Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC: ಐಸಿಸಿ 'ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿಗೆ ನಾಮನಿರ್ದೇಶನ; ಬುಮ್ರಾಗೆ ಪೈಪೋಟಿ ಯಾರು?

ಭಾರತ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಈ ಮೂಲಕ ಎಲ್ಲರ ಹೃದಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಈಗ ಬುಮ್ರಾ ತಮ್ಮ ಕಠಿಣ ಪರಿಶ್ರಮದ ಫಲವಾಗಿ ಐಸಿಸಿಯ ಮತ್ತೊಂದು ಪ್ರಶಸ್ತಿ ಗೆಲ್ಲುವು ನಿರೀಕ್ಷೆಯಲ್ಲಿದ್ದಾರೆ. ಬುಮ್ರಾ ಐಸಿಸಿ 'ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಈ ಪಟ್ಟಿಯಲ್ಲಿ ಬುಮ್ರಾ ಸೇರಿದಂತೆ ಮೂವರು ಆಟಗಾರರು ಇದ್ದಾರೆ.

ಜಸ್ಪ್ರೀತ್ ಬುಮ್ರಾ ಡಿಸೆಂಬರ್‌ನಲ್ಲಿ ಮೂರು ಟೆಸ್ಟ್‌ ಪಂದ್ಯಗಳಲ್ಲಿ 14.22 ಸರಾಸರಿಯಲ್ಲಿ 22 ವಿಕೆಟ್‌ಗಳನ್ನು ಪಡೆದಿದ್ದರು. ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದು ಟೆಸ್ಟ್‌ಗಳಲ್ಲಿ ಒಟ್ಟು 32 ವಿಕೆಟ್‌ಗಳನ್ನು ಕಬಳಿಸಿದ್ದರು. ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಆತಿಥೇಯ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ನು ಬಿಗಿತದ ಕಾರಣ ಬುಮ್ರಾ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಬ್ರಿಸ್ಬೇನ್ ಮತ್ತು ಮೆಲ್ಬೋರ್ನ್‌ನಲ್ಲಿ ಬುಮ್ರಾ ತಲಾ 9 ವಿಕೆಟ್‌ಗಳನ್ನು ಉರುಳಿಸಿದ್ದರು. ಈ ಕಾರಣದಿಂದಾಗಿ ಆಸ್ಟ್ರೇಲಿಯಾ ತಂಡಕ್ಕೆ ಕಠಿಣ ಸವಾಲು ನೀಡುವಲ್ಲಿ ಭಾರತ ಯಶಸ್ವಿಯಾಗಿತ್ತು.

Who will compete with Jasprit Bumrah nominated for ICC Player of the Month award

ಬುಮ್ರಾಗೆ ಪೈಪೋಟಿ

ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯ ರೇಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಮತ್ತು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇನ್ ಪ್ಯಾಟರ್ಸನ್ ಇದ್ದಾರೆ. ಈ ಮೂಲಕ ಪ್ಯಾಟ್ ಕಮಿನ್ಸ್ ಮತ್ತು ಡೇನ್ ಪ್ಯಾಟರ್ಸನ್ ಅವರು ಜಸ್ಪ್ರೀತ್ ಬುಮ್ರಾಗೆ ಪೈಪೋಟಿ ನೀಡುತ್ತಿದ್ದಾರೆ.

ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧದ ಸರಣಿಯನ್ನು 3-1 ಅಂತರದಲ್ಲಿ ಗೆದ್ದುಕೊಂಡಿತ್ತು. ವೇಗದ ಬೌಲರ್ ಕಮ್ಮಿನ್ಸ್ ಡಿಸೆಂಬರ್‌ನಲ್ಲಿ ಭಾರತ ವಿರುದ್ಧದ ಮೂರು ಟೆಸ್ಟ್‌ಗಳಲ್ಲಿ 17.64 ಸರಾಸರಿಯಲ್ಲಿ 17 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಮ್ಮಿನ್ಸ್ ಅಡಿಲೇಡ್‌ನಲ್ಲಿ 57 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಿಂಗಳ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ ಮಾತ್ರವಲ್ಲದೆ, ತಮ್ಮ ತಂಡಕ್ಕೆ ಪ್ರಮುಖ ಸಂದರ್ಭಗಳಲ್ಲಿ ಬ್ಯಾಟಿಂಗ್‌ನಲ್ಲಿಯೂ ಕೊಡುಗೆ ನೀಡಿದ್ದಾರೆ. ಅವರು ಮೆಲ್ಬೋರ್ನ್‌ ಟೆಸ್ಟ್ ಪಂದ್ಯದಲ್ಲಿ 49 ಮತ್ತು 41 ರನ್‌ಗಳ ಇನ್ನಿಂಗ್ಸ್‌ಗಳನ್ನೂ ಆಡಿ ತಂಡಕ್ಕೆ ನೆರವಾಗಿದ್ದರು.

ಡೇನ್ ಪ್ಯಾಟರ್ಸನ್ ಕೂಡ ದಕ್ಷಿಣ ಆಫ್ರಿಕಾ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಶ್ರೀಲಂಕಾ ಮತ್ತು ಪಾಕಿಸ್ತಾನದ ವಿರುದ್ಧ ಅವರು ಮಿಂಚಿನ ಬೌಲಿಂಗ್ ದಾಳಿ ಮಾಡುವ ಮೂಲಕ ತಮ್ಮ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಎರಡು ಟೆಸ್ಟ್‌ಗಳಲ್ಲಿ 16.92 ಸರಾಸರಿಯಲ್ಲಿ 13 ವಿಕೆಟ್‌ಗಳನ್ನು ಪಡೆದಿದ್ದಾರೆ. ದಕ್ಷಿಣ ಆಫ್ರಿಕಾವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (ಡಬ್ಲ್ಯೂಟಿಸಿ)ನ ಫೈನಲ್‌ಗೆ ಹೋಗುವಲ್ಲಿ ಡೇನ್ ಪ್ಯಾಟರ್ಸನ್ ಪಾತ್ರ ಮರೆಯುವಂತಿಲ್ಲ. ಇದೀಗ ಡಬ್ಲ್ಯೂಟಿಸಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

Story first published: Wednesday, January 8, 2025, 12:00 [IST]
Other articles published on Jan 8, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+