IND vs BAN T20 series: ಭಾರತಕ್ಕೆ ಐಪಿಎಲ್ ಸ್ಟಾರ್ ಇನ್ನಿಂಗ್ಸ್ ತೆರೆಯುತ್ತಾರಾ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿಗೆ ಕೇವಲ ಏಳು ದಿನಗಳು ಮಾತ್ರ ಬಾಕಿ ಉಳಿದಿವೆ. ಟಿ20 ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 6 ರಂದು ಗ್ವಾಲಿಯರ್‌ನಲ್ಲಿ ಸಂಜೆ 7:00 ಗಂಟೆಗೆ ಆರಂಭವಾಗಲಿದೆ.
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಅಳೆದು ತೂಗಿ ಭಾರತ ತಂಡದಲ್ಲಿ ಹಲವು ಸ್ಟಾರ್ ಆಟಗಾರರಿಗೆ ಬಿಸಿಸಿಐ ಅವಕಾಶ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಮ್ ಇಂಡಿಯಾದ ಆಡುವ ಹನ್ನೊಂದರ ಆಯ್ಕೆ ಸುಲಭವಲ್ಲ. ಜೊತೆಗೆ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸುವ ಬ್ಯಾಟರ್‌ಗಳು ಯಾರು ಎಂಬುದು ಕುತೂಹಲ ಮೂಡಿಸಿದೆ.

ಐಪಿಎಲ್ ಸ್ಟಾರ್ ಇನ್ನಿಂಗ್ಸ್ ತೆರೆಯುತ್ತಾರಾ?
2024ರ ಜಿಂಬಾಬ್ವೆ ಪ್ರವಾಸದ ಮೂಲಕ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ ಚೊಚ್ಚಲ ಟಿ20 ಪಂದ್ಯವನ್ನಾಡಿದರು. ಇದೀಗ ಬಾಂಗ್ಲಾದೇಶ ವಿರುದ್ಧ ತವರಿನ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರಿಗೆ ಕೆಲಸ ನಿರ್ವಹಣೆ ಕಡಿಮೆ ಮಾಡಲು ಈ ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇಂತಹ ಸಂಧರ್ಭದಲ್ಲಿ ಅಭಿಷೇಕ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಭಾರತಕ್ಕೆ ಇನ್ನಿಂಗ್ಸ್ ತೆರೆಯಬಹುದು.
ಅಭಿಷೇಕ್ ಶರ್ಮಾ ಅವರೊಂದಿಗೆ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಆರಂಭಿಕರಾಗಬಹುದು. ಅಭಿಷೇಕ್ ಶರ್ಮಾ ಕ್ಷಣ ಮಾತ್ರದಲ್ಲಿ ಪಂದ್ಯವನ್ನು ಬದಲಾಯಿಸುವ ಸಾಮರ್ಥ್ಯವಿರುವ ಬ್ಯಾಟರ್. ಅವರು ಎಷ್ಟು ಅಪಾಯಕಾರಿ ಬ್ಯಾಟರ್ ಎಂಬುದನ್ನು ಐಪಿಎಲ್ 2024ರಲ್ಲಿ ಸಾಬೀತುಪಡಿಸಿದ್ದಾರೆ. ಅಭಿಷೇಕ್ ಶರ್ಮಾ ಅತ್ಯಂತ ವೇಗವಾಗಿ ರನ್ ಗಳಿಸುವ ಕೌಶಲ್ಯವನ್ನು ಹೊಂದಿದ್ದಾರೆ.
ಪವರ್ ಪ್ಲೇನಲ್ಲಿ ಅಭಿಷೇಕ್ ಶರ್ಮಾ ಅವರಿಗೆ ಬೌಲಿಂಗ್ ಮಾಡುವುದು ಬಹಳ ಕಷ್ಟ. ಪವರ್ ಪ್ಲೇನಲ್ಲಿ ಅವರು ರನ್ ಹೊಳೆಯನ್ನು ಹರಿಸುತ್ತಾರೆ. ಐಪಿಎಲ್‌ನಲ್ಲಿ ವಿಶ್ವದ ಟಾಪ್ ಬೌಲರ್‌ಗಳಿಗೆ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಕ್ಲಾಸ್ ತೆಗೆದುಕೊಂಡಿದ್ದಾರೆ. ಈಗಾಗಲೇ ಜಿಂಬಾಬ್ವೆ ಪ್ರವಾಸದಲ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ ಬಾರಿಸಿ ಮಿಂಚಿದ್ದಾರೆ. ಈಗ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಶತಕ ಸಿಡಿಸಬಲ್ಲರು.
ಟಿ20 ಕ್ರಿಕೆಟ್‌ನಲ್ಲಿ ಅದ್ಭುತ
ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ ಇದುವರೆಗೆ 5 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
31.0 ಸರಾಸರಿ ಮತ್ತು 174.65 ಸ್ಟ್ರೈಕ್ ರೇಟ್‌ನಲ್ಲಿ 9 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಒಳಗೊಂಡಂತೆ 124 ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ 1 ಶತಕವನ್ನೂ ಸಿಡಿಸಿದ್ದಾರೆ. ಇದಲ್ಲದೆ, ಐಪಿಎಲ್‌ನಲ್ಲಿಯೂ ಮಿಂಚಿರುವ ಅವರು ಹಲವು ದಾಖಲೆಗಳನ್ನು ಮಾಡಿದ್ದಾರೆ. 63 ಐಪಿಎಲ್ ಪಂದ್ಯಗಳಲ್ಲಿ 155.13 ಸ್ಟ್ರೈಕ್ ರೇಟ್‌ನಲ್ಲಿ 128 ಬೌಂಡರಿ ಮತ್ತು 73 ಸಿಕ್ಸರ್‌ಗಳನ್ನು ಒಳಗೊಂಡಂತೆ ಒಟ್ಟು 1376 ರನ್ ಕಲೆ ಹಾಕಿದ್ದಾರೆ. ಐಪಿಎಲ್‌ನಲ್ಲಿ 7 ಅರ್ಧ ಶತಕ ಸಿಡಿಸಿದ್ದು, ಅವರ ಅತ್ಯುತ್ತಮ ಸ್ಕೋರ್ 75 ರನ್.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಆರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications