಯಲಿರುವ ಕಾರಣ ಈ ಸರಣಿಗೂ ಮುನ್ನ ಭಾರತ ಟೆಸ್ಟ್ ನಾಯಕನನ್ನು ಘೋಷಿಸಬೇಕಿದೆ.

Story first published: Friday, January 28, 2022, 10:27 [IST]
Other articles published on Jan 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X