ರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾ

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತವನ್ನು ತಲುಪಿದ್ದು, ಟೂರ್ನಿಯ ಫೈನಲ್ ಪಂದ್ಯ ಮಾತ್ರ ಬಾಕಿ ಉಳಿದಿದೆ. ನಿನ್ನೆ ( ಅಕ್ಟೋಬರ್ 13) ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಜಯ ಗಳಿಸುವುದರ ಮೂಲಕ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದ್ದು ಅಕ್ಟೋಬರ್ 15ರ ಶುಕ್ರವಾರದಂದು ನಡೆಯಲಿರುವ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ.

ಆತನಿಗೆ ನಾಯಕತ್ವ ನೀಡಲಾಗದಿದ್ದರೆ ಆತನನ್ನು ತಂಡದಿಂದ ಬಿಟ್ಟುಬಿಡಿ; ಆರ್‌ಸಿಬಿಗೆ ಮಾಜಿ ಕ್ರಿಕೆಟಿಗನ ಸಲಹೆಆತನಿಗೆ ನಾಯಕತ್ವ ನೀಡಲಾಗದಿದ್ದರೆ ಆತನನ್ನು ತಂಡದಿಂದ ಬಿಟ್ಟುಬಿಡಿ; ಆರ್‌ಸಿಬಿಗೆ ಮಾಜಿ ಕ್ರಿಕೆಟಿಗನ ಸಲಹೆ

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಲಿಮಿನೇಟರ್ ಪಂದ್ಯದ ಹಂತದವರೆಗೂ ಬಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೋಲುವುದರ ಮೂಲಕ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಕೆಲ ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತು ಎಂದು ಹೇಳಬಹುದು. ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳಲ್ಲಿ ಜಯಗಳಿಸಿ, 5 ಪಂದ್ಯಗಳನ್ನು ಸೋಲುವುದರ ಮೂಲಕ 18 ಅಂಕಗಳನ್ನು ಪಡೆದುಕೊಂಡಿತು. ಅಷ್ಟೇ ಅಲ್ಲದೆ ಲೀಗ್ ಹಂತದಲ್ಲಿನ ತನ್ನ ಇನ್ನೂ ಕೆಲ ಪಂದ್ಯಗಳು ಬಾಕಿ ಇರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶವನ್ನು ಮಾಡಿತ್ತು. ಕಳೆದ ಕೆಲ ಆವೃತ್ತಿಗಳಲ್ಲಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಉಳಿದ ತಂಡಗಳ ಪಂದ್ಯಗಳ ಫಲಿತಾಂಶಗಳ ಮೇಲೆ ಅವಲಂಬಿತವಾಗುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ನೇರವಾಗಿ ಪ್ಲೇ ಆಫ್ ಪ್ರವೇಶಿಸುವ ಮೂಲಕ ಯಶಸ್ಸಿನ ಹಾದಿಗೆ ಮರಳಿತ್ತು.

'ಈತ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ'; ಐಪಿಎಲ್ ಕಳಪೆ ನಾಯಕನ ವಿರುದ್ಧ ವ್ಯಂಗ್ಯವಾಡಿದ ಸೆಹ್ವಾಗ್'ಈತ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ'; ಐಪಿಎಲ್ ಕಳಪೆ ನಾಯಕನ ವಿರುದ್ಧ ವ್ಯಂಗ್ಯವಾಡಿದ ಸೆಹ್ವಾಗ್

ಅದರೆ ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಹೊರಬಿದ್ದು ಈ ವರ್ಷವೂ ಸಹ ತನ್ನ ಟ್ರೋಫಿ ಕನಸನ್ನು ನನಸಾಗಿಸಿಕೊಳ್ಳುವಲ್ಲಿ ವಿಫಲವಾಗಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಿಂದ ಹೊರಬಿದ್ದ ನಂತರ ಮಾತನಾಡಿರುವ ಮಾಜಿ ಕ್ರಿಕೆಟಿಗ ಬ್ರಿಯಾನ್ ಲಾರಾ ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಯಾವ ಆಟಗಾರನನ್ನು ಉಳಿಸಿಕೊಳ್ಳಬಾರದು ಎಂಬುದನ್ನು ಈ ಕೆಳಕಂಡಂತೆ ತಿಳಿಸಿದ್ದಾರೆ.

ಈ 3 ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಟೈನ್ ಮಾಡಿಕೊಳ್ಳಬೇಕು

ಈ 3 ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಟೈನ್ ಮಾಡಿಕೊಳ್ಳಬೇಕು

ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಆಟಗಾರರಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ದೇವದತ್ ಪಡಿಕ್ಕಲ್ ಈ ಮೂವರು ಆಟಗಾರರನ್ನು ಉಳಿಸಿಕೊಳ್ಳಬೇಕು ಎಂದು ಬ್ರಿಯಾನ್ ಲಾರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಎಬಿ ಡಿವಿಲಿಯರ್ಸ್ ಉಳಿಸಿಕೊಳ್ಳುವ ಅಗತ್ಯವಿಲ್ಲ

ಎಬಿ ಡಿವಿಲಿಯರ್ಸ್ ಉಳಿಸಿಕೊಳ್ಳುವ ಅಗತ್ಯವಿಲ್ಲ

ಹೀಗೆ ಮೂವರು ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿಸಿಕೊಳ್ಳಬೇಕು ಎಂದಿರುವ ಬ್ರಿಯಾನ್ ಲಾರಾ ಎಬಿ ಡಿವಿಲಿಯರ್ಸ್ ಅವರನ್ನು ಉಳಿಸಿಕೊಳ್ಳಬೇಕಾದ ಅಗತ್ಯತೆ ಇಲ್ಲ ಎಂದಿದ್ದಾರೆ. 'ಎಬಿ ಡಿವಿಲಿಯರ್ಸ್ ರನ್ ಬಾರಿಸುತ್ತಿಲ್ಲ ಎಂದಮೇಲೆ ಅವರನ್ನು ಉಳಿಸಿಕೊಳ್ಳುವ ಅಗತ್ಯತೆ ಏನಿದೆ. ವರ್ಷದಲ್ಲಿ ಕೇವಲ 6 ವಾರಗಳು ಮಾತ್ರ ಕ್ರಿಕೆಟ್ ಆಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಉತ್ತಮ ರನ್ ಗಳಿಸಲು ಆಗುವುದಿಲ್ಲ. ಕ್ರಿಸ್ ಗೇಲ್ ಹಲವಾರು ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸಿದರೂ ಅವರಿಗೆ ಉತ್ತಮ ರನ್ ಗಳಿಸಲು ಆಗುತ್ತಿಲ್ಲ, ಇನ್ನು ವರ್ಷದಲ್ಲಿ ಕೇವಲ 6 ವಾರಗಳಲ್ಲಿ ಮಾತ್ರ ಕ್ರಿಕೆಟ್ ಆಡುವ ಎಬಿ ಡಿವಿಲಿಯರ್ಸ್ ಉತ್ತಮ ರನ್ ಗಳಿಸಲು ಹೇಗೆ ಸಾಧ್ಯ' ಎಂದು ಬ್ರಿಯಾನ್ ಲಾರಾ ಹೇಳಿಕೆ ನೀಡಿದ್ದಾರೆ.

KKR ತಂಡ ಕಡೆಗೆ 6 ಹೊಡೆದು ಗೆದ್ದು ಬೀಗಿದರು | Oneindia Kannada
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಮಂಕಾದ ಎಬಿಡಿ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಮಂಕಾದ ಎಬಿಡಿ

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಯುಎಇ ಚರಣದಲ್ಲಿ ಮಂಕಾಗಿರುವ ಎಬಿ ಡಿವಿಲಿಯರ್ಸ್ ತಮ್ಮ ಕೊನೆಯ 8 ಪಂದ್ಯಗಳಲ್ಲಿ ಕ್ರಮವಾಗಿ 26, 19*, 23, 4*, 11, 12 ಮತ್ತು 0 ರನ್ ಗಳಿಸಿದ್ದಾರೆ. ಹೀಗೆ ಕಳೆದ 8 ಪಂದ್ಯಗಳಲ್ಲಿ ಸತತವಾಗಿ ಎಬಿ ಡಿವಿಲಿಯರ್ಸ್ ಉತ್ತಮ ರನ್ ಗಳಿಸುವಲ್ಲಿ ವಿಫಲರಾಗಿದ್ದಾರೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 19 - October 26 2021, 07:30 PM
ಪಾಕಿಸ್ತಾನ
ನ್ಯೂಜಿಲೆಂಡ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, October 13, 2021, 23:14 [IST]
Other articles published on Oct 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X