Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mitchell Starc: ಚಾಂಪಿಯನ್ಸ್ ಟ್ರೋಫಿಯಿಂದ ಮಿಚೆಲ್ ಸ್ಟಾರ್ಕ್ ಹೊರಗುಳಿಯಲು ಕಾರಣವೇನು?

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಸ್ಥಿರ ಪ್ರದರ್ಶನ ನೀಡಿದ್ದರೂ, ತಂಡ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಆಸ್ಟ್ರೇಲಿಯಾ ಸೋಲಿಸಿ ಉತ್ತಮ ಆರಂಭ ಪಡೆಯಿತು. ಆದರೆ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಇದು ಆಸ್ಟ್ರೇಲಿಯಾ ತಂಡದ ಸೆಮಿಫೈನಲ್ ದಾರಿ ಅಡ್ಡಿಯಾಗಿದೆ.

ಆಸ್ಟ್ರೇಲಿಯಾ ತಂಡವು ಹಲವಾರು ಸ್ಟಾರ್ ಆಟಗಾರರಿಲ್ಲದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿದಿದೆ. ಆದರೂ ಕಾಂಗೂರು ಪಡೆ ಸ್ಥಿರ ಪ್ರದರ್ಶನ ನೀಡುತ್ತಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ವಿಭಾಗಗಳಲ್ಲಿ ಕಾಂಗೂರು ಪಡೆ ಬಲಿಷ್ಠವಾಗಿ ಕಾಣಿಸುತ್ತಿದೆ.

Why is Mitchell Starc out of the Champions Trophy

ಆಸ್ಟ್ರೇಲಿಯಾ ತಂಡ ಚಾಂಪಿಯನ್ ನಾಯಕ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಮಾರ್ಷ್‌ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಮಾರ್ಕಸ್ ಸ್ಟೊಯಿನಿಸ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟೂರ್ನಿಯಿಂದ ಹೊರಗುಳಿದಿರುವುದು ಏಕೆ ಎಂಬುದು ತಿಳಿದಿಲ್ಲ. ಇದೀಗ ಈ ಕುರಿತು ಬಿಗ್ ಅಪ್ಡೇಟ್ ಸಿಕ್ಕಿದೆ.

ಪಾಕಿಸ್ತಾನದಲ್ಲಿ ನಡೆಯುತ್ತಿರುವ 2025ರ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ತಮ್ಮ ನಿರ್ಧಾರಕ್ಕೆ ಪಾದದ ನೋವು ಪ್ರಮುಖ ಕಾರಣ ಎಂದು ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ಪ್ರವಾಸದ ಸಮಯದಲ್ಲಿ ಪಾದದ ನೋವಿನಿಂದ ಬಳಲುತ್ತಿದ್ದ ಸ್ಟಾರ್ಕ್ ತಮ್ಮ ನಿರ್ಧಾರದ ಹಿಂದೆ ಕೆಲವು ವೈಯಕ್ತಿಕ ಪರಿಗಣನೆಗಳು ಇವೆ ಎಂದು ಹೇಳಿದ್ದರು.

ಸಂದರ್ಶನವೊಂದರಲ್ಲಿ ಮಾತನಾಡಿರುವ ಮಿಚೆಲ್ ಸ್ಟಾರ್ಕ್, ' ಟೂರ್ನಿಯಿಂದ ಹೊರಗುಳಿಯಲು ಕೆಲವು ವಿಭಿನ್ನ ಕಾರಣಗಳಿವೆ. ಕೆಲವು ವೈಯಕ್ತಿಕ ಅಭಿಪ್ರಾಯಗಳಿವೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಸಮಯದಲ್ಲಿ ನನ್ನ ಪಾದದ ನೋವು ಸ್ವಲ್ಪ ಇತ್ತು. ಆದ್ದರಿಂದ ನಾನು ಅದನ್ನು ಸರಿಪಡಿಸಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್ ಹತ್ತಿರ ಬರುತ್ತಿದೆ. ಇದಾದ ನಂತರ ವೆಸ್ಟ್ ಇಂಡೀಸ್ ಪ್ರವಾಸ ಹಾಗು ಐಪಿಎಲ್ ಕೂಡ ಇದೆ. ಆದರೆ ನನ್ನ ಮನಸ್ಸಿನಲ್ಲಿ ಕೊನೆಯ ಟೆಸ್ಟ್ ಪಂದ್ಯ ಮಾತ್ರ ಇದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಸ್ವಲ್ಪ ಕ್ರಿಕೆಟ್ ಆಡುತ್ತೇನೆ. ನಂತರ ಡಬ್ಲ್ಯೂಟಿಸಿ ಫೈನಲ್‌ಗೆ ಸಿದ್ಧನಾಗುತ್ತೇನೆ ಎಂದಿದ್ದಾರೆ.

ಮುಂಬರುವ ಐಪಿಎಲ್ 2025ರಲ್ಲಿ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ. ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ಡಬ್ಲ್ಯೂಟಿಸಿ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯ ಸೇರಿದಂತೆ ಆಸ್ಟ್ರೇಲಿಯಾ ಮುಂದೆ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಇದಾದ ನಂತರ ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್‌ ಪ್ರವಾಸ ಕೈಗೊಳ್ಳಲಿದೆ.

ಚಾಂಪಿಯನ್ಸ್ ಟ್ರೋಫಿಯ ಆಸ್ಟ್ರೇಲಿಯಾ ತಂಡ

ಸ್ಟೀವ್ ಸ್ಮಿತ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆಡಮ್ ಜಂಪಾ.

Story first published: Thursday, February 27, 2025, 14:44 [IST]
Other articles published on Feb 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+