ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸತತ ಸೋಲಿಗೆ ಕಾರಣ ಏನು? ಪಾಕ್ ಕ್ರಿಕೆಟಿಗನ ಉತ್ತರ

Virat Kohli ತಮ್ಮ ನೂರನೇ ಪಂದ್ಯವನ್ನು Pakistan ವಿರುದ್ಧ ಆಡಲಿದ್ದಾರೆ | *Cricket | OneIndia Kannada

ವಿಶ್ವಕಪ್‌ನಂತಹ ಐಸಿಸಿ ಟೂರ್ನಿಗಳಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಕೆಟ್ಟ ಪ್ರದರ್ಶನಕ್ಕೆ ಪ್ರಮುಖ ಕಾರಣ ಏನು ಎಂಬುದನ್ನ ಪಾಕಿಸ್ತಾನ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶೊಯೆಬ್ ಮಕ್ಸೂದ್ ಹೇಳಿದ್ದಾರೆ.

ನಾಲ್ಕು ವರ್ಷಗಳಿಂದ ಕಾಯುತ್ತಿದ್ದ ಏಷ್ಯಾ ಕಪ್ 2022 ಟೂರ್ನಿ ಬಹುತೇಕ ಸನಿಹಗೊಂಡಿದೆ. ಈ ಮೆಗಾ ಟೂರ್ನಮೆಂಟ್ ಆಗಸ್ಟ್ 27 ರಿಂದ ಯುಎಇನಲ್ಲಿ ಆರಂಭವಾಗಲಿದೆ. ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್‌ ಟೂರ್ನಿಯನ್ನು ಲಂಕಾ ಆಯೋಜಿಸಲು ವಿಫಲಗೊಂಡ ಕಾರಣ ಮೆಗಾ ಟೂರ್ನಿಗೆ ಯುಎಇಗೆ ಶಿಫ್ಟ್‌ ಆಗಿದೆ.

ಟಿ20 ಕ್ರಿಕೆಟ್‌ನಲ್ಲಿ ಯಾರೂ ಮಾಡದ ದಾಖಲೆ ಮಾಡಿದ ಕಿರಾನ್ ಪೊಲಾರ್ಡ್: ಕ್ರಿಕೆಟ್ ಲೋಕಕ್ಕೆ ಅಚ್ಚರಿಟಿ20 ಕ್ರಿಕೆಟ್‌ನಲ್ಲಿ ಯಾರೂ ಮಾಡದ ದಾಖಲೆ ಮಾಡಿದ ಕಿರಾನ್ ಪೊಲಾರ್ಡ್: ಕ್ರಿಕೆಟ್ ಲೋಕಕ್ಕೆ ಅಚ್ಚರಿ

ಆಗಸ್ಟ್ 28 ರಂದು ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಅಖಾಡಕ್ಕಿಳಿಯುತ್ತಿದ್ದು, ಗ್ರೂಪ್ ಎನಲ್ಲಿ ಉಭಯ ತಂಡಗಳು ಕಾದಾಟ ನಡೆಸಲಿವೆ. ಭಾನುವಾರ ನಡೆಯಲಿರುವ ಈ ಪಂದ್ಯವನ್ನ ನೋಡಲು ಇಡೀ ಕ್ರಿಕೆಟ್ ಅಭಿಮಾನಿಗಳು ಕಾತುರಾಗಿದ್ದಾರೆ.

ಟಿ20 ವಿಶ್ವಕಪ್ ಇದೇ ವರ್ಷ ನಡೆಯುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನ ಒಟ್ಟಾರೆ ಎರಡೂ 3 ತಿಂಗಳ ಅವಧಿಯಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಬಹುದು.

ಮಂಬರುವ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಕನಿಷ್ಠ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗುತ್ತಿವೆ. ಜೊತೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಕನಿಷ್ಠ ಒಂದು ಸಾಂಪ್ರದಾಯಿಕ ರಾಷ್ಟಗಳು ಎದುರಾಗಲಿವೆ.

ಹೀಗಿರುವಾಗ ವಿಶ್ವಕಪ್‌ನಂತಹ ಮಹಾ ಸ್ಪರ್ಧೆಗಳಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಏಕೆ ಹೆಚ್ಚು ಸೋತಿದೆ ಎಂಬುದರ ಕುರಿತು ಪಾಕ್‌ ಮಧ್ಯಮ ಕ್ರಮಾಂಕದ ಬ್ಯಾಟರ್ ಶೋಯೆಬ್ ಮಕ್ಸೂದ್ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ವಿಷಯಕ್ಕೆ ಬಂದಾಗಲೆಲ್ಲಾ ತಂಡವು ಅತಿಯಾದ ಉತ್ಸುಕತೆಗೆ ಒಳಗಾಗುತ್ತದೆ, ಇದರಿಂದಾಗಿ ಭಾರತ ವಿರುದ್ಧದ ಪಂದ್ಯಗಳಲ್ಲಿ ಸಾಕಷ್ಟು ಸೋತಿದೆ ಎಂದು ಮಕ್ಸೂದ್‌ ಅವರು ಹೇಳಿದರು.

"ವಿಶ್ವಕಪ್ ಪಂದ್ಯಗಳಲ್ಲಿ ಭಾರತದ ವಿರುದ್ಧ ಹಸಿರು ಜೆರ್ಸಿ(ಪಾಕಿಸ್ತಾನ) ನಿರಂತರ ಸೋಲಿಗೆ ಪಾಕಿಸ್ತಾನ ತಂಡವು ಅತಿಯಾಗಿ ಉತ್ಸುಕರಾಗಿರುವುದೇ ಕಾರಣ" ಎಂದು 35 ವರ್ಷದ ಬ್ಯಾಟರ್ ಶೊಯೆಬ್ ಮಕ್ಸೂರ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಆದಾಗ್ಯೂ, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನವು ಭಾರತದ ವಿರುದ್ಧದ ಪಂದ್ಯಗಳನ್ನ ಸಹಜವಾಗಿ ಸ್ವೀಕರಿಸುತ್ತಿದೆ. ಹೀಗಾಗಿ ಉತ್ತಮ ಫಲಿತಾಂಶ ಹೊರಬರಲು ಸಾಧ್ಯವಾಗಿದೆ ಎಂದಿದ್ದಾರೆ.

ಆದ್ರೂ ಕೂಡ ಭಾರತದ ವಿರುದ್ಧ ಟಿ20 ವಿಶ್ವಕಪ್‌, 50 ಓವರ್‌ಗಳ ವಿಶ್ವಕಪ್‌ನಲ್ಲಿ ಭಾರತ 12-1 ಗೆಲುವಿನ ದಾಖಲೆಯನ್ನ ಹೊಂದಿದೆ. ಕೇವಲ ಏಕೈಕ ಗೆಲುವು ಕಳೆದ ಟಿ20 ವಿಶ್ವಕಪ್‌ನಲ್ಲಿ ಬಂದಿದ್ದು, ಭಾರತದ ವಿರುದ್ಧ 10 ವಿಕೆಟ್‌ಗಳ ಗೆಲುವು ದಾಖಲಿಸಿತು.

For Quick Alerts
ALLOW NOTIFICATIONS
For Daily Alerts
Story first published: Tuesday, August 9, 2022, 21:39 [IST]
Other articles published on Aug 9, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X