Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025: ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಔಟ್; ಸಿಎಸ್‌ಕೆ ವಿರುದ್ಧ ನಾಯಕ ಯಾರು?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಸೀಸನ್ ಆರಂಭವಾಗುವ ಮೊದಲೇ, 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (ಎಂಐ) ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಮಾರ್ಚ್ 22 ರಂದು ನಡೆಯಲಿರುವ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಖಾಮುಖಿಯಾಗಲಿವೆ. ಮರುದಿನ, ಅಂದರೆ ಮಾರ್ಚ್ 23 ರಂದು, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಮುಂಬೈ ಇಂಡಿಯನ್ಸ್ ನಡುವೆ ಚೆಪಾಕ್‌ನಲ್ಲಿ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ.

ಐಪಿಎಲ್ 2024ರ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್‌ಗಾಗಿ ಹಾರ್ದಿಕ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದ್ದು, 30 ಲಕ್ಷ ರೂ. ದಂಡ ಕೂಡ ವಿಧಿಸಲಾಗಿದೆ. ಇದರಿಂದಾಗಿ ಅವರು ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ.

Who will replace Hardik Pandya who is out of Mumbai Indians team s first match

ಹಾರ್ದಿಕ್ ಮಾರ್ಚ್ 29 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಎರಡನೇ ಪಂದ್ಯಕ್ಕೆ ಮುಂಬ ತಂಡ ಸೇರಿಕೊಳ್ಳಲಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಸ್‌ಕೆ ವಿರುದ್ಧ ಮೊದಲ ಪಂದ್ಯದಲ್ಲಿ ಮುಂಬೈ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಮುಂಬೈ ತಂಡವನ್ನು ಮುನ್ನಡೆಸಲು ಮೂವರ ನಡುವೆ ಪೈಪೋಟಿ ಏರ್ಪಟ್ಟಿದೆ.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಸಿಎಸ್‌ಕೆ ವಿರುದ್ಧ ಮುಂಬೈ ತಂಡವನ್ನು ಮುನ್ನಡೆಸಲು ಸ್ಪರ್ಧಿಗಳಾಗಿದ್ದಾರೆ. ಮುಂಬೈ ತಂಡ ರೋಹಿತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದೆ. ಐಪಿಎಲ್ 2024 ಕ್ಕೂ ಮೊದಲು ಹಾರ್ದಿಕ್ ಅವರನ್ನು ರೋಹಿತ್ ಸ್ಥಾನಕ್ಕೆ ನೇಮಿಸಲಾಯಿತು. ಸೂರ್ಯಕುಮಾರ್ ಬಗ್ಗೆ ಹೇಳುವುದಾದರೆ, ಅವರು ತಂಡವನ್ನು ಮುನ್ನಡೆಸಿದ್ದಾರೆ. ರೋಹಿತ್ ನಿವೃತ್ತಿ ನಂತರ ಭಾರತ ಟಿ20 ತಂಡದ ನಾಯಕನ್ನಾಗಿ ಸೂರ್ಯ ಯಶಸ್ವಿಯಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಇತ್ತೀಚಿನ ದಿನಗಳಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದರು. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಅವರು ಕೂಡ ಮುಂಬೈ ತಂಡದ ನಾಯಕರಾಗುವ ಸಾಧ್ಯತೆಯಿದೆ. ಈಗ ಈ ಮೂವರಲ್ಲಿ ಯಾರಿಗೆ ಮೊದಲ ಪಂದ್ಯದ ನಾಯಕತ್ವದ ಅವಕಾಶ ಸಿಗುತ್ತದೆ ಎಂಬುದು ಕ್ರಿಕೆಟ್ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

ಮುಂಬೈ ಇಂಡಿಯನ್ಸ್ ತಂಡ

ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್, ಕರ್ಣ್ ಶರ್ಮಾ,ರಯಾನ್ ರಿಕೆಲ್ಟನ್, ದೀಪಕ್ ಚಾಹರ್, ಮುಜೀಬ್ ಉರ್ ರೆಹಮಾನ್, ವಿಲ್ ಜಾಕ್ಸ್, ಅಶ್ವಿನಿ ಕುಮಾರ್, ಮಿಚೆಲ್ ಸ್ಯಾಂಟ್ನರ್, ರೀಸ್ ಟೋಪ್ಲಿ, ಕೃಷ್ಣನ್ ಶ್ರೀಜಿತ್, ರಾಜ್ ಅಂಗದ್ ಬಾವಾ, ಸತ್ಯನಾರಾಯಣ ರಾಜು, ಬೆವೊನ್ ಜಾಕೋಬ್ಸ್, ಅರ್ಜುನ್ ತೆಂಡೂಲ್ಕರ್, ಲಿಜಾದ್ ವಿಲಿಯಮ್ಸ್, ವಿಘ್ನೇಶ್ ಪುತ್ತೂರ್.

Story first published: Monday, February 17, 2025, 15:51 [IST]
Other articles published on Feb 17, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+