For Quick Alerts
ALLOW NOTIFICATIONS  
For Daily Alerts
 

KKR vs RCB: ಭುವನೇಶ್ವರ್ ಕುಮಾರ್ ಆರ್‌ಸಿಬಿ ಪರ ಆಡದಿರಲು ಕಾರಣವೇನು?

ಐಪಿಎಲ್ 2025ರ ಮೊದಲ ಪಂದ್ಯ ಈಡನ್ ಗಾರ್ಡನ್ಸ್‌ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ನಡುವೆ ನಡೆಯುತ್ತಿದೆ. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡುದ್ದು, ಕೆಕೆಆರ್ ನಿಗದಿತ 20 ಓವರ್‍‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 174 ರನ್ ಗಳಿಸಿದೆ. ಈ ಪಂದ್ಯಕ್ಕಾಗಿ ಆರ್‌ಸಿಬಿ ತನ್ನ ಪ್ಲೇಯಿಂಗ್-11 ರಲ್ಲಿ ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಜೊತೆಗೆ ಇಬ್ಬರು ಯುವ ಭಾರತೀಯ ವೇಗದ ಬೌಲರ್‌ಗಳನ್ನು ಸೇರಿಸಿಕೊಂಡಿದೆ. 24 ವರ್ಷದ ರಸಿಕ್ ದಾರ್ ಸಲಾಂ ಜೊತೆಗೆ 27 ವರ್ಷದ ಯಶ್ ದಯಾಳ್ ಅವರನ್ನು ಆಯ್ಕೆ ಮಾಡಲಾಗಿದೆ.

ಆರ್‍‌ಸಿಬಿ ಸ್ಪಿನ್ ಬೌಲಿಂಗ್‌ನಲ್ಲಿ ಸುಯಾಶ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಸ್ಥಾನ ಪಡೆದಿದ್ದಾರೆ. ಮೊದಲ ಪಂದ್ಯದ ಆರ್‍‌ಸಿಬಿ ಪ್ಲೇಯಿಂಗ್-11 ರಲ್ಲಿ ಅನುಭವಿ ಸ್ಟಾರ್ ವೇಗದ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡದೆ ಆರ್‌ಸಿಬಿ ಎಲ್ಲರನ್ನೂ ಅಚ್ಚರಿಗೊಳಿಸಿತು.

Why Bhuvneshwar Kumar will not play in KKR vs RCB IPL 2025 first match

ನವೆಂಬರ್ 2024 ರಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಆರ್‌ಸಿಬಿ 10.75 ಕೋಟಿ ರೂ.ಗೆ ಖರೀದಿಸಿತು. ಅವರು ಆರ್‍‌ಸಿಬಿ ತಂಡದ ಪ್ರಮುಖ ಟೀಮ್ ಇಂಡಿಯಾದ ವೇಗದ ಬೌಲರ್ ಎನಿಸಿಕೊಂಡಿದ್ದರು. ಇಷ್ಟೆಲ್ಲಾ ಇದ್ದರೂ, ಅವರನ್ನು ಪ್ಲೇಯಿಂಗ್-11 ರಲ್ಲಿ ಆಯ್ಕೆ ಮಾಡಿಲ್ಲ. ಈ ಬಗ್ಗೆ ಆರ್‌ಸಿಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ವರದಿಗಳ ಪ್ರಕಾರ, ಭುವನೇಶ್ವರ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರು ಪಂದ್ಯದಲ್ಲಿ ಆಡುತ್ತಿಲ್ಲ. ಆದರೆ, ಇದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ಕೆಕೆಆರ್ ವಿರುದ್ಧ ಸ್ಟಾರ್ ಭುವನೇಶ್ವರ್ ಕುಮಾರ್ ಅದ್ಭುತ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಐಪಿಎಲ್‌ ಪವರ್‌ಪ್ಲೇನಲ್ಲಿ ಭುವನೇಶ್ವರ್ ಕುಮಾರ್ ಅತಿ ಹೆಚ್ಚು ವಿಕೆಟ್‌ಗಳನ್ನು (72) ಪಡೆದಿದ್ದಾರೆ. ಕೆಆರ್ ವಿರುದ್ಧ ಅತಿ ಹೆಚ್ಚು ವಿಕೆಟ್‌ಗಳನ್ನು (32) ಪಡೆದ ಬೌಲರ್ ಕೂಡ ಆಗಿದ್ದಾರೆ. ಇದಲ್ಲದೆ, ಈಡನ್ ಗಾರ್ಡನ್ಸ್‌ನಲ್ಲಿ ಅವರು 10 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಪಡೆದ ಸಾಧನೆಯನ್ನು ಮಾಡಿದ್ದಾರೆ. ಆದರೂ ಭುವಿ ಅವರನ್ನು ಕೆಕೆಆರ್ ವಿರುದ್ಧ ಆಡದಿರುವುದು ಆರ್‍‌ಸಿಬಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಭುವನೇಶ್ವರ್ ಕುಮಾರ್ ವೃತ್ತಿಜೀವನ

ಭುವನೇಶ್ವರ್ ಇದುವರೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದಾರೆ. ಅವರು ಐಪಿಎಲ್ 2025ರಲ್ಲಿ ಆರ್‌ಸಿಬಿಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅವರು ಇಲ್ಲಿಯವರೆಗೆ 176 ಪಂದ್ಯಗಳನ್ನು ಆಡಿದ್ದು, 181 ವಿಕೆಟ್‌ಗಳನ್ನು ಪಡೆದಿದ್ದಾರೆ. ಭುವನೇಶ್ವರ್ ಒಂದೇ ಇನ್ನಿಂಗ್ಸ್‌ನಲ್ಲಿ ಎರಡು ಬಾರಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ 2011 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ ಮೊದಲ ಐಪಿಎಲ್ ಪಂದ್ಯವನ್ನು ಆಡಿದರು.

Story first published: Saturday, March 22, 2025, 22:23 [IST]
Other articles published on Mar 22, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+