ಟೀಮ್ ಇಂಡಿಯಾ ನವೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯ ಕೆಲವು ಪಂದ್ಯಗಳಿಂದ ಭಾರತದ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆಯಿದೆ. ಹೀಗಿರುವಾಗಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಬ್ಯಾಟಿಂಗ್ ಮಾಡದೇ ಇದ್ದರೆ ಅವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ.
ಆಸ್ಟ್ರೇಲಿಯಾ ಪ್ರವಾಸದ ಭಾರತ ತಂಡದಲ್ಲಿ ಸ್ಟಾರ್ ಬ್ಯಾಟರ್ ಅಭಿಮನ್ಯು ಈಶ್ವರನ್ ಮೂರನೇ ಆರಂಭಿಕ ಆಟಗಾರನಾಗಿ ಸೇರ್ಪಡೆಗೊಂಡಿದ್ದಾರೆ. ಇದರೊಂದಿಗೆ ಕೆಎಲ್ ರಾಹುಲ್ ಕೂಡ ತಂಡದಲ್ಲಿದ್ದು, ರಾಹುಲ್ ಈ ಹಿಂದೆ ಟೀಮ್ ಇಂಡಿಯಾ ಪರ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಓಪನ್ ಮಾಡಿದ್ದರು. ಈಗ ಈ ಇಬ್ಬರಲ್ಲಿ ಯಾರು ಇನ್ನಿಂಗ್ಸ್ ಆರಂಭಿಸುತ್ತಾರೆ? ಎಂಬ ಪ್ರಶ್ನೆ ವರದಿಗಳು ಉತ್ತರ ನೀಡಿವೆ.

ವರದಿಯ ಪ್ರಕಾರ, ಗುರುವಾರ (ಇಂದು) ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಎ ವಿರುದ್ಧ ಭಾರತ ಎ ತಂಡದ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಅಭಿಮನ್ಯು ಈಶ್ವರನ್ ಅವರೊಂದಿಗೆ ಕೆಎಲ್ ರಾಹುಲ್ ಆರಂಭಿಕರಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ರಾಹುಲ್ ಮತ್ತು ಈಶ್ವರನ್ ನಡುವೆ ಆರಂಭಿಕ ಸ್ಥಾನಕ್ಕೆ ಪೈಪೋಟಿ ಏರ್ಪಡಲಿದೆ. ಈ ಇಬ್ಬರ ನಡುವೆ ಉತ್ತಮ ಪ್ರದರ್ಶನ ನೀಡುವ ಆಟಗಾರನನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೆ ಆಡುವ ಅವಕಾಶವನ್ನು ಪಡೆಯಲಿದ್ದಾರೆ.
ಕೆಎಲ್ ರಾಹುಲ್ ಅವರು ಮೊದಲು ರೋಹಿತ್ ಶರ್ಮಾ ಜೊತೆ ಭಾರತಕ್ಕೆ ಇನ್ನಿಂಗ್ಸ್ ತೆರೆದಿದ್ದಾರೆ. ಇದೀಗ ಮತ್ತೊಮ್ಮೆ ಯಶಸ್ವಿ ಜೈಸ್ವಾಲ್ ಜೊತೆ ಆರಂಭಿಕನಾಗುವ ಮೂಲಕ ಇನ್ನಿಂಗ್ಸ್ ತೆರೆಯುವ ಅವಕಾಶ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿ ಮುಗಿದ ನಂತರ, ಬಿಸಿಸಿಐ ಭಾರತ ಎ ಪರ ಆಡಲು ಕೆಎಲ್ ರಾಹುಲ್ ಮತ್ತು ಧ್ರುವ್ ಜುರೆಲ್ ಅವರನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಿದೆ. ಅಲ್ಲಿ ಅವರು ಆಸ್ಟ್ರೇಲಿಯಾ ಎ ಜೊತೆ ಆಡುವ ಮೂಲಕ ತಮ್ಮ ಫಾರ್ಮ್ ಕಂಡುಕೊಳ್ಳಬೇಕಾಗಿದೆ. ಅಭಿಮನ್ಯು ಕೂಡ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 100 ದೇಶೀಯ ಪಂದ್ಯಗಳಲ್ಲಿ 27 ಶತಕಗಳನ್ನು ಬಾರಿಸಿದ್ದಾರೆ.
ಎರಡನೇ ಪ್ರಥಮ ದರ್ಜೆ ಪಂದ್ಯಕ್ಕೆ ಭಾರತ ಎ ತಂಡ: ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ನಿತೀಶ್ ಕುಮಾರ್ ರೆಡ್ಡಿ, ದೇವದತ್ ಪಡಿಕ್ಕಲ್, ರಿಕಿ ಭುಯಿ, ಬಾಬಾ ಇಂದರ್‌ಜಿತ್, ಇಶಾನ್ ಕಿಶನ್ (ವಿಕೆಟ್ ಕೀಪರ್ ), ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ನವದೀಪ್ ಸೈನಿ, ಮಾನವ್ ಸುತಾರ್, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).