IND vs SL 1st ODI: ಟೀಮ್ ಇಂಡಿಯಾ ಆಟಗಾರರು ಕಪ್ಪುಪಟ್ಟಿ ಧರಿಸಿದ್ದೇಕೆ?
ಆಗಸ್ಟ್ 2 ಶುಕ್ರವಾರ, ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಟಿ20 ವಿಶ್ವಕಪ್ ಗೆದ್ದ ನಂತರ ವಿಶ್ರಾಂತಿ ಪಡೆಯುತ್ತಿದ್ದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ಸರಣಿಗೆ ಕಮ್ ಬ್ಯಾಕ್ ಮಾಡಿದ್ದಾರೆ.
ಟಿ20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ನಾಯಕನಾಗಿ ಸೂರ್ಯಕುಮಾರ್ ಮುನ್ನೆಡೆಸಿದರೆ, ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಕಮಾಂಡ್ ವಹಿಸಿಕೊಂಡಿದ್ದಾರೆ. ಅಲ್ಲದೆ, ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ರೀತಿ ಟೀಮ್ ಇಂಡಿಯಾ ಆಟಗಾರರು ಕಪ್ಪು ತೋಳಿನ ಬ್ಯಾಂಡ್ ಧರಿಸಿ ಬಂದಿರುವುದು ಏಕೆ? ಎಂಬ ಪ್ರಶ್ನೆ ಎಲ್ಲ ಅಭಿಮಾನಿಗಳಲ್ಲಿ ಮೂಡಿದೆ. ಇದರ ಹಿಂದಿನ ಅಸಲಿ ಕಥೆ ಬಗ್ಗೆ ಇಲ್ಲಿದೆ ಮಾಹಿತಿ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇದಕ್ಕೂ ಮುನ್ನ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿತ್ತು. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಈ ಸರಣಿಯನ್ನು ಆಡಿತ್ತು.
ಕಪ್ಪು ಪಟ್ಟಿ ಧರಿಸಲು ಇದೇ ಕಾರಣ
ಬಹಳ ದಿನಗಳಿಂದ ಕ್ಯಾನ್ಸರ್ ನಂತಹ ಕಾಯಿಲೆಯಿಂದ ಬಳಲುತ್ತಿದ್ದ ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗು ಹೆಡ್ ಕೋಚ್ ಅಂಶುಮಾನ್ ಗಾಯಕ್ವಾಡ್ (ಜುಲೈ 31) ನಿಧನರಾಗಿದ್ದರು. ಹೀಗಾಗಿ ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ರೋಹಿತ್ ಶರ್ಮಾ ಪಡೆ ಕಪ್ಪು ಪಟ್ಟಿಯನ್ನು ಧರಿಸಿ ಈ ಪಂದ್ಯವನ್ನು ಆಡುತ್ತಿದೆ.
ಇತ್ತೀಚೆಗೆ ಭಾರತದ ಹಿರಿಯ ಕ್ರಿಕೆಟಿಗ ಅಂಶುಮಾನ್ ನಿಧನಕ್ಕೆ ಕ್ರಿಕೆಟ್ ಲೋಕದಲ್ಲಿ ಶೋಕ ಮಡುಗಟ್ಟಿತ್ತು. ಅಂಶುಮಾನ್ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯ ವಿರುದ್ಧ ದೀರ್ಘಕಾಲ ಹೋರಾಡುತ್ತಿದ್ದರು.
ಭಾರತದ ಪರ 1975 ರಿಂದ 1987 ರವರೆಗೆ ಅಂಶುಮಾನ್ 40 ಟೆಸ್ಟ್ ಪಂದ್ಯಗಳು ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ಅಂಶುಮಾನ್ 1997 ರಿಂದ ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿಯೂ ಕೆಲಸ ಮಾಡಿದ್ದರು. 1998 ರ ಟ್ರೈ ನೇಷನ್ ಟೂರ್ನಮೆಂಟ್ ಸೇರಿದಂತೆ ಅನೇಕ ದೊಡ್ಡ ವಿಜಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಉಭಯ ತಂಡಗಳ ಪ್ಲೇಯಿಂಗ್-11
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜೆನಿತ್ ಲಿಯಾನಗೆ, ವನಿಂದು ಹಸರಂಗ, ದುನಿತ್ ವೆಲಾಲಗೆ, ಅಕಿಲ ಧನಂಜಯ್, ಅಸಿತ ಫೆರ್ನಾಂಡೋ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications