Rohit Sharma: ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಏಕೆ ನಿವೃತ್ತಿ ನೀಡಬೇಕು?; ಇಲ್ಲಿವೆ ಕಾರಣಗಳು
ಭಾರತದ ಸ್ಟಾರ್ ಬ್ಯಾಟರ್ ಮತ್ತು ನಾಯಕ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದ ಕೊನೆಯ ಹಂತದಲ್ಲಿದ್ದಾರೆ. ಈಗಾಗಲೇ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈಗ ರೋಹಿತ್ ಶರ್ಮಾ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ನಾಯಕನಾಗಿ ಮಾತ್ರವಲ್ಲದೆ ಬ್ಯಾಟರ್ ಆಗಿಯೂ ದೀರ್ಘಕಾಲ ಉಳಿಯುವುದು ತುಂಬಾ ಕಷ್ಟ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (ಡಬ್ಲ್ಯೂಟಿಸಿ) ಭಾರತವನ್ನು ಫೈನಲ್‌ಗೆ ಕೊಂಡೊಯ್ಯುವುದು ರೋಹಿತ್ ಶರ್ಮಾಗೆ ಈ ವರ್ಷದ ದೊಡ್ಡ ಗುರಿಯಾಗಿದೆ. ಆದರೆ ಈ ಕನಸು ಈಗ ನನಸಾಗುವ ಹಾದಿ ಸುಲಭವಾಗಿಲ್ಲ. ಇದರೊಂದಿಗೆ ರೋಹಿತ್ ಶರ್ಮಾ ಅವರ ಫಾರ್ಮ್ ಕೂಡ ಹೇಳಿಕೊಳ್ಳುವಂತಿಲ್ಲ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇತ್ತೀಚೆಗೆ ತನ್ನದೇ ನೆಲದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಅಂತರದಿಂದ ಹೀನಾಯ ಸೋಲು ಕಂಡಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂತಹ ಸೋಲು ಅನುಭವಿಸಿದ್ದು ಇದೇ ಮೊದಲು. ರೋಹಿತ್ ಶರ್ಮಾ ಬ್ಯಾಟರ್ ಆಗಿಯೂ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ.

ಈಗ ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಾಂಗರೂ ಪಡೆ ವಿರುದ್ಧ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 4-0 ಅಂತರದಲ್ಲಿ ಗೆಲ್ಲುವುದು ತುಂಬಾ ಕಷ್ಟದ ಮಾತಾಗಿದೆ. ಭಾರತ ಡಬ್ಲ್ಯೂಟಿಸಿ ಫೈನಲ್ ತಲುವಲು ಸಾಧ್ಯವಾಗದೆ ಇದ್ದರೆ, ರೋಹಿತ್ ಶರ್ಮಾ ಅವರ ಭವಿಷ್ಯವೂ ನಿರ್ಧಾರವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ 37 ವರ್ಷ ವಯಸ್ಸಿನ ರೋಹಿತ್ ಶರ್ಮಾ ನಿವೃತ್ತಿ ಮಾತುಗಳು ಕೇಳಿಬರುತ್ತಿವೆ.
ಕಳಪೆ ಫಾರ್ಮ್ ಸಮಸ್ಯೆ
ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಆಡಿದ ಟೆಸ್ಟ್ ಸರಣಿಯ 6 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 2, 52, 0, 8, 18 ಮತ್ತು 11 ರನ್‌ಗಳನ್ನು ಗಳಿಸಿದ್ದರು. ಇದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿಯೂ ಹಿಟ್‌ಮ್ಯಾನ್ ರನ್ ಗಳಿಸಲ ಪರದಾಡಿದ್ದರು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ 4 ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ 6, 5, 23 ಮತ್ತು 8 ರನ್ ಕಲೆ ಹಾಕಿದ್ದರು.
ರೋಹಿತ್ ಶರ್ಮಾ ಕಳೆದ 8 ತಿಂಗಳಲ್ಲಿ ಕೇವಲ 1 ಟೆಸ್ಟ್ ಶತಕ ಗಳಿಸಿದ್ದಾರೆ. ರೋಹಿತ್ ಶರ್ಮಾ 2024ರ ಮಾರ್ಚ್ 7 ರಂದು ಧರ್ಮಶಾಲಾದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದರು. ನಂತರ ರೋಹಿತ್ ಶರ್ಮಾ 10 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ 6, 5, 23, 8, 2, 52, 0, 8, 18 ಮತ್ತು 11 ರನ್ ಗಳಿಸಿದ್ದಾರೆ. ಮತ್ತೊಂದೆಡೆ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿಯೂ ರೋಹಿತ್ ಶರ್ಮಾ ಒಂದು ವರ್ಷದಿಂದ ಶತಕ ಬಾರಿಸಲಿಲ್ಲ. ರೋಹಿತ್ ಶರ್ಮಾ ತಮ್ಮ ಕೊನೆಯ 5 ಏಕದಿನ ಪಂದ್ಯಗಳಲ್ಲಿ 47, 47, 58, 64 ಮತ್ತು 35 ರನ್ ಗಳಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ರೋಹಿತ್ ಶರ್ಮಾ ತನ್ನ ಕೊನೆಯ ಏಕದಿನ ಶತಕವನ್ನು 2023ರ ವಿಶ್ವಕಪ್ ಟೂರ್ನಿಯಲ್ಲಿ ಬಾರಿಸಿದ್ದರು.
ಫಿಟ್‌ನೆಸ್ ಸಮಸ್ಯೆ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಮೊದಲಿನಂತೆ ಅಬ್ಬರಿಸುತ್ತಿಲ್ಲ. ರೋಹಿತ್ ಶರ್ಮಾ ಈಗ ರನ್ ಗಳಿಸುವ ಹಸಿವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಇದು ಅವರು ಫಿಟ್‌ನೆಸ್ ಸಮಸ್ಯೆ ಎದುರಿಸುತ್ತಿರುವುದಕ್ಕೆ ಸಣ್ಣ ಉದಾಹರಣೆ ಆಗಿದೆ. ಹೀಗಾಗಿ ಫಿಟ್‌ನೆಸ್ ಕಾರಣದಿಂದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications