Jasprit Bumrah: ಜಸ್ಪ್ರೀತ್ ಬುಮ್ರಾ ಉಪನಾಯಕನಾಗದಿರಲು ಕಾರಣವೇನು?
ಭಾರತ ಮತ್ತು ಬಾಂಗ್ಲಾದೇಶ ನಡುವೆ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 1 ರವರೆಗೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಆದರೆ, ಇದರಲ್ಲಿ ಯಾವುದೇ ಆಟಗಾರನನ್ನು ಉಪನಾಯಕನನ್ನಾಗಿ ಘೋಷನೆ ಮಾಡಿಲ್ಲ.
ಕಳೆದ ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಉಪನಾಯಕರಾಗಿದ್ದರು. ಆದರೆ ಈ ಬಾರಿ ಅವರನ್ನು ಏಕೆ ಉಪನಾಯಕರನ್ನಾಗಿ ಮಾಡಿಲ್ಲ? ಎಂಬ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬುಮ್ರಾ ಉಪನಾಯಕನಾಗದಿರಲು ಕಾರಣವೇನು?
ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬೌಲರ್ ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾದ ಉಪನಾಯಕನ ಪಾತ್ರವನ್ನು ನಿರ್ವಹಿಸಿದ್ದರು. ಆದರೆ, ಈಗ ಆ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಅವರು ವಿಫಲವಾಗಿದ್ದು, ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಬುಮ್ರಾ ಅವರನ್ನು ಉಪನಾಯಕನನ್ನಾಗಿ ಮಾಡದಿರುವುದು ಬಿಸಿಸಿಐ ಮತ್ತು ಟೀಮ್ ಮ್ಯಾನೇಜ್‌ಮೆಂಟ್ ಅವರನ್ನು ಭವಿಷ್ಯದ ನಾಯಕನಾಗಿ ನೋಡುತ್ತಿಲ್ಲ ಎಂಬುದನ್ನು ತೋರಿಸುತ್ತಿದೆ. ಇದು ಅವರ ಕೆಲಸದ ಹೊರೆಯನ್ನು ಕಡಿಮೆ ಮಾಡುವ ಮಾರ್ಗವೂ ಆಗಿರಬಹುದು ಎನ್ನಲಾಗುತ್ತಿದೆ.
ಗಾಯ ಅಡ್ಡಿ
ಭವಿಷ್ಯದಲ್ಲಿ ಬುಮ್ರಾ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ಮಾಡದಿರಲು ಮತ್ತೊಂದು ಪ್ರಮುಖ ಕಾರಣ ಅವರ ಗಾಯಗಳು. ನಾಯಕನು ತಂಡದಲ್ಲಿ ನಿರಂತರವಾಗಿ ಲಭ್ಯವಿರುವುದು ಮುಖ್ಯವಾಗಿದೆ. ಆದರೆ ಬುಮ್ರಾ ಅವರ ಗಾಯದ ಸಮಸ್ಯೆಯೂ ಇದಕ್ಕೆ ಅಡ್ಡಿಯಾಗಿರಬಹುದು.
ಗೌತಮ್ ಗಂಭೀರ್ ಮುಖ್ಯ ಕೋಚ್ ಆದ ನಂತರ ಭಾರತದ ಉಪನಾಯಕತ್ವದ ವಿಧಾನ ಬದಲಾಗಿದೆ ಎಂಬುದು ಗಮನಾರ್ಹ. ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕರನ್ನಾಗಿ ಮಾಡಲಾಗಿದ್ದು, ಶುಭಮನ್ ಗಿಲ್ ಅವರಿಗೆ ಏಕದಿನ ಮತ್ತು ಟಿ 20 ಎರಡರಲ್ಲೂ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ.
ಜಸ್ಪ್ರೀತ್ ಬುಮ್ರಾ ಈ ಹಿಂದೆ ಭಾರತವನ್ನು ನಾಯಕರಾಗಿದ್ದರು. 2022ರಲ್ಲಿ ಇಂಗ್ಲೆಂಡ್ ಮತ್ತು 2023ರಲ್ಲಿ ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications