WTC Final 2025: ಭಾರತ-ಆಸ್ಟ್ರೇಲಿಯಾ ಸಮ ಅಂಕಗಳನ್ನು ಪಡೆದರೆ ಫೈನಲ್ ಆಡೋದು ಯಾರು?
ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲು ಭಾರತ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಈಗ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ತಲುಪುವ ಹಾದಿ ಕಷ್ಟಕರವಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಅಂತರದಲ್ಲಿ ಹಿನ್ನಡೆ ಸಾಧಿಸಿದ್ದು, ಕೊನೆಯ ಪಂದ್ಯ ಸಿಡ್ನಿಯಲ್ಲಿ ನಡೆಯಲಿದೆ. ಸಿಡ್ನಿ ಟೆಸ್ಟ್ ಪಂದ್ಯ ಜನವರಿ 3 ರಂದು ಆರಂಭವಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾದ ಅಭಿಮಾನಿಗಳು ಡಬ್ಲ್ಯೂಟಿಸಿ ಫೈನಲ್‌ನ ಲೆಕ್ಕಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಆಸ್ಟ್ರೇಲಿಯಾಕ್ಕೆ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಗೆಲುವು ಡಬ್ಲ್ಯೂಟಿಸಿ ಫೈನಲ್‌ಗೆ ಹತ್ತಿರವಾಗಿದೆ. ಆಸೀಸ್ 2023ರಲ್ಲಿ ಡಬ್ಲ್ಯೂಟಿಸಿ ಫೈನಲ್ ಆಡಿತ್ತು. ಓವಲ್‌ನಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈಗ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ಗೆದ್ದರೆ ಇತಿಹಾಸ ಸೃಷ್ಟಿಸಲಿದೆ. 1978ರಿಂದ ಸಿಡ್ನಿಯಲ್ಲಿ ಭಾರತ ಗೆದ್ದಿಲ್ಲ. ಇದಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಅವರ ಆಸೆಯೂ ಜೀವಂತವಾಗಲಿದೆ. ಮುಂದಿನ ವರ್ಷ ಜೂನ್ 11 ರಿಂದ 15 ರವರೆಗೆ ಲಾರ್ಡ್ಸ್‌ನಲ್ಲಿ ಡಬ್ಲ್ಯೂಟಿಸಿ ಫೈನಲ್ ಪಂದ್ಯ ನಡೆಯಲಿದೆ.

ಡಬ್ಲ್ಯೂಟಿಸಿ ಅಂಕಪಟ್ಟಿಯಲ್ಲಿ ಭಾರತವು 55.89 ಅಂಕಗಳೊಂದಿಗೆ (ಪಿಸಿಟಿ) ಮೂರನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದೆ. 2 ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಫೈನಲ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. 58.89 ಪಿಸಿಟಿಯೊಂದಿಗೆ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ನಾಲ್ಕನೇ ಸ್ಥಾನದಲ್ಲಿದ್ದು, ಶ್ರೀಲಂಕಾ ಐದನೇ ಸ್ಥಾನದಲ್ಲಿದೆ.
ಭಾರತದ ಲೆಕ್ಕಚಾರ
ಡಬ್ಲ್ಯೂಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ತನ್ನ ಕೊನೆಯ ಪಂದ್ಯವನ್ನು ಗೆಲ್ಲಬೇಕಾಗಿದೆ. ಇದರ ಹೊರತಾಗಿ ಶ್ರೀಲಂಕಾದಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಸೋಲಬೇಕು. ಒಂದು ವೇಳೆ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡ ಸೋತರೆ, ಶ್ರೀಲಂಕಾ ತಂಡ ಆಸೀಸ್ ಪಡೆಯನ್ನು 2-0 ಅಥವಾ 1-0 ಅಂತರದಲ್ಲಿ ಸೋಲಿಸಿದರೆ, ಭಾರತ ಅಂಕಪಟ್ಟಿಯಲ್ಲಿ ಮೇಲಿರುತ್ತದೆ. ಈ ಈ ಮೂಲಕ ಮುಂದಿನ ವರ್ಷ ಲಾರ್ಡ್ಸ್‌ನಲ್ಲಿ ನಡೆಯಲಿರುವ ಡಬ್ಲ್ಯೂಟಿಸಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.
ಸಮ ಅಂಕಗಳನ್ನು ಹೊಂದಿದ್ದರೆ?
ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ಒಂದೇ ಅಂಕಗಳೊಂದಿಗೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಸಿಡ್ನಿ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದರೆ, ಜನವರಿ-ಫೆಬ್ರವರಿಯಲ್ಲಿ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡೆಯಲಿರುವ ಟೆಸ್ಟ್ ಸರಣಿ 0-0 ಅಂತ್ಯಗೊಂಡರೆ ಇದು ಸಂಭವಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 126-126 ಅಂಕಗನ್ನು ಸಮಾನವಾಗಿ ಹಂಚಿಕೊಳ್ಳಲಿವೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಅಂಕಗಳೊಂದಿಗೆ ಶೇಕಡಾವಾರು (ಪಿಸಿಟಿ) 55.26 ನೊಂದಿಗೆ ಮುಕ್ತಾಯಗೊಂಡರೆ, ಹೆಚ್ಚು ಸರಣಿ ಗೆಲುವುಗಳನ್ನು ಹೊಂದಿರುವ ತಂಡವು ಫೈನಲ್‌ಗೆ ತಲುಪಲಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 2023-25 ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ತಲಾ ಮೂರು ಸರಣಿ ಗೆಲುವುಗಳೊಂದಿಗೆ ಕೊನೆಗೊಳಿಸಲಿವೆ. ಆಗ ವಿದೇಶಿ ನೆಲದಲ್ಲಿ ಹೆಚ್ಚು ಅಂಕ ಪಡೆಯುವ ತಂಡ ಫೈನಲ್‌ಗೆ ಮುನ್ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications